ಬಿಜೆಪಿ ಮುಖಂಡ ಯೋಗೀಶ್ ಗೌಡ ಬರ್ಬರ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಧಾರವಾಡ ಎಂಟ್ರಿಗೆ ಅನುಮತಿ ನಿರಾಕರಿಸಿದ ಸುಪ್ರೀಂ

ಬಿಜೆಪಿ ಮುಖಂಡ ಯೋಗೀಶ್ ಗೌಡ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಧಾರವಾಡ ಪ್ರವೇಶ ಅನುಮತಿಯನ್ನು ಸುಪ್ರೀಂಕೋರ್ಟ್​ ನಿರಾಕರಿಸಿದೆ.

ಬಿಜೆಪಿ ಮುಖಂಡ ಯೋಗೀಶ್ ಗೌಡ ಬರ್ಬರ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಧಾರವಾಡ ಎಂಟ್ರಿಗೆ ಅನುಮತಿ ನಿರಾಕರಿಸಿದ ಸುಪ್ರೀಂ
ವಿನಯ್ ಕುಲಕರ್ಣಿImage Credit source: economictimes
Follow us
|

Updated on:Mar 29, 2023 | 11:06 PM

ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಬರ್ಬರ ಕೊಲೆ ಪ್ರಕರಣಕ್ಕೆ (Yogesh Gowda’s brutal murder case) ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಧಾರವಾಡ ಪ್ರವೇಶ ಅನುಮತಿಯನ್ನು ಸುಪ್ರೀಂಕೋರ್ಟ್​ ನಿರಾಕರಿಸಿದೆ. ಧಾರವಾಡ ಭೇಟಿ ನಿರ್ಬಂಧ ಷರತ್ತು ಸಡಿಲಿಕೆ ಕೋರಿ ಅರ್ಜಿ ಸಲ್ಲಿಸಿದ್ದರು. 1200 ಹಸುಗಳಿವೆ, 2400 ಮೇಕೆಗಳ ನಿರ್ವಹಣೆ ಮಾಡಬೇಕು. ಪತ್ನಿ, ಮಕ್ಕಳಿಂದ ಸೂಕ್ತ ನಿರ್ವಹಣೆ ಸಾಧ್ಯವಿಲ್ಲ. ವಿಧಾನಸಭೆ ಚುನಾವಣೆ ಇರುವುದರಿಂದ ಕಾರ್ಯಕರ್ತರು ಬೇಸರಗೊಂಡಿದ್ದಾರೆ. ಹೀಗಾಗಿ ಧಾರವಾಡ ಭೇಟಿಗೆ ಅನುಮತಿ ನೀಡುವಂತೆ ಕೋರಿದ್ದರು. ಆದರೆ ಜಾಮೀನು ಷರತ್ತು ಸಡಿಲಿಕೆಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ. ಜಾಮೀನು ನೀಡುವ ವೇಳೆ ವಾರಕ್ಕೆರಡು ಬಾರಿ ಸಿಬಿಐ ಕಚೇರಿಗೆ ಹಾಜರಾಗಬೇಕೆಂಬ ಷರತ್ತು ಸಡಿಲಿಸಲೂ ಮನವಿ ಮಾಡಿದ್ದು, ವಾರಕ್ಕೊಮ್ಮೆ ಮಾತ್ರ ಸಿಬಿಐ ಕಚೇರಿಗೆ ಹಾಜರಾಗಲು ಸುಪ್ರೀಂ ಸೂಚನೆ ನೀಡಿದೆ. ಧಾರವಾಡದಲ್ಲೇ ಚುನಾವಣೆಗೆ ಸ್ಪರ್ಧಿಸಲು ವಿನಯ್ ಕುಲಕರ್ಣಿ ಕಸರತ್ತು ನಡೆಸಿದ್ದಾರೆ ಎನ್ನಲಾಗುತ್ತಿದೆ.

ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ: ವಿನಯ್ ಕುಲಕರ್ಣಿ

ಮಾರ್ಚ್​ 20ರಂದು ಬೆಳಗಾವಿಯಲ್ಲಿ ಮಾತನಾಡಿದ್ದ ವಿನಯ್ ಕುಲಕರ್ಣಿ, ಧಾರವಾಡಕ್ಕೆ ಹೋಗುವುದಕ್ಕೆ ನನಗೆ ಕೋರ್ಟ್ ನಿರ್ಬಂಧ ಇದೆ. ನಾನು ಶಿಗ್ಗಾಂವಿಯಲ್ಲಿ ಸ್ಪರ್ಧಿಸುವ ಬಗ್ಗೆ ಪಕ್ಷ ತೀರ್ಮಾನಿಸಲಿದೆ. ಶಿಗ್ಗಾಂವಿ ಒಂದೇ ಅಲ್ಲ, ನನಗೆ ಇನ್ನೂ ನಾಲ್ಕೈದು ಕ್ಷೇತ್ರಗಳಿವೆ. ದೇಶದಲ್ಲಿ ಪ್ರಜಾಪ್ರಭುತ್ವ ಕಗ್ಗೊಲೆಯಾಗಿರುವುದಕ್ಕೆ ನಾನು ಸಾಕ್ಷಿ. ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ ಎಂದಿದ್ದರು.

ಇದನ್ನೂ ಓದಿ: ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿ ವಿರುದ್ಧ ಅಖಾಡಕ್ಕಿಳಿಯುವ ಬಗ್ಗೆ ವಿನಯ್​ ಕುಲಕರ್ಣಿ ಹೇಳಿದ್ದಿಷ್ಟು…

ನಾನು ಟೆರರಿಸ್ಟ್ ಅಲ್ಲ

ನಾನು ಶಿಗ್ಗಾಂವಿ ಹೋಗುವುದು ನನ್ನ ತೀರ್ಮಾನ ಅಲ್ಲ. ಇದು ಹೈಕಮಾಂಡ್​ ತೀರ್ಮಾನ. ಯಾಕಂದ್ರೆ ನಾನು ಧಾರವಾಡಕ್ಕೆ ಹೋಗೋಕೆ ಆಗುತ್ತಿಲ್ಲ. ನಾನು ಟೆರರಿಸ್ಟ್ ಅಲ್ಲ. ನಾನು ಕಳೆದ 20 ವರ್ಷದಿಂದ ರಾಜಕಾರಣದಲ್ಲಿ ಇದ್ದೇನೆ. ನಾಲ್ಕೈದು ಕ್ಷೇತ್ರದಲ್ಲಿ ನಿಂತರೂ ನಾನು ಗೆಲ್ಲುತ್ತೇನೆ. ಪಕ್ಷ ನನಗೆ ನಿಲ್ಲಬೇಡ ಅಂದ್ರೆ ನಾನು ತ್ಯಾಗ ಮಾಡುತ್ತೇನೆ. ನೋಡುತ್ತೀರಿ ಇನ್ನೂ ನನ್ನ ವಿರುದ್ದ ಷಡ್ಯಂತ್ರ ಆರಂಭವಾಗತ್ತೆ ಎಂದು ಹೇಳಿದ್ದರು.

ಸಿದ್ದರಾಮಯ್ಯ ಲೆವೆಲ್​ಗೆ ರಾಜ್ಯದಲ್ಲಿ ಯಾರೂ ಸರಿಸಾಟಿ ಇಲ್ಲ

ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಪ್ರತಿಕ್ರಿಯಿಸಿದ ವಿನಯ್ ಕುಲಕರ್ಣಿ, ಸಿದ್ದರಾಮಯ್ಯ ಲೆವೆಲ್​ಗೆ ರಾಜ್ಯದಲ್ಲಿ ಯಾರೂ ಸರಿಸಾಟಿ ಇಲ್ಲ. ಸಿದ್ದರಾಮಯ್ಯರನ್ನು ಕೇವಲ ಒಂದು ಕ್ಷೇತ್ರಕ್ಕೆ ಸೀಮಿತ ಮಾಡಬೇಡಿ. ನಾವು ಕೂಡ ಸಿದ್ದರಾಮಯ್ಯರನ್ನು ಕ್ಷೇತ್ರಕ್ಕೆ ಆಹ್ವಾನಿಸಿದ್ದೇವೆ. ಯಾವ ಸಿಎಂ ನೀಡದ ಕೊಡುಗೆಯನ್ನು ಸಿದ್ದರಾಮಯ್ಯ ‌ಕೊಟ್ಟಿದ್ದಾರೆ. ಸಿದ್ದರಾಮಯ್ಯ ‌ಕೊಟ್ಟ ಕೊಡುಗೆ ಯಾರಿಂದಲೂ ಕೊಡಲು ಸಾಧ್ಯವಿಲ್ಲ. ಈ ಹಿಂದೆ ಯಾರೂ ಕೊಟ್ಟಿಲ್ಲ ಮುಂದೆ ಯಾರೂ ಕೊಡುವುದಿಲ್ಲ ಎಂದು -ವಿನಯ್ ಕುಲಕರ್ಣಿ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದರು.

ಇದನ್ನೂ ಓದಿ: ಬಿಜೆಪಿಯಲ್ಲಿ ಕೂಡ ಯಾರೂ 2 ಕ್ಷೇತ್ರದಿಂದ ಸ್ಪರ್ಧಿಸಲ್ಲ: ಕಮಲ ನಾಯಕರಿಗೆ ಪ್ರಹ್ಲಾದ್​ ಜೋಶಿ ಶಾಕ್​​

ಶಿಗ್ಗಾಂವಿ ಟಿಕೆಟ್​​ ಕೇಳಿಲ್ಲ, ಧಾರವಾಡ ಟಿಕೆಟ್​​​ ಕೇಳಿದ್ದೇನೆ

ಶಿಗ್ಗಾಂವಿ ಕ್ಷೇತ್ರದಲ್ಲಿ ವಿನಯ್ ಕುಲಕರ್ಣಿ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿ ಶಿಗ್ಗಾಂವಿ ಟಿಕೆಟ್​​ ಕೇಳಿಲ್ಲ, ಧಾರವಾಡ ಟಿಕೆಟ್​​​ ಕೇಳಿದ್ದೇನೆ ಎಂದು ಇತ್ತೀಚೆಗೆ ಕುಲಕರ್ಣಿ ತಿಳಿಸಿದ್ದರು. ನಮ್ಮ ಪಕ್ಷದ ಮುಖಂಡರು ಏನೂ ಮಾಡ್ತಾರೋ ನೋಡೋಣ. ಪಕ್ಷದ ನಿರ್ಣಯ ನೋಡೋಣ, 7-8 ಜನ ಆಕಾಂಕ್ಷಿಗಳಿದ್ದಾರೆ. ಪಾಪ ಅವರ ಮನಸ್ಸಿಗೆ ನಾನು ನೋವು ಮಾಡಲು ಸಿದ್ಧವಿಲ್ಲ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:05 pm, Wed, 29 March 23

ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ