ಗಂಗಾರತಿ ಅಧ್ಯಯನಕ್ಕೆ ಅಧಿಕಾರಿಗಳ ನಿಯೋಗ: ಸರ್ಕಾರದ ವಿರುದ್ಧ ಆರ್​ ಅಶೋಕ್ ಆಕ್ರೋಶ​

ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಗಂಗಾರತಿ ಪ್ರಕ್ರಿಯೆ ಬಗ್ಗೆ ಅಧ್ಯಯನ ಮಾಡಲು ಸಚಿವ ಎನ್​. ಚಲುವರಾಯಸ್ವಾಮಿ ಅಧ್ಯಕ್ಷತೆಯ ನಿಯೋಗ ಹರಿದ್ವಾರಕ್ಕೆ ಹೋಗಿ ಬಂದಿದೆ. ಇದೀಗ ಅಧಿಕಾರಿಗಳನ್ನು ಕಳುಹಿಸಲು ಸರ್ಕಾರ ಮುಂದಾಗಿದ್ದು, ಇದಕ್ಕೆ ವಿಪಕ್ಷ ನಾಯಕ ಆರ್ ಅಶೋಕ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಂಗಾರತಿ ಅಧ್ಯಯನಕ್ಕೆ ಅಧಿಕಾರಿಗಳ ನಿಯೋಗ: ಸರ್ಕಾರದ ವಿರುದ್ಧ ಆರ್​ ಅಶೋಕ್ ಆಕ್ರೋಶ​
ಆರ್​ ಅಶೋಕ್​
Follow us
ವಿವೇಕ ಬಿರಾದಾರ
|

Updated on: Sep 23, 2024 | 11:09 AM

ಬೆಂಗಳೂರು, ಸೆಪ್ಟೆಂಬರ್​ 23: ಕೃಷಿ ಸಚಿವ ಎನ್​. ಚಲುವರಾಯಸ್ವಾಮಿ (N Chaluvarayaswamy) ಅಧ್ಯಕ್ಷತೆಯಲ್ಲಿ ಕಾವೇರಿ ಆರತಿ ಅಧ್ಯಯನ ಸಮಿತಿ ಈಗಾಗಲೆ ಹರಿದ್ವಾರಕ್ಕೆ ತೆರಳಿ ಗಂಗಾರತಿ ಪ್ರಕ್ರಿಯೆ ಬಗ್ಗೆ ಅಧ್ಯಯನ ಮಾಡಿಕೊಂಡು ಬಂದಿದೆ. ಇದೀಗ ಅಧಿಕಾರಿಗಳ ನಿಯೋಗ ಅಧ್ಯಯನಕ್ಕೆಂದು ಹರಿದ್ವಾರಕ್ಕೆ ತೆರಳು ಸಜ್ಜಾಗಿದೆ ಎಂದು ವರದಿಯಾಗಿದೆ. ಈ ವಿಚಾರವಾಗಿ ವಿಪಕ್ಷ ನಾಯಕ ಆರ್​ ಅಶೋಕ್ (R Ashok)​ ಕಾಂಗ್ರೆಸ್​ ಸರ್ಕಾರವನ್ನು (Congress Government) ತರಾಟೆಗೆ ತೆಗೆದುಕೊಂಡಿದ್ದಾರೆ.

“ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ನಡೆಸುವ ಸಲುವಾಗಿ ಮಂಡ್ಯ ಉಸ್ತುವಾರಿ ಸಚಿವ ಎನ್​ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಂಡ್ಯ, ಮೈಸೂರು ಭಾಗದ ಶಾಸಕರು, ವಿಧಾನಪರಿಷತ್‌ ಸದಸ್ಯರು, ಕಾವೇರಿ ಅಭಿವೃದ್ಧಿ ನಿಗಮದ ಹಿರಿಯ ಅಧಿಕಾರಿಗಳು ಈಗಾಗಲೇ ಮೂರು ದಿನಗಳ ಕಾಲ ಹರಿದ್ವಾರ ಹಾಗೂ ಕಾಶಿಗೆ ಭೇಟಿ ನೀಡಿ ಅಧ್ಯಯನ ನಡೆಸಿ ಬಂದಿರುವಾಗ ಈಗ ಮತ್ತೊಮ್ಮೆ ಅಧಿಕಾರಿಗಳ ನಿಯೋಗ ಕಳುಹಿಸುತ್ತಿರುವುದು ಯಾತಕ್ಕೆ?” ಎಂದು ಸಾಮಾಜಿಕ ಮಾಧ್ಯಮ ಎಕ್ಸ್​ ಮುಖಾಂತರ ಪ್ರಶ್ನಿಸಿದ್ದಾರೆ.

ಈಗ ಮತ್ತೊಮ್ಮೆ ಅಧಿಕಾರಿಗಳ ನಿಯೋಗ ಹೋಗಬೇಕು ಎನ್ನುವುದಾದರೆ ಸಚಿವರು ತಮ್ಮ ತಂಡದೊಂದಿಗೆ ಅಲ್ಲಿ ಹೋಗಿ ಮಾಡಿದ್ದಾದರೂ ಏನು? ಸರ್ಕಾರಿ ಹಣದಲ್ಲಿ ಮೋಜು-ಮಸ್ತಿ ಮಾಡಲು ಹೋಗಿದ್ದಾ? ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ದಸರಾಗೆ ಪ್ರಾಯೋಗಿಕ ಕಾವೇರಿ ಆರತಿ: ಆರತಿಗೆ ಇರುವ ಸವಾಲುಗಳೇನು?

“ಅಯೋಧ್ಯೆ ರಾಮಮಂದಿರದ ಉದ್ಘಾಟನೆ ವೇಳೆ 30 ವರ್ಷ ಹಳೆ ಕೇಸುಗಳನ್ನು ರೀ ಓಪನ್ ಮಾಡಿ ಕರಸೇವಕರನ್ನ ಜೈಲಿಗೆ ಹಾಕಿದ್ದ ಈ ಕಾಂಗ್ರೆಸ್ ಸರ್ಕಾರ, ಗಣೇಶನ ಮೂರ್ತಿಯನ್ನು ಪೊಲೀಸ್ ವ್ಯಾನ್ ಹತ್ತಿಸಿದ ಈ ಕಾಂಗ್ರೆಸ್ ಸರ್ಕಾರ, ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುದಳ್ಳುರಿಯನ್ನ ಸಣ್ಣ ಘಟನೆ, ಆಕಸ್ಮಿಕ ಘಟನೆ ಎಂದು ತಿಪ್ಪೆ ಸಾರಿಸಿದ ಕಾಂಗ್ರೆಸ್ ಸರ್ಕಾರ ಈಗ ದಿಢೀರನೆ ಹಿಂದೂ ಧರ್ಮದ ಬಗ್ಗೆ, ಹಿಂದೂಗಳ ಆಚಾರ-ವಿಚಾರದ ಬಗ್ಗೆ, ಸಂಪ್ರದಾಯ-ಪರಂಪರೆ ಬಗ್ಗೆ ಎಲ್ಲಿಲ್ಲದ ಆಸಕ್ತಿ ತೋರುವ ನಾಟಕ ಮಾಡುತ್ತಿದೆ” ಎಂದು ಆರೋಪಿಸಿದರು.

ಟ್ವಿಟರ್ ಪೋಸ್ಟ್​

ಡಿಸಿಎಂ ಡಿಕೆ ಶಿವಕುಮಾರ್​ ಅವರೇ, ನಿಮಗೆ ನಿಜವಾಗಿಯೂ ದೇಶ-ಧರ್ಮದ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ, ಮೊದಲು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಬ್ರದರ್ಸ್ ಗಳನ್ನ ಒದ್ದು ಒಳಗೆ ಹಾಕಿ, ನಾಗಮಂಗಲದಲ್ಲಿ, ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ಎಬ್ಬಿಸಿದ ಬ್ರದರ್ಸ್​ಗಳನ್ನು ಒದ್ದು ಒಳಗೆ ಹಾಕಿ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ಟೈನ್ ಧ್ವಜ ಹಿಡಿದು ಪುಂಡಾಟಿಕೆ ಮಾಡಿದ ಬ್ರದರ್ಸ್​ಗಳನ್ನ ಒದ್ದು ಒಳಗೆ ಹಾಕಿ. ಅದು ಬಿಟ್ಟು ಬರೀ ತೋರಿಕೆಗೆ ಕಾವೇರಿ ಆರತಿ ಮಾಡುವ ನಾಟಕ ಮಾಡಿದರೆ ಆ ತಾಯಿ ಕಾವೇರಿ ಮೆಚ್ಚುತ್ತಾಳಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ