ಯೋಗೇಶ್ವರ್ ಬಿಜೆಪಿ ಕಟ್ಟಾಳು ಅಲ್ಲ, ಸಿದ್ಧಾಂತದಿಂದ ಬಂದವರಲ್ಲ: ಸಿಪಿವೈ ವಿರುದ್ಧ ಅಶೋಕ್ ವಾಗ್ದಾಳಿ

ಮಾಜಿ ಸಚಿವ ಸಿಪಿ ಯೋಗೇಶ್ವರ್​ ಬಿಜೆಪಿ ತೊರೆದು ಕಾಂಗ್ರೆಸ್​ ಸೇರ್ಪಡೆಯಾಗಿದ್ದಾರೆ. ಇಂದು (ಅ.24) ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸೇರ್ಪಡೆಯಾದರು. ಸಿಪಿ ಯೋಗೇಶ್ವರ್​ ಕಾಂಗ್ರೆಸ್​ ಸೇರ್ಪಡೆಗೆ ವಿರೋಧ ಪಕ್ಷದ ನಾಯಕ ಆರ್​ ಅಶೋಕ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯೋಗೇಶ್ವರ್ ಬಿಜೆಪಿ ಕಟ್ಟಾಳು ಅಲ್ಲ, ಸಿದ್ಧಾಂತದಿಂದ ಬಂದವರಲ್ಲ: ಸಿಪಿವೈ ವಿರುದ್ಧ ಅಶೋಕ್ ವಾಗ್ದಾಳಿ
ಆರ್​​ ಅಶೋಕ್​
Follow us
TV9 Web
| Updated By: ವಿವೇಕ ಬಿರಾದಾರ

Updated on:Oct 23, 2024 | 12:34 PM

ಬೆಂಗಳೂರು, ಅಕ್ಟೋಬರ್​ 23: ಮಾಜಿ ಸಚಿವ ಸಿಪಿ ಯೋಗೇಶ್ವರ್​ (CP Yogeshwar) ಬಿಜೆಪಿ (BJP) ತೊರೆದು ಕಾಂಗ್ರೆಸ್ (Congress)​ ಸೇರ್ಪಡೆಯಾಗಿದ್ದಾರೆ. ಸಿಪಿ ಯೋಗೇಶ್ವರ್ ಮೊದಲಿಂದಲೂ ಎಲ್ಲ ಪಕ್ಷಗಳ ಜೊತೆ ಲಿಂಕ್ ಇಟ್ಟಿಕೊಂಡವರು. ಕಾಟಾಚಾರಕ್ಕೆ ನಮ್ಮೊಂದಿಗೆ ಇದ್ದರು ಅನ್ನಿಸುತ್ತೆ ಎಂದು ವಿರೋಧ ಪಕ್ಷದ ನಾಯಕ ಆರ್​ ಅಶೋಕ್ (R Ashok)​ ವಾಗ್ದಾಳಿ ಮಾಡಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಸಿಪಿ ಯೋಗೇಶ್ವರ್ ಬಿಜೆಪಿಯ ಕಟ್ಟಾಳು ಅಲ್ಲ ಎಂದರು.

ಸಿಪಿ ಯೋಗೇಶ್ವರ್​ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ಮಾಡಿದ್ವಿ. ನಮ್ಮ ನಂಬಿಕೆಗೆ ಅಪಚಾರ ಮಾಡಿ ಹೋಗಿ ಹೋಗಿದ್ದಾರೆ. ಕಾಂಗ್ರೆಸ್​ಗೆ ಪಕ್ಷ ಸೇರಿ ಸಿಪಿ ಯೋಗೇಶ್ವರ್ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ. ಅವರು ಕಾಂಗ್ರೆಸ್​ ಸೇರಿದ್ದು, ನಮ್ಮ ಪಕ್ಷದ ಮೇಲೆ ಯಾವುದೇ ರೀತಿಯ ಪರಿಣಾಮ ಆಗುವುದಿಲ್ಲ. ಪಕ್ಷ ತೊರೆದು ಬಹಳಷ್ಟು ಜನ ಹೋಗಿದ್ದಾರೆ. ಲಕ್ಷಣ್ ಸವದಿ ಕಾಂಗ್ರೆಸ್​ ಸೇರಿದ್ದಾರೆ. ಅವರನ್ನು ಮಂತ್ರಿ ಮಾಡಿದ್ದಾರಾ? ಜಗದೀಶ್ ಶೆಟ್ಟರ್ ಅವರು ಹೋಗದಿದ್ದರು, ಯಾವ ಸ್ಥಾನ ಕೊಟ್ಟಿದ್ದರು? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಸಿಪಿ ಯೋಗೇಶ್ವರ್​​ ಕಾಂಗ್ರೆಸ್​ ಸೇರ್ಪಡೆ: ಸಿಎಂ, ಡಿಕೆ ಬ್ರದರ್ಸ್​ ತಂತ್ರ ಸಕ್ಸಸ್!

ಸಿಪಿ ಯೋಗೇಶ್ವರ್​ ಸೈಕಲ್ ಗುರುತು, ಬಿಎಸ್​ಪಿ ಎಲ್ಲ ಮುಗಿಸಿಕೊಂಡು ನಮ್ಮ ಪಕ್ಷಕ್ಕೆ ಬಂದವರು. ಅವರು ಸೈದ್ಧಾಂತಿಕವಾಗಿ ನಮ್ಮ ಪಕ್ಷದಲ್ಲಿ ಇದ್ದವರಲ್ಲ. ಚನ್ನಪಟ್ಟಣದಲ್ಲಿ ಬಿಜೆಪಿ ವೋಟ್ ಅಲ್ಲೇ ಇರುತ್ತೆ. ನಾನು, ಪ್ರಹ್ಲಾದ್ ಜೋಶಿ ಅವರು ಜೆಡಿಎಸ್ ಟಿಕೆಟ್ ಅಂತ ಸಿಪಿ ಯೋಗೇಶ್ವರ್​ ಅವರಿಗೆ ಹೇಳಿದ್ವಿ. ಹೆಚ್​ಡಿ ಕುಮಾರಸ್ವಾಮಿ ಅವರು ಜೆಡಿಎಸ್ ಚಿಹ್ನೆಯಿಂದ ಸ್ಪರ್ಧಿಸಿ ಎಂದು ಹೇಳಿದ್ದರು. ಆದರೆ, ಸಿಪಿ ಯೋಗೇಶ್ವರ್​ ಒಪ್ಪಲಿಲ್ಲ ಎಂದು ತಿಳಿಸಿದರು.

ಇವರು ಈಗ ಕಾಂಗ್ರೆಸ್​ಗೆ ಹೋಗಿದ್ದಾರೆ, ಇದು ಪಕ್ಷಕ್ಕೆ ದ್ರೋಹ ಬಗೆದಂತೆ. ರಾಜ್ಯದ ಎಲ್ಲ ಬಿಜೆಪಿ ನಾಯಕರು ಅವರ ಪರವಾಗಿ ಇದ್ದೆವುಟಿಕೆಟ್ ಕೊಡಿಸುವ ಸಲುವಾಗಿ ಪ್ರಯತ್ನ ಮಾಡಿದ್ವಿ. ಬಿಜೆಪಿ ಚಿಹ್ನೆ, ಜೆಡಿಎಸ್ ಚಿಹ್ನೆ ಅಂತಲ್ಲ. ಎನ್​ಡಿಎ ಗೆಲ್ಲುವುದು ಮುಖ್ಯ. ಎನ್‌ಡಿಎನಲ್ಲಿ ಅವರಿಗೆ ಸೀನಿಯಾರಿಟಿ ಇತ್ತು. ಈಗ ಹೋಗಿ ಲಾಸ್ಟ್​​ನಲ್ಲಿ ಕೂತಿದ್ದಾರೆ ಎಂದು ವಾಗ್ದಾಳಿ ಮಾಡಿದರು.

ಎನ್​ಡಿಎಗೆ ಮುಖಭಂಗ ಮಾಡುವ ಉದ್ದೇಶ ಕಾಂಗ್ರೆಸ್​ಗೆ ಇದೆ. ಜೆಡಿಎಸ್​ನವರು ಯಾರಿಗೆ ಟಿಕೆಟ್ ಕೊಟ್ಟರು ನಾವು ಗೆಲ್ಲಿಸುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:30 pm, Wed, 23 October 24

‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?
ಲಕ್ಷ್ಮಿದೇವಿ ಸಮುದಾಯ ಭವನ ಉದ್ಘಾಟಿಸಿದ ಸಿದ್ದರಾಮಯ್ಯ
ಲಕ್ಷ್ಮಿದೇವಿ ಸಮುದಾಯ ಭವನ ಉದ್ಘಾಟಿಸಿದ ಸಿದ್ದರಾಮಯ್ಯ
"ಇಸ್ಪೀಟ್ ಆಟ ಆಡಲೇಬೇಕಾ ಸರ್​"? ಪೊಲೀಸರಿಗೆ ಮಕ್ಕಳ ಪ್ರಶ್ನೆ
ಫೆಂಗಲ್ ಪರಿಣಾಮ: ಟೊಮೆಟೋಗೆ ಭಾರಿ ಬೇಡಿಕೆ, ದರವೂ ಹೆಚ್ಚಳ
ಫೆಂಗಲ್ ಪರಿಣಾಮ: ಟೊಮೆಟೋಗೆ ಭಾರಿ ಬೇಡಿಕೆ, ದರವೂ ಹೆಚ್ಚಳ
ರಜತ್ ಆಯ್ತು ಈಗ ತ್ರಿವಿಕ್ರಂಗೆ ತಲೆ ಬೋಳಿಸೋ ಚಾಲೆಂಜ್; ಒಪ್ಪಿದ್ರಾ?
ರಜತ್ ಆಯ್ತು ಈಗ ತ್ರಿವಿಕ್ರಂಗೆ ತಲೆ ಬೋಳಿಸೋ ಚಾಲೆಂಜ್; ಒಪ್ಪಿದ್ರಾ?