ಎಲ್ಲವೂ ಸುಖಾಂತ್ಯವಾಗಿದೆ, ಮುಂದಿನ ನಡೆಯ ಬಗ್ಗೆ ಸೋಮಣ್ಣ ಕೊಟ್ಟ ಸುಳಿವೇನು?

ನಾನು ರಾಜ್ಯಸಭೆ ಸ್ಥಾನ ಕೇಳಿದ್ದೇನೆ. ಜತೆಗೆ ನನಗೆ 3 ಕಷ್ಟದ ಲೋಕಸಭಾ ಕ್ಷೇತ್ರ ಕೊಡಿ. ಯಾವುದೇ 3 ಕ್ಷೇತ್ರಗಳನ್ನು ಕೊಟ್ಟರೂ ಗಲ್ಲಿಸಿಕೊಂಡು ಬರುತ್ತೇನೆ. 28 ಕ್ಷೇತ್ರಗಳ ಪೈಕಿ 3 ಕ್ಷೇತ್ರ ವಹಿಸಿದರೆ ಕೆಲಸ ಮಾಡುತ್ತೇನೆ. ಪಕ್ಷದಲ್ಲಿ ನನ್ನ ಶ್ರಮ ಇದೆ ಎಂದು ಸೋಮಣ್ಣ ಹೇಳಿದ್ದಾರೆ.

ಎಲ್ಲವೂ ಸುಖಾಂತ್ಯವಾಗಿದೆ, ಮುಂದಿನ ನಡೆಯ ಬಗ್ಗೆ ಸೋಮಣ್ಣ ಕೊಟ್ಟ ಸುಳಿವೇನು?
ವಿ ಸೋಮಣ್ಣ
Follow us
| Updated By: ಗಣಪತಿ ಶರ್ಮ

Updated on: Jan 15, 2024 | 11:47 AM

ಬೆಂಗಳೂರು, ಜನವರಿ 15: ಬಿಜೆಪಿ ಹೈಕಮಾಂಡ್ ಜತೆ ಶನಿವಾರವಷ್ಟೇ ಮಾತುಕತೆ ನಡೆಸಿ ಬಂದಿರುವ ಹಿರಿಯ ನಾಯಕ ವಿ ಸೋಮಣ್ಣ (V Somanna), ಇದೀಗ ಭೇಟಿ ಬಗ್ಗೆ ಮಾಹಿತಿ ನೀಡಿದ್ದು ಎಲ್ಲವೂ ಸುಖಾಂತ್ಯವಾಗಿದೆ ಎಂದು ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಮಾಡಿದ ವಿಚಾರವಾಗಿ ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಸೋಮಣ್ಣ, ಒಳ್ಳೇತನಕ್ಕೆ, ಒಳ್ಳೇ ನಡವಳಿಕೆಗೆ ಸಹಾಯ ಆಗುತ್ತದೆ. ಅದಕ್ಕೆ ದೆಹಲಿ ಭೇಟಿಯೇ ಒಂದು ಉದಾಹರಣೆ. ಅಮಿತ್​ ಶಾ ನಡವಳಿಕೆ, ಅವರ ತೀರ್ಮಾನ, ಭಾವನೆ ಸಕಾರಾತ್ಮಕವಾಗಿಯೇ ಇತ್ತು. ಎಲ್ಲವೂ ಸುಖಾಂತ್ಯವಾಗಿದೆ ಎಂದು ಹೇಳಿದ್ದಾರೆ.

ಕೆಲಸ ಮಾಡಿ ಬಳಿಕ ಮುಂದಿನದ್ದನ್ನ ಚರ್ಚೆ ಮಾಡುತ್ತೇವೆ. ನಾನು ರಾಜ್ಯಸಭೆ ಸ್ಥಾನ ಕೇಳಿದ್ದೇನೆ. ಜತೆಗೆ ನನಗೆ 3 ಕಷ್ಟದ ಲೋಕಸಭಾ ಕ್ಷೇತ್ರ ಕೊಡಿ. ಯಾವುದೇ 3 ಕ್ಷೇತ್ರಗಳನ್ನು ಕೊಟ್ಟರೂ ಗಲ್ಲಿಸಿಕೊಂಡು ಬರುತ್ತೇನೆ. 28 ಕ್ಷೇತ್ರಗಳ ಪೈಕಿ 3 ಕ್ಷೇತ್ರ ವಹಿಸಿದರೆ ಕೆಲಸ ಮಾಡುತ್ತೇನೆ. ಪಕ್ಷದಲ್ಲಿ ನನ್ನ ಶ್ರಮ ಇದೆ ಎಂದು ಸೋಮಣ್ಣ ಹೇಳಿದ್ದಾರೆ.

ಬಿಜೆಪಿ ಉತ್ತರ ಕನ್ನಡ ಸಂಸದ ಅನಂತಕುಮಾರ್​ ಹೆಗಡೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಸಂಸದ​ ಹೆಗಡೆ ಸುಸಂಸ್ಕೃತ ಕುಟುಂಬದಿಂದ ಬಂದವರು. ನಮ್ಮ ನಡವಳಿಕೆಗಳು ವಿಭಿನ್ನವಾಗಿರಬೇಕು. ಸಿಎಂ ಸಿದ್ದರಾಮಯ್ಯ ಹೇಗಾದರೂ ಮಾತಾಡಲಿ, ನಮಗೆ ಬೇಡ. ಅನಂತಕುಮಾರ್ ಹೆಗಡೆ ಸಂಸದರಾಗಿದ್ದಾರೆ ಎಂದಷ್ಟೇ ಹೇಳಿದ್ದಾರೆ.

ಇದನ್ನೂ ಓದಿ: ಅಮಿತ್ ಶಾ ಭೇಟಿಯಾದ ವಿ ಸೋಮಣ್ಣ: ಏನೇನು ನಡೆಯಿತು ಚರ್ಚೆ?

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅನಿವಾರ್ಯವಾಗಿ ಒಪ್ಪಿಕೊಂಡು ಸೋತ ನಂತರ ಸೋಮಣ್ಣ ಪಕ್ಷದ ರಾಜ್ಯ ನಾಯಕರ ವಿರುದ್ಧ ಸಿಡಿದೆದ್ದಿದ್ದರು. ಹಲವು ನಾಯಕರ ವಿರುದ್ಧ ಬಹಿರಂಗ ಟೀಕೆಗಳನ್ನೂ ಮಾಡಿದ್ದರು. ಅವರು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂಬ ವದಂತಿಗಳೂ ಹಬ್ಬಿದ್ದವು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಅವರು ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ವಿವಿಧ ವಿಚಾರಗಳ ಬಗ್ಗೆ ಚರ್ಚಿಸಿರುವುದು ಕುತೂಹಲ ಮೂಡಿಸಿತ್ತು. ಇದೀಗ ಅವರು ಆ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು