AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Politics: ಮತ್ತೊಂದು ಅವಕಾಶದ ನಿರೀಕ್ಷೆಯಲ್ಲಿದ್ದ ಹಿರಿಯರಲ್ಲಿ ತಳಮಳ ಮೂಡಿಸಿದ ಯಡಿಯೂರಪ್ಪ ನಿರ್ಧಾರ

ಯಡಿಯೂರಪ್ಪ ಅವರಿಗೆ ವಯಸ್ಸು ಪರಿಗಣಿಸದೆ 2023ರಲ್ಲಿ ಟಿಕೆಟ್‌ ನೀಡಿದ್ದರೆ ಅದನ್ನೇ ಪ್ರಸ್ತಾಪಿಸಿ ತಾವೂ ಟಿಕೆಟ್​ ಗಿಟ್ಟಿಸಿಕೊಳ್ಳಬಹುದು ಎಂದು ಹಲವರು ಆಸೆ ಇರಿಸಿಕೊಂಡಿದ್ದರು.

Politics: ಮತ್ತೊಂದು ಅವಕಾಶದ ನಿರೀಕ್ಷೆಯಲ್ಲಿದ್ದ ಹಿರಿಯರಲ್ಲಿ ತಳಮಳ ಮೂಡಿಸಿದ ಯಡಿಯೂರಪ್ಪ ನಿರ್ಧಾರ
ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜಯೇಂದ್ರ
TV9 Web
| Edited By: |

Updated on:Jul 23, 2022 | 7:40 AM

Share

ಬೆಂಗಳೂರು: ಶಿಕಾರಿಪುರ ಕ್ಷೇತ್ರದಲ್ಲಿ (Shikaripura Constituency) ಮುಂದಿನ ಚುನಾವಣೆಯಲ್ಲಿ ತಮ್ಮ ಪುತ್ರ ಬಿ.ವೈ.ವಿಜಯೇಂದ್ರ (BY Vijayendra) ಸ್ಪರ್ಧಿಸುತ್ತಾರೆ ಎನ್ನುವ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರ ಹೇಳಿಕೆಯು ಹಲವು ಹಿರಿಯ ನಾಯಕರಿಗೆ ಟಿಕೆಟ್ ಕೈತಪ್ಪುವ ಭೀತಿ ಉಂಟು ಮಾಡಿದೆ. 2023ರಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ವಯಸ್ಸಿನ ಕಾರಣದಿಂದ ಟಿಕೆಟ್ ಸಿಗುವುದು ಅನುಮಾನ ಎಂಬ ಮಾತುಗಳು ಕೇಳಿಬರುತ್ತಿದ್ದ ಹಲವು ನಾಯಕರು ಇದೀಗ ನಿರಾಶೆಗೆ ಜಾರಿದ್ದಾರೆ.

ಯಡಿಯೂರಪ್ಪ ಅವರಿಗೆ ವಯಸ್ಸು ಪರಿಗಣಿಸದೆ 2023ರಲ್ಲಿ ಟಿಕೆಟ್‌ ನೀಡಿದ್ದರೆ ಅದನ್ನೇ ಪ್ರಸ್ತಾಪಿಸಿ ತಾವೂ ಟಿಕೆಟ್​ ಗಿಟ್ಟಿಸಿಕೊಳ್ಳಬಹುದು ಎಂದು ಹಲವರು ಆಸೆ ಇರಿಸಿಕೊಂಡಿದ್ದರು. ಒಂದು ವೇಳೆ ಬಿ.ಎಸ್.ಯಡಿಯೂರಪ್ಪ ಸ್ಪರ್ಧಿಸದಿದ್ದರೆ ತಮಗೂ ಟಿಕೆಟ್ ಸಿಗುವುದು ಅನುಮಾನ ಎಂದು ಹಲವರು ಸ್ವತಃ ವಿಶ್ಲೇಷಿಸಿಕೊಳ್ಳುತ್ತಿದ್ದಾರೆ. ಯಡಿಯೂರಪ್ಪ ಅವರ ನಿರ್ಧಾರದಿಂದ 2023ಕ್ಕೆ 75 ವರ್ಷ ದಾಟುವ ಹಿರಿಯ ನಾಯಕರಿಗೆ ಟಿಕೆಟ್ ಸಿಗುವ ಸಾಧ್ಯತೆಯ ಬಗ್ಗೆ ಆತಂಕ ಉಂಟಾಗಿದೆ.

ರಾಜಕಾರಣಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿಯಲ್ಲಿ ಆಂತರಿಕ ಆಕ್ಷೇಪ

2023ರ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರ ಕ್ಷೇತ್ರವನ್ನು ವಿಜಯೇಂದ್ರಗೆ ಬಿಟ್ಟುಕೊಡುವುದಾಗಿ ಯಡಿಯೂರಪ್ಪ ನೀಡಿರುವ ಹೇಳಿಕೆಗೆ ಬಿಜೆಪಿ ರಾಜ್ಯ ಘಟಕದ ನಾಯಕರಲ್ಲಿ ಆಂತರಿಕ ಆಕ್ಷೇಪ ವ್ಯಕ್ತವಾಗಿದೆ. ಬಿಜೆಪಿಯಲ್ಲಿ ಪ್ರತ್ಯೇಕವಾಗಿ ಅಭ್ಯರ್ಥಿ ಘೋಷಣೆ ಮಾಡುವ ವ್ಯವಸ್ಥೆಯೇ ಇಲ್ಲ. ಹೀಗಿರುವಾಗ ಯಡಿಯೂರಪ್ಪ ಹೇಗೆ ಶಿಕಾರಿಪುರ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಯಡಿಯೂರಪ್ಪ ಏಕಾಏಕಿ ತಮ್ಮ ಮಗನ ಹೆಸರು ಘೋಷಿಸಿದರು. ಇತರ ನಾಯಕರೂ ಇದೇ ಪದ್ಧತಿ ಅನುಸರಿದರೆ ಪಕ್ಷದ ಶಿಸ್ತಿನ ಪಾಡು ಏನಾಗಬೇಕು. ಈ ರೀತಿ ಏಕಾಏಕಿ ಯಡಿಯೂರಪ್ಪ ಪುತ್ರನ ಹೆಸರು ಘೋಷಣೆ ಮಾಡಿದ್ದು ಸರಿಯಲ್ಲ ಎಂದು ಹಲವು ನಾಯಕರು ಪಕ್ಷದ ಒಳಗೆ ಆಂತರಿಕವಾಗಿ ಅಸಮಾಧಾನ ವ್ಯಕ್ತಪಡಿಸಿ ಆಕ್ಷೇಪಿಸಿದ್ದಾರೆ. ಯಡಿಯೂರಪ್ಪ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ಹಲವು ಹಿರಿಯ ನಾಯಕರು ಸಹ ಈವರೆಗೆ ಈ ಕುರಿತು ಬಹಿರಂಗ ಹೇಳಿಕೆಗಳನ್ನು ನೀಡಿಲ್ಲ.

Published On - 7:34 am, Sat, 23 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ