Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ, ಕೇಂದ್ರ ಸಚಿವ ಸ್ಥಾನದಿಂದ ವಜಾಗೊಂಡ ನಾಯಕರಿಗೆ ಹೊಸ ಜವಾಬ್ದಾರಿ ನೀಡಿದ ಬಿಜೆಪಿ ಹೈಕಮಾಂಡ್

ಗುಜರಾತ್ ಮತ್ತು ತ್ರಿಪುರಾದ ಮಾಜಿ ಮುಖ್ಯಮಂತ್ರಿಗಳಾದ ವಿಜಯ್ ರೂಪಾನಿ ಮತ್ತು ಬಿಪ್ಲಬ್ ದೇಬ್ ಮತ್ತು ಇಬ್ಬರು ಮಾಜಿ ಕೇಂದ್ರ ಸಚಿವರು ಮುಂದಿನ ಚುನಾವಣೆಗೆ ತಯಾರಿಯ ಹಿನ್ನೆಲೆಯಲ್ಲಿ ಬೇರೆ ರಾಜ್ಯಗಳಲ್ಲಿ ಪ್ರಮುಖ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

ಮುಖ್ಯಮಂತ್ರಿ, ಕೇಂದ್ರ ಸಚಿವ ಸ್ಥಾನದಿಂದ ವಜಾಗೊಂಡ ನಾಯಕರಿಗೆ ಹೊಸ ಜವಾಬ್ದಾರಿ ನೀಡಿದ ಬಿಜೆಪಿ ಹೈಕಮಾಂಡ್
ಜೆಪಿ ನಡ್ಡಾ, ನರೇಂದ್ರ ಮೋದಿ, ಅಮಿತ್ ಶಾ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Sep 10, 2022 | 11:18 AM

ನವದೆಹಲಿ: ರಾಜ್ಯ ಚುನಾವಣೆಗಳು ಮತ್ತು 2024ರ ರಾಷ್ಟ್ರೀಯ ಚುನಾವಣೆಯ ಮೇಲೆ ಗಮನವನ್ನು ಕೇಂದ್ರೀಕರಿಸಿರುವ ಬಿಜೆಪಿ (BJP) ಇಂದು ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವ ಸ್ಥಾನದಿಂದ ವಜಾಗೊಂಡ ನಾಯಕರಿಗೆ ಹೊಸ ಜವಾಬ್ದಾರಿಗಳನ್ನು ಪ್ರಕಟಿಸಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ (JP Nadda) ಈ ಕುರಿತು ಆದೇಶ ಹೊರಡಿಸಿದ್ದು, ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಪಂಜಾಬ್ ಮತ್ತು ಚಂಡೀಗಢದ ಚುನಾವಣಾ ಉಸ್ತುವಾರಿಯನ್ನು ನಿಭಾಯಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ಆಡಳಿತದಲ್ಲಿರುವ ಪಂಜಾಬ್​ನತ್ತ ಬಿಜೆಪಿ ಹೆಚ್ಚು ಆದ್ಯತೆ ನೀಡುತ್ತಿದೆ. ಈ ವರ್ಷದ ಆರಂಭದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಂಜಾಬ್​ನಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನಗಳನ್ನು ಪಡೆಯಲು ಸಾಧ್ಯವಾಗಲಿಲ್ಲ. ಹರಿಯಾಣದ ಉಸ್ತುವಾರಿಯನ್ನು ತ್ರಿಪುರಾದ ಮಾಜಿ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ವಹಿಸಿಕೊಳ್ಳಲಿದ್ದಾರೆ. ಬಿಜೆಪಿ ಪಕ್ಷವು ಇಲ್ಲಿ ಅಧಿಕಾರವನ್ನು ಉಳಿಸಿಕೊಂಡಿದೆ. ಇಲ್ಲಿ ಮುಂದಿನ ವಿಧಾನಸಭಾ ಚುನಾವಣೆಗಳು 2024ರಲ್ಲಿ ನಡೆಯಲಿವೆ.

ಕೇಂದ್ರ ಸರ್ಕಾರದ ಮಾಜಿ ಸಚಿವರಿಗೆ ಸಂಬಂಧಿಸಿದಂತೆ ಪ್ರಕಾಶ್ ಜಾವಡೇಕರ್ ಕೇರಳದ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಕೇರಳದಲ್ಲಿ ಬಿಜೆಪಿ ತನ್ನ ಸ್ಥಾನವನ್ನು ಪಡೆಯಲು ಹೆಣಗಾಡುತ್ತಿದೆ. ಮಹೇಶ್ ಶರ್ಮಾ ತ್ರಿಪುರಾದ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ತ್ರಿಪುರಾದಲ್ಲೂ ಬಿಜೆಪಿ ಅಧಿಕಾರದಲ್ಲಿದೆ. ಆದರೆ, ಮುಂದಿನ ವರ್ಷದ ಆರಂಭದಲ್ಲಿ ತ್ರಿಪುರಾದಲ್ಲಿ ಚುನಾವಣೆ ನಡೆಯಲಿದೆ. ಕಳೆದ ವರ್ಷ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯನ್ನು ಸೋಲಿಸಿದ ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಬಂಗಾಳಿ ಮಾತನಾಡುವ ಬಹುಸಂಖ್ಯಾತ ಜನಸಂಖ್ಯೆ ಇರುವ ತ್ರಿಪುರಾದಲ್ಲಿ ಟಿಎಂಸಿಯನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತಿದೆ.

ಇದನ್ನೂ ಓದಿ: ಮೈಸೂರು ಮೇಯರ್ ಹುದ್ದೆಗೆ ಇಂದು ಚುನಾವಣೆ, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿನ ಪೈಪೋಟಿ

ಪಶ್ಚಿಮ ಬಂಗಾಳದಲ್ಲಿ ಬಿಹಾರದ ಮಾಜಿ ಸಚಿವ ಮಂಗಲ್ ಪಾಂಡೆ ಅವರನ್ನು ಬಿಜೆಪಿ ಉಸ್ತುವಾರಿಯನ್ನಾಗಿ ಮಾಡಿದೆ. ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಸಹ-ಪ್ರಭಾರಿಯಾಗಲಿದ್ದಾರೆ. ಕಳೆದ ವರ್ಷ ಸೋಲಿನ ನಡುವೆಯೂ ಬಿಜೆಪಿ ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ತನ್ನ ಸ್ಥಾನಗಳನ್ನು ಹೆಚ್ಚಿಸಿಕೊಂಡಿದೆ. ಇದು ಇಲ್ಲಿ ರಾಜಕೀಯದ ಆಕ್ರಮಣಕಾರಿ ಬ್ರಾಂಡ್ ಅನ್ನು ಅನುಸರಿಸುವುದನ್ನು ಮುಂದುವರೆಸಿದೆ.

ಒಡಿಶಾ ಮತ್ತು ತೆಲಂಗಾಣದ ಜೊತೆಗೆ ಪಶ್ಚಿಮ ಬಂಗಾಳವನ್ನು ನೋಡಿಕೊಳ್ಳುವ ಸುನಿಲ್ ಬನ್ಸಾಲ್ ಅವರೊಂದಿಗೆ ಮಂಗಲ್ ಪಾಂಡೆ ಕೆಲಸ ಮಾಡುತ್ತಾರೆ. ಈ ಹಿಂದೆ ಹರಿಯಾಣದ ಉಸ್ತುವಾರಿ ವಹಿಸಿದ್ದ ಪಕ್ಷದ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರಿಗೆ ಬಿಹಾರ ಜವಾಬ್ದಾರಿ ನೀಡಲಿದೆ. ಕಳೆದ ತಿಂಗಳು ತೇಜಸ್ವಿ ಯಾದವ್ ಅವರ ಆರ್‌ಜೆಡಿ ಮತ್ತು ಕಾಂಗ್ರೆಸ್‌ನೊಂದಿಗಿನ ಜೆಡಿಯು ಮೈತ್ರಿಯನ್ನು ಪುನರುಜ್ಜೀವನಗೊಳಿಸಿದ ಮುಖ್ಯಮಂತ್ರಿ ನಿತೀಶ್ ಕುಮಾರ್ ನೀಡಿದ ಶಾಕ್​ನಿಂದ ಬಿಹಾರದಲ್ಲಿ ಬಿಜೆಪಿ ಇನ್ನೂ ಚೇತರಿಸಿಕೊಳ್ಳುತ್ತಿದೆ.

ಇದನ್ನೂ ಓದಿ: Big News: ತ್ರಿಪುರಾ ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿಯಿಂದ ಮಾಜಿ ಸಿಎಂ ಬಿಪ್ಲಬ್ ದೇಬ್ ನಾಮನಿರ್ದೇಶನ

ನೆರೆಯ ಜಾರ್ಖಂಡ್‌ನಲ್ಲಿ ಲಕ್ಷ್ಮೀಕಾಂತ್ ವಾಜಪೇಯಿ ಬಿಜೆಪಿ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ. ಇಲ್ಲಿನ ಹೇಮಂತ್ ಸೋರೆನ್ ಅವರ ಸರ್ಕಾರವು ಜಾರ್ಖಂಡ್ ಮುಕ್ತಿ ಮೋರ್ಚಾ ಮತ್ತು ಕಾಂಗ್ರೆಸ್‌ನ ಶಾಸಕರನ್ನು ತಮ್ಮತ್ತ ಸೆಳೆಯಲು ಬಿಜೆಪಿ “ಕೊಳಕು ರಾಜಕೀಯ” ಮಾಡುತ್ತಿದೆ ಎಂದು ಆರೋಪಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತ ಎಂದು ಪರಿಗಣಿಸಲಾದ ಹಿರಿಯ ನಾಯಕ ಓಂ ಮಾಥುರ್ ಕಾಂಗ್ರೆಸ್ ಅಧಿಕಾರದಲ್ಲಿರುವ ಕೆಲವೇ ರಾಜ್ಯಗಳಲ್ಲಿ ಒಂದಾದ ಛತ್ತೀಸ್‌ಗಢದ ಉಸ್ತುವಾರಿಯನ್ನೂ ವಹಿಸಿಕೊಳ್ಳಲಿದ್ದಾರೆ. ಬಿಜೆಪಿಯ ನಾಯಕ ಸಂಬಿತ್ ಪಾತ್ರ ಅವರು ಈಶಾನ್ಯ ರಾಜ್ಯಗಳ ಸಂಯೋಜಕರಾಗಿರುತ್ತಾರೆ. ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ರಿತುರಾಜ್ ಸಿನ್ಹಾ ಜಂಟಿ ಸಂಯೋಜಕರಾಗಿರುತ್ತಾರೆ. ರಾಜಸ್ಥಾನದಲ್ಲಿ ಅರುಣ್ ಸಿಂಗ್ ಮತ್ತು ಮಧ್ಯಪ್ರದೇಶದಲ್ಲಿ ಮುರಳೀಧರ್ ರಾವ್ ಅವರನ್ನು ಉಳಿಸಿಕೊಳ್ಳಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್