AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮ ಪಂಚಾಯಿತಿ ಗೆಲ್ಲದವರು ನಮಗೆ ಮಾರ್ಗದರ್ಶನ ಮಾಡ್ತಾರೆ: ಸ್ವಪಕ್ಷದ ನಾಯಕರ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

ಈ ಹಿಂದೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ತೊರೆದ ಬಳಿಕ ಅಣ್ಣಮಲೈ ಸೇರಿದಂತೆ ಕೆಲ ಪ್ರಮುಖ ನಾಯಕರ ನಡೆ ಬಗ್ಗೆ ಬಹಿರಂಗವಾಗಿ ಟೀಕಿಸಿದ್ದರು. ಇದೀಗ ಮಾಜಿ ಶಾಸಕ ಎಂಪಿ ರಾಣುಕಾಚಾರ್ಯ ಸರದಿ.

ಗ್ರಾಮ ಪಂಚಾಯಿತಿ ಗೆಲ್ಲದವರು ನಮಗೆ ಮಾರ್ಗದರ್ಶನ ಮಾಡ್ತಾರೆ: ಸ್ವಪಕ್ಷದ ನಾಯಕರ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ
ಎಂಪಿ ರೇಣುಕಾಚಾರ್ಯ
ಕಿರಣ್​ ಹನಿಯಡ್ಕ
| Edited By: |

Updated on: Jun 29, 2023 | 2:09 PM

Share

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಸೋಲಿನ ಬಳಿಕ ಬಿಜೆಪಿಯಲ್ಲಿ(BJP) ಅಂತರ್​ಯುದ್ಧ ಶುರುವಾಗಿದೆ. ಬಿಹಿರಂಗವಾಗಿಯೇ ಬಿಜೆಪಿ ನಾಯಕರು ಪರಸ್ಪರ ಬೈದಾಡಿಕೊಳ್ಳುತ್ತಿದ್ದಾರೆ. ಅದರಂತೆ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ (MP Renukacharya) ಮತ್ತೊಂದೆಜ್ಜೆ ಮುಂದೆ ಹೋಗಿ ಸ್ವಪಕ್ಷದ ನಾಯಕರ ವಿರುದ್ಧ ಮತ್ತೆ ವಾಗ್ದಾಳಿ ಮುಂದುವರೆಸಿದ್ದಾರೆ. ಈ ಹಿಂದೆ ಜಗದೀಶ್ ಶೆಟ್ಟರ್​ ಅವರು ಪಕ್ಷ ಬಿಜೆಪಿ ತೊರೆದ ಬಳಿಕ ವಿಧಾನಸಭೆ ಚುನಾವಣೆ ಸಹ ಉಸ್ತುವಾರಿಯಾಗಿದ್ದ ಅಣ್ಣಮಲೈ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್​ ಸೇರಿದಂತೆ ಕೆಲ ನಾಯಕರ ಕಾರ್ಯವೈಖರಿ ಬಗ್ಗೆ ಬಿಚ್ಚಿಟ್ಟು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ರೇಣುಕಾಚಾರ್ಯ ಸರದಿ.

ಇದನ್ನೂ ಓದಿ: ಬಿಜೆಪಿಯಲ್ಲೇ ಭುಗಿಲೆದ್ದ ಅಂತರ್​​ಯುದ್ಧ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ನಳಿನ್ ಕುಮಾರ್ ಕಟೀಲ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

ಬೆಂಗಳೂರಿನಲ್ಲಿ ಇಂದು(ಜೂನ್ 29) ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಗ್ರಾಮ ಪಂಚಾಯಿತಿ ಗೆಲ್ಲದವರು ನಮಗೆ ಮಾರ್ಗದರ್ಶನ ಮಾಡುತ್ತಾರೆ. ಅಣ್ಣಾಮಲೈ ಬಂದು ನಮಗೆ ಮಾರ್ಗದರ್ಶನ ಕೊಡುತ್ತಾರೆ. ಅಣ್ಣಾಮಲೈ ಏನು ದೊಡ್ಡ ಹೀರೋ ನಾ? ಸೆಲ್ಯೂಟ್ ಹೊಡೆಸಿಕೊಳ್ಳುತ್ತಿದ್ದವರಿಂದ ಬೊಮ್ಮಾಯಿ ಅವರಿಗೆ ಹೇಳಿಸಿಕೊಳ್ಳುವ ಮುಜುಗರ. ಇವೆಲ್ಲಾ ನನ್ನ ಮಾತುಗಳಲ್ಲ, ಕಾರ್ಯಕರ್ತರ ಭಾವನೆಗಳು. ಮೋದಿ ಬಂದು ಹೋದ ಮೇಲೆ ಅದನ್ನು ಮತಗಳಾಗಿ ಪರಿವರ್ತನೆ ಮಾಡುವ ಮುಖಗಳು ಬೇಕಲ್ವಾ?  ಅಂತೆಲ್ಲ ಎಂದು ವಾಗ್ದಾಳಿ ನಡೆಸಿದರು.

ಸುಧಾಕರ್​ ಸೋತಾಗ ಅವರ ಮನೆಗೆ ಹೋಗಿ ಸಾಂತ್ವನ ಹೇಳಿದ್ರಿ. ಬೇರೆ ಯಾರೂ ಸೋತ ಅಭ್ಯರ್ಥಿಗಳು ಕಾಣಲಿಲ್ವಾ? 2 ಖಾತೆ ಕೊಡದಿದ್ದರೆ ಬಿಜೆಪಿ ಮುಗಿಸಿಬಿಡುತ್ತೇನೆ ಎಂದು ಬೆದರಿಕೆ. ಬಿಜೆಪಿ ಮುಗಿಸಿಬಿಡುತ್ತೇನೆ ಎಂದು ಹೇಳಿದವರ ಮನೆಗೆ ಹೋಗಿದ್ದೀರಿ ಕಾಂಗ್ರೆಸ್ ಗ್ಯಾರಂಟಿ ಕೊಡುತ್ತಾ ಹೋದರು, ನಮ್ಮವರು ಮಲಗಿದ್ದರು. ಬಿಜೆಪಿ ಪ್ರಣಾಳಿಕೆ ಜನರಿಗೆ ತಲುಪಲೇ ಇಲ್ಲ. ಸತಾಯಿಸಿ ಓಡಾಡಿಸಿ ಅಭ್ಯರ್ಥಿಗಳಿಗೆ ಬಿಜೆಪಿ ಟಿಕೆಟ್ ಕೊಟ್ಟರು. ಅಭಿಪ್ರಾಯ ಹಂಚಿಕೊಳ್ಳಲು ಶಾಸಕಾಂಗ ಸಭೆ ಕರೆಯಲೇ ಇಲ್ಲ. ಬಸವರಾಜ ಬೊಮ್ಮಾಯಿ ಅವರ ಕೈಕಟ್ಟಿ ಹಾಕಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಾಧ್ಯಕ್ಷರ ಬಗ್ಗೆ ಗೌರವ ಇದೆ, ಪ್ರವಾಸ ಮಾಡಿದರು ನಿಜ. ಆದರೆ ಮತಗಳಾಗಿ ಪರಿವರ್ತನೆ ಆಗಲಿಲ್ಲ. ಸೋಲಿನ ಬಳಿಕ ರಾಜ್ಯಾಧ್ಯಕ್ಷರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕಿತ್ತು. ವ್ಯವಸ್ಥೆ ಸರಿಪಡಿಸಿಕೊಳ್ಳಿ, ಅವಲೋಕನ ಮಾಡಿಕೊಳ್ಳಿ. ಕಾರ್ಯಕರ್ತರನ್ನು ಬೆದರಿಸುವುದು ಬಿಡಿ ಎಂದು ನಳಿನ್ ಕುಮಾರ್ ಕಟೀಲ್​ಗೆ ಸಲಹೆ ನೀಡಿದರು.

ಯಡಿಯೂರಪ್ಪ ಪರ ಮಾತಾಡಿದರೆ ಪಕ್ಷ ವಿರೋಧಿ ಚಟುವಟಿಕೆ. ಯಡಿಯೂರಪ್ಪ ವಿರುದ್ಧವಾಗಿ ಮಾತಾಡಿದರೆ ಶಹಬ್ಬಾಸ್ ಕೊಡುತ್ತಾರೆ. ಅನಿವಾರ್ಯವಾಗಿ ನಾನು ಈ ರೀತಿ ಮಾತಾಡುತ್ತಿದ್ದೇನೆ. ಸೋತವರಿಗೆ ಬಿಎಸ್​ವೈ, ವಿಜಯೇಂದ್ರ ಕರೆಮಾಡಿ ಮಾತನಾಡಿದ್ರು. ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಯಾರಿಗಾದರೂ ಕರೆ ಮಾಡಿದ್ರಾ? ಆತ್ಮಾವಲೋಕನ ಸಭೆ ಅಂತಾ ಯಾರೋ ಕರೆ ಮಾಡುತ್ತಾರೆ. ಪಕ್ಷದ ಕಚೇರಿ ಕೆಲವರು ಕಾರ್ಪೊರೇಟ್​​ ಕಚೇರಿ ಮಾಡಿಕೊಂಡಿದ್ದಾರೆ ಎಂದು ಸ್ವಪಕ್ಷದ ಪ್ರಮುಖ ನಾಯಕರಿಗೆ ಕುಟುಕಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಕಿರಣ್​ ಹನಿಯಡ್ಕ
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ