ರಾಮನಗರ: ವಿಭೂತಿಕೆರೆಯಲ್ಲಿ ಬರ ಅಧ್ಯಯನದ ವೇಳೆ ಜಗಳ ಮಾಡಿಕೊಂಡ ಬಿಜೆಪಿ ನಾಯಕರು

ರಾಮನಗರ ತಾಲೂಕಿನ ವಿಭೂತಿಕೆರೆ ಗ್ರಾಮದಲ್ಲಿ ಬರ ಅಧ್ಯಯನದ ವೇಳೆ ಬಿಜೆಪಿ ಎಂಎಲ್​ಸಿ ಆ.ದೇವೇಗೌಡ ಹಾಗೂ ಚನ್ನಪಟ್ಟಣ ತಾಲೂಕು ಘಟಕದ ಅಧ್ಯಕ್ಷ ಜಯರಾಂ ನಡುವೆ ವೈಯಕ್ತಿಯ ವಿಚಾರವಾಗಿ ಪರಸ್ಪರ ಜಗಳ ಮಾಡಿಕೊಂಡಿದ್ದಾರೆ. ಮಾಜಿ ಸಚಿವ ಕೋಟಾ ಶ್ರೀನಿವಾಸಪೂಜಾರಿ ಎದುರೇ ನಾಯಕರು ಬೈದಾಡಿಕೊಂಡಿದ್ದಾರೆ.

ರಾಮನಗರ, ನ.9: ತಾಲೂಕಿನ ವಿಭೂತಿಕೆರೆ ಗ್ರಾಮದಲ್ಲಿ ಬರ ಅಧ್ಯಯನದ ವೇಳೆ ಬಿಜೆಪಿ ಎಂಎಲ್​ಸಿ ಆ.ದೇವೇಗೌಡ (A.Devegowda) ಹಾಗೂ ಚನ್ನಪಟ್ಟಣ ತಾಲೂಕು ಘಟಕದ ಅಧ್ಯಕ್ಷ ಕಲಗೆರೆ ಜಯರಾಂ (Kalagere Jayaram) ನಡುವೆ ವೈಯಕ್ತಿಯ ವಿಚಾರವಾಗಿ ಪರಸ್ಪರ ಜಗಳ ಮಾಡಿಕೊಂಡಿದ್ದಾರೆ. ಮಾಜಿ ಸಚಿವ ಕೋಟ ಶ್ರೀನಿವಾಸಪೂಜಾರಿ (Kota Srinivas Poojary) ಎದುರೇ ನಾಯಕರು ಬೈದಾಡಿಕೊಂಡಿದ್ದಾರೆ.

ವೈಯಕ್ತಿಕ ವಿಚಾರವಾಗಿ ಆ.ದೇವೇಗೌಡ ಮತ್ತ ಜಯರಾಂ ನಡುವೆ ಗಲಾಟೆ ನಡೆದಿದೆ. ಈ ವೇಳೆ ದೇವೇಗೌಡ ಅವರು ಜಯರಾಂ ಅವರ ಕಪಾಲಕ್ಕೆ ಬಾರಿಸಿದ್ದಾರೆ. ಕೂಡಲೇ ಮಧ್ಯಪ್ರವೇಶಿಸಿದ ಪೊಲೀಸರು ಹಾಗೂ ಸ್ಥಳೀಯ ಬಿಜೆಪಿ ನಾಯಕರು ಜಗಳ ಬಿಡಿಸಿದರು. ಅಲ್ಲದೆ, ದೇವೇಗೌಡರ ವಿರುದ್ಧ ಪಕ್ಷಕ್ಕೆ ದೂರು ಕೊಡಲು ಜಯರಾಂ ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಡಿಕೆ ಶಿವಕುಮಾರ್​ ಭೇಟಿ ಹಿಂದಿನ ಕಾರಣ ಬಿಚ್ಚಿಟ್ಟ ಬಿಜೆಪಿ ಸಂಸದ ತೇಜಸ್ವಿ ಸೂರ್ಯ

ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿದ ಜಯರಾಂ, ನಾನು ಅವರಿಗಾಗಿ ದುಡಿಮೆ ಮಾಡಿದ್ದೇನೆ. ಅವರ ಚುನಾವಣೆಯಲ್ಲಿ ಅವರಿಗೆ ಮತಹಾಕಿಸಿದ್ದೇನೆ. ಆದರೆ ಅವರು ಇವತ್ತು ನನ್ನ ಕಪಾಲಕ್ಕೆ ಹೊಡೆದರು. ಎಂಎಲ್​ಸಿ ಚುನಾವಣೆ ವಿಚಾರವಾಗಿ ಮಾತನಾಡುತ್ತ ಹೊಡೆದರು. ಇದು ನನಗೆ ಬಹಳ ದುಃಖವಾಗಿದೆ ಎಂದರು.

ನಾನು ಈ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷರಿಗೆ ದೂರು ಕೊಡುತ್ತೇನೆ. ನಾನು 30 ವರ್ಷದಿಂದ ಪಕ್ಷಕ್ಕೆ ದುಡಿಮೆ ಮಾಡಿದ್ದೇನೆ. ಆದರೆ ಇಂತಹ ಕೃತ್ಯ ಮುಂದೆ ಯಾರಿಗೂ ಆಗಬಾರದು. ಅವರಿಗೆ ಪಕ್ಷದಲ್ಲಿ ಯಾವ ರೀತಿ ತೊಂದರೆ ಆಗುತ್ತಿದೆಯೋ ಗೊತ್ತಿಲ್ಲ. ಈ ರೀತಿ ನಡೆದುಕೊಂಡದ್ದು ತಪ್ಪು ಹೇಳಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Loading...
Unable to load recommendations.
Follow Us