AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖತಮ್, ಟಾಟಾ ವಿಡಿಯೊ ಮೂಲಕ ರಾಹುಲ್ ಗಾಂಧಿಯನ್ನು ಲೇವಡಿ ಮಾಡಿದ ಬಿಜೆಪಿ, ಬರೀ ಟ್ರೋಲ್ ಮಾಡುವುದೇ ನಿಮ್ಮ ಕೆಲಸ ಎಂದ ಕಾಂಗ್ರೆಸ್

ಈ ವಿಡಿಯೋ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನೇತ್, ಇಡೀ ಪಕ್ಷವೇ ‘ಚೀಪ್ ಟ್ರೋಲ್’ ಆಗಿದೆ. ಭಾರತ್ ಜೋಡೋ ಯಾತ್ರೆ  ಹುಟ್ಟಿಸಿರುವ ಭಯದಿಂದ ಬಿಜೆಪಿ ನಾಲ್ಕಾಣೆಯ ಟ್ರೋಲ್ ಆಗಿಬಿಟ್ಟಿದೆ.

ಖತಮ್, ಟಾಟಾ ವಿಡಿಯೊ ಮೂಲಕ ರಾಹುಲ್ ಗಾಂಧಿಯನ್ನು ಲೇವಡಿ ಮಾಡಿದ ಬಿಜೆಪಿ, ಬರೀ ಟ್ರೋಲ್ ಮಾಡುವುದೇ ನಿಮ್ಮ ಕೆಲಸ ಎಂದ ಕಾಂಗ್ರೆಸ್
ಬಿಜೆಪಿ ಟ್ರೋಲ್ ವಿಡಿಯೊ- ರಾಹುಲ್ ಗಾಂಧಿಯವರ ಭಾರತ್ ಜೋಡೊ ಯಾತ್ರೆ
TV9 Web
| Edited By: |

Updated on:Oct 16, 2022 | 2:21 PM

Share

ದೆಹಲಿ: ಹಲವಾರು ಬಿಜೆಪಿ (BJP) ನಾಯಕರು ಮತ್ತು ವಕ್ತಾರರು ಭಾನುವಾರ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿಯನ್ನು (Rahul Gandhi) ಲೇವಡಿ ಮಾಡುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಬಿಜೆಪಿಯ ಅಧಿಕೃತ ಟ್ವಿಟರ್‌ ಹ್ಯಾಂಡಲ್ ನಲ್ಲಿ ಈ ವಿಡಿಯೊ ಮೊದಲು ಟ್ವೀಟ್ ಮಾಡಲಾಗಿದೆ. ರಾಹುಲ್ ಗಾಂಧಿ ಮತ್ತು ಪಕ್ಷದ ಭಾರತ್ ಜೋಡೋ ಯಾತ್ರೆಯನ್ನು ಲೇವಡಿ ಮಾಡಿರುವ ಈ ವಿಡಿಯೊದಲ್ಲಿ ಗೋವಾದಲ್ಲಿನ ಶಾಸಕರ ಪಕ್ಷಾಂತರಸೆ, ಗುಲಾಂ ನಬಿ ಆಜಾದ್ ಅವರ ರಾಜೀನಾಮೆ, ರಾಜಸ್ಥಾನ ಬಂಡಾಯದಸೇರಿದಂತೆ ಕಾಂಗ್ರೆಸ್ ಎದುರಿಸಿದ ಇತ್ತೀಚಿನ ಸಮಸ್ಯೆಗಳನ್ನು ವಿಡಿಯೊದಲ್ಲಿ ಸೇರಿಸಲಾಗೆ. ಈ ವಿಡಂಬನೆ ವಿಡಿಯೊದಲ್ಲಿ ಕೊನೆಗೆ ಸೋನಿಯಾ ಗಾಂಧಿ ಅವರನ್ನೂ ತೋರಿಸಲಾಗಿದೆ. “ಅಮ್ಮಾ, ಕೆಟ್ಟ ದಿನಗಳು ಏಕೆ ಕೊನೆಗೊಳ್ಳುವುದಿಲ್ಲ? ಖತಮ್…ಟಾಟಾ…ಗುಡ್ ಬೈ ,” ಎಂಬ ಶೀರ್ಷಿಕೆಯೊಂದಿಗೆ ಬಿಜೆಪಿ ಈ ವಿಡಿಯೊ ಶೇರ್ ಮಾಡಿದೆ.

ಕಾಂಗ್ರೆಸ್ ಪ್ರತಿಕ್ರಿಯೆ

ಈ ವಿಡಿಯೋ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನೇತ್, ಇಡೀ ಪಕ್ಷವೇ ‘ಚೀಪ್ ಟ್ರೋಲ್’ ಆಗಿದೆ. ಭಾರತ್ ಜೋಡೋ ಯಾತ್ರೆ  ಹುಟ್ಟಿಸಿರುವ ಭಯದಿಂದ ಬಿಜೆಪಿ ನಾಲ್ಕಾಣೆಯ ಟ್ರೋಲ್ ಆಗಿಬಿಟ್ಟಿದೆ.”ಆದರೆ ಭಯ ಒಳ್ಳೆಯದು. ನಿರುದ್ಯೋಗ ಮತ್ತು ಬೆಲೆ ಏರಿಕೆಗೆ ಪರಿಹಾರವನ್ನು ಕಂಡುಹಿಡಿಯಲು ಅವರು ಇಷ್ಟೊಂದು ಪ್ರಯತ್ನ ಮಾಡಿದ್ದರೆ ಒಳ್ಳೆಯದಿತ್ತು ಎಂದು  ಟ್ವೀಟ್ ಮಾಡಿದ್ದಾರೆ.

ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯು ಇಲ್ಲಿಯವರೆಗೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಹಲವಾರು ವಿಷಯಗಳ ಮುಖಾಮುಖಿಯಾಗುವಂತೆ ಮಾಡಿದೆ. ಪ್ರಮುಖ ಬಿಜೆಪಿ ನಾಯಕರು ಕಾಂಗ್ರೆಸ್ ಅನೇಕ ರಾಜೀನಾಮೆಗಳಿಗೆ ಸಾಕ್ಷಿಯಾದ ಸಮಯದಲ್ಲಿ ಯಾತ್ರೆಯ ಅಗತ್ಯವನ್ನು ಪ್ರಶ್ನಿಸಿದ್ದಾರೆ. ಯಾತ್ರೆಯ ಯಶಸ್ಸಿನಿಂದ ಗಮನ ಬೇರೆಡೆ ಸೆಳೆಯಲು ಬಿಜೆಪಿ ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಹೇಳಿದೆ.

ಭಾರತ್ ಜೋಡೋ ಯಾತ್ರೆ ಇದೀಗ ಕರ್ನಾಟಕದಲ್ಲಿದ್ದು, ಶನಿವಾರ 1,000 ಕಿ.ಮೀ ಮೈಲುಗಲ್ಲನ್ನು ದಾಟಿದೆ.ಈ ಮೈಲುಗಲ್ಲು ಪೂರ್ಣಗೊಳಿಸಿದ ಸಂದರ್ಭದಲ್ಲಿ ಮಾತನಾಡಿದ ರಾಹುಲ್ ಗಾಂಧಿ, 1999 ರಲ್ಲಿ ಸೋನಿಯಾ ಗಾಂಧಿ ಅವರು ಬಳ್ಳಾರಿಯಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದರಿಂದ ತಮ್ಮ ಕುಟುಂಬಕ್ಕೆ ಕರ್ನಾಟಕದೊಂದಿಗೆ ಸುದೀರ್ಘ ಸಂಬಂಧವಿದೆ, ನಮ್ಮ ಕುಟುಂಬ ಮತ್ತು ಬಳ್ಳಾರಿ ನಡುವೆ ಸುದೀರ್ಘ ಸಂಬಂಧವಿದೆ. .ನನ್ನ ತಾಯಿ ಇಲ್ಲಿಂದ ಚುನಾವಣೆಗೆ ಸ್ಪರ್ಧಿಸಿ ಬಳ್ಳಾರಿ ಜನತೆಯ ಮನಃಪೂರ್ವಕ ಬೆಂಬಲದಿಂದ ಆಯ್ಕೆಯಾದರು, ನನ್ನ ಅಜ್ಜಿ ಇಂದಿರಾಗಾಂಧಿ ಚಿಕ್ಕಮಗಳೂರಿನಿಂದ ಸ್ಪರ್ಧಿಸಿದ್ದರು. ಹಾಗಾಗಿ ಅದನ್ನು ಮರೆಯಲು ಸಾಧ್ಯವಿಲ್ಲ ಎಂದಿದ್ದಾರೆ.

Published On - 2:15 pm, Sun, 16 October 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ