ಹಾಸನಕ್ಕೆ ಪ್ರಜ್ವಲ್ ರೇವಣ್ಣ ಅಭ್ಯರ್ಥಿ ಎಂದ ದೇವೇಗೌಡ, ಮೈತ್ರಿ ಅಭ್ಯರ್ಥಿ ಅಲ್ಲ ಎಂದ ಬಿಜೆಪಿ ನಾಯಕ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಅವರು ಹಾಸನದಿಂದ ಸ್ಪರ್ಧಿಸುವುದು ಪಕ್ಕಾ ಆಗಿದೆ. ಖುದ್ದು ಜೆಡಿಎಸ್​ ವರಿಷ್ಠ ಹೆಚ್​ಡಿ ದೇವೇಗೌಎ ಅವರೇ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಆದ್ರೆ, ಇದಕ್ಕೆ ಮಿತ್ರ ಪಕ್ಷ ಬಿಜೆಪಿಯ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹಾಸನಕ್ಕೆ ಪ್ರಜ್ವಲ್ ರೇವಣ್ಣ ಅಭ್ಯರ್ಥಿ ಎಂದ ದೇವೇಗೌಡ, ಮೈತ್ರಿ ಅಭ್ಯರ್ಥಿ ಅಲ್ಲ ಎಂದ ಬಿಜೆಪಿ ನಾಯಕ
Follow us
ಮಂಜುನಾಥ ಕೆಬಿ
| Updated By: ರಮೇಶ್ ಬಿ. ಜವಳಗೇರಾ

Updated on:Dec 02, 2023 | 2:24 PM

ಹಾಸನ, (ಡಿಸೆಂಬರ್ 02): ಮುಂದಿನ ಲೋಕಸಭಾ ಚುನಾವಣೆಯಲ್ಲಿ (Loksabha Elections 2024) ಪ್ರಜ್ವಲ್ ರೇವಣ್ಣ (Prajwal revanna) ಅವರು ಹಾಸನದಿಂದ (Hassan) ಸ್ಪರ್ಧಿಸಲಿದ್ದು. ಅವರ ಗೆಲುವಿಗೆ ಎಲ್ಲರೂ ಶ್ರಮಿಸಬೇಕಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕರೆಕೊಟ್ಟಿದ್ದಾರೆ. ಇದರೊಂದಿಗೆ ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಕಣಕ್ಕಿಳಿಯುವುದು ಖಚಿತವಾಗಿದೆ. ಆದ್ರೆ, ಮತ್ತೊಂದೆಡೆ ಇದಕ್ಕೆ ಮಿತ್ರ ಪಕ್ಷವಾದ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ಎನ್​ಡಿಎ ಮೈತ್ರಿಕೂಟದ ಪಕ್ಷವಾಗಿ ಏಕಪಕ್ಷಿಯ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯ ಮಾದ್ಯಮ ವಕ್ತಾರ ಜಿ ದೇವರಾಜೇಗೌಡ ಅಸಮಾಧಾನ ಹೊರಹಾಕಿದ್ದಾರೆ.

ಹಾಸನದಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಮಾದ್ಯಮ ವಕ್ತಾರ ಜಿ ದೇವರಾಜೇಗೌಡ, ಪ್ರಜ್ವಲ್ ರೇವಣ್ಣ ಎನ್​ಡಿಎ ಮೈತ್ರಿಕೂಟದ ಅಧಿಕೃತ ಅಭ್ಯರ್ಥಿ ಅಲ್ಲ. ನಮ್ಮ ಪಕ್ಷದ ರಾಜ್ಯ ಅದ್ಯಕ್ಷರೂ ಕೂಡ ಜೊತೆಯಲ್ಲಿ ಇದ್ದು ಜಂಟಿ‌ ಹೇಳಿಕೆ ‌ನೀಡಿದರೆ ಮಾತ್ರ ಅವರು ಮೈತ್ರಿ ಪಕ್ಷದ ಅಭ್ಯರ್ಥಿಯಾಗುತ್ತಾರೆ ಎಂದು ಸ್ಪಷ್ಟಪಡಿಸಿದರು.

ದೇವೇಗೌಡರ ಹೇಳಿಕೆ ಖಂಡನೀಯ. ಮೋದಿಯವರ ನೇತೃತ್ವದಲ್ಲಿ ಕಳಂಕಿತರಿಗೆ ಅವಕಾಶ ಇಲ್ಲ. ಪ್ರಜ್ವಲ್ ರೇವಣ್ಣ ಮೇಲಿನ ಆರೋಪ ಸಾಬೀತಾಗಿದೆ. ಹಾಗಾಗಿ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಘೋಷಣೆ ಮಾಡಿಕೊಂಡರೆ ನಮ್ಮದೇನು ತಕರಾರು ಇಲ್ಲ. ಆದರೆ ಅವರು ಮೈತ್ರಿಕೂಟ ಅಥವಾ ಎಮ್​ಡಿಎ ಅಭ್ಯರ್ಥಿಯಾಗಿ ಘೋಷಣೆ ಸಾದ್ಯವಿಲ್ಲ. ನಮ್ಮ ಜಿಲ್ಲೆಯ ಕಾರ್ಯಕರ್ತರು ಯಾರೂ ಕೂಡ ಗೊಂದಲಕ್ಕೆ ಒಳಗಾಗುವುದು ಬೇಡ ಎಂದಿದ್ದಾರೆ. ಈ ಮೂಲಕ ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಅವರ ಸ್ಪರ್ಧೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ದೇವೇಗೌಡ ಹೇಳಿದ್ದೇನು?

ನಿನ್ನೆ(ಡಿಸೆಂಬರ್ 01) ಹೊಳೆನರಸೀಪುರ ತಾಲೂಕಿನ ಕಟ್ಟೆಬೆಳಗುಲಿ ಗ್ರಾಮದ ಶ್ರೀ ರಾಮದೇವರಕಟ್ಟೆ ಆವರಣದಲ್ಲಿ ಆಯೋಜಿಸಲಾಗಿದ್ದ ಜೆಡಿಎಸ್ ಚುನಾಯಿತ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಪ್ರಜ್ವಲ್ ರೇವಣ್ಣ ಅವರ ಹೆಸರನ್ನು ಘೋಷಣೆ ಮಾಡಿದ್ದರು. ಮುಂದಿನ ಚುನಾವಣೆಯಲ್ಲಿ ಎಲ್ಲಾ ಶಾಸಕರು, ಮಾಜಿ ಶಾಸಕರು ಹಾಗೂ ಎಲ್ಲಾ ಚುನಾಯಿತ ಪ್ರತಿನಿಧಿಗಳು ಒಮ್ಮತದಿಂದ ಪ್ರಜ್ವಲ್ ರೇವಣ್ಣನ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದ್ದರು.

ಇದೇ ಸಂದರ್ಭದಲ್ಲಿ ಮಾತನಾಡಿದ್ದ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಕೂಡ, ದೇವೇಗೌಡರು ಈ ಕ್ಷೇತ್ರದಿಂದ ಸ್ಪರ್ಧಿಸಲು ಬಯಸುವುದಾದರೆ ಈ ಕ್ಷೇತ್ರವನ್ನು ಅವರಿಗೇ ಬಿಟ್ಟುಕೊಡಲು ನಾನು ಸಿದ್ಧನಿದ್ದೇನೆ. ದೇವೇಗೌಡರು ಈ ಹಿಂದೆ ಈ ಕ್ಷೇತ್ರವನ್ನು ನನಗೆ ಬಿಟ್ಟುಕೊಟ್ಟಿದ್ದರಿಂದಲೇ ನಾನು ಸಂಸದನಾಗಿ ಆಯ್ಕೆಯಾಗಿದ್ದೇನೆ. ನನಗೆ ರಾಜಕೀಯ ಮುನ್ನುಡಿ ಬರೆದವರು ಅವರೇ. ಹಾಗಾಗಿ ಇದೀಗ ಅವರು ಈ ಕ್ಷೇತ್ರದಿಂದ ಸ್ಪರ್ಧಿಸಲು ಇಚ್ಛಿಸಿದಲ್ಲಿ ಕ್ಷೇತ್ರ ಬಿಟ್ಟುಕೊಡುವೆ ಎಂದಿದ್ದರು.

ಮತ್ತಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:04 pm, Sat, 2 December 23

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ