ನಾನೂ ರಾಮಭಕ್ತ, ನನ್ನನ್ನೂ ಬಂಧಿಸಿ ಸಿದ್ದರಾಮಯ್ಯನವರೇ: ಪ್ರೊಫೈಲ್ ಫೋಟೋ ಬದಲಿಸಿ ಬಿಜೆಪಿ ನಾಯಕರ ಪ್ರತಿಭಟನೆ

ನಾನೊಬ್ಬ ಕರಸೇವಕ ನನ್ನನ್ನು ಬಂಧಿಸಿ ಎಂಬ ಅಭಿಯಾನ ಇಂದಿನಿಂದ ಶುರುವಾಗಿದೆ. ಕರಸೇವೆಯಲ್ಲಿ ಭಾಗಿಯಾದವರು ಇವತ್ತಿಗೂ ಇದ್ದಾರೆ. ರಾಮ ಮಂದಿರ ಉದ್ಘಾಟನೆ ಸಂಧರ್ಭದಲ್ಲೇ ಸರ್ಕಾರ ರಾಮ ಭಕ್ತರನ್ನು ಭಯ ಪಡಿಸುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಹೇಳಿದರು.

ನಾನೂ ರಾಮಭಕ್ತ, ನನ್ನನ್ನೂ ಬಂಧಿಸಿ ಸಿದ್ದರಾಮಯ್ಯನವರೇ: ಪ್ರೊಫೈಲ್ ಫೋಟೋ ಬದಲಿಸಿ ಬಿಜೆಪಿ ನಾಯಕರ ಪ್ರತಿಭಟನೆ
ಬಿವೈ ವಿಜಯೇಂದ್ರ ಎಕ್ಸ್​ ಖಾತೆಯ ಪ್ರೊಫೈಲ್ ಚಿತ್ರ
Follow us
| Updated By: ಗಣಪತಿ ಶರ್ಮ

Updated on: Jan 04, 2024 | 11:30 AM

ಬೆಂಗಳೂರು, ಜನವರಿ 4: ಹುಬ್ಬಳ್ಳಿಯ ಕರಸೇವಕ, ಗಲಭೆ ಆರೋಪಿ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಬಿಜೆಪಿ ನಾಯಕರ ಪ್ರತಿಭಟನೆ (BJP Protest) ಗುರುವಾರವೂ ಮುಂದುವರಿದಿದೆ. ಇದೀಗ ಬಿಜೆಪಿ ನಾಯಕರು ಸಾಮಾಜಿಕ ಜಾಲತಾಣಗಳಲ್ಲೂ ಹೋರಾಟ ಆರಂಭಿಸಿದ್ದು, ‘ನಾನೂ ರಾಮಭಕ್ತ, ನನ್ನನ್ನೂ ಬಂಧಿಸಿ ಸಿದ್ದರಾಮಯ್ಯನವರೇ’ ಎಂಬ ಸಂದೇಶವುಳ್ಳ ಪ್ರೊಫೈಲ್ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿಕೊಂಡಿದ್ದಾರೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಸೇರಿದಂತೆ ಅನೇಕ ನಾಯಕರು ಪ್ರೊಫೈಲ್ ಫೋಟೊ ಬದಲಾಯಿಸಿಕೊಂಡಿದ್ದಾರೆ.

ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾಹಿತಿ ನೀಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್, ನಾನೊಬ್ಬ ಕರಸೇವಕ ನನ್ನನ್ನು ಬಂಧಿಸಿ ಎಂಬ ಅಭಿಯಾನ ಇಂದಿನಿಂದ ಶುರುವಾಗಿದೆ. ಕರಸೇವೆಯಲ್ಲಿ ಭಾಗಿಯಾದವರು ಇವತ್ತಿಗೂ ಇದ್ದಾರೆ. ರಾಮ ಮಂದಿರ ಉದ್ಘಾಟನೆ ಸಂಧರ್ಭದಲ್ಲೇ ಸರ್ಕಾರ ರಾಮ ಭಕ್ತರನ್ನು ಭಯ ಪಡಿಸುವ ಕೆಲಸ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ರಾಮ ಭಕ್ತರನ್ನು ಕ್ರಿಮಿನಲ್​​​ಗಳಿಗೆ ಹೋಲಿಕೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಭಾರತವನ್ನು ಪಾಕಿಸ್ತಾನವಾಗಿಸಲು ಸಿದ್ಧತೆ ಮಾಡುತ್ತಿದ್ದಾರೇನೋ: ಯತೀಂದ್ರ ಹೇಳಿಕೆಗೆ ಪೇಜಾವರ ಶ್ರೀ ತಿರುಗೇಟು

ಕುಕ್ಕರ್ ಬಾಂಬ್ ಬ್ಲಾಸ್ಟ್ ಮಾಡುವವರು ಕಾಂಗ್ರೆಸ್​​​ಗೆ ಅಮಾಯಕರು. ರಾಜ್ಯದ ಹಿಂದೂಗಳ ಪಾಲಿಗೆ ಈ ಸರ್ಕಾರ ಸತ್ತು ಹೋಗಿರುವ ತರಹ ಕಾಣಿಸುತ್ತಿದೆ. ಕೇವಲ ಅಲ್ಪಸಂಖ್ಯಾತರನ್ನು ವೈಭವೀಕರಿಸುವುದರಲ್ಲಿ ತುಷ್ಟೀಕರಣ ಮಾಡುವುದರಲ್ಲಿ ಸರ್ಕಾರ ನಿರತವಾಗಿದೆ. ನನ್ನ ಮೇಲೂ ಹತ್ತಾರು ಕೇಸ್​​ಗಳಿವೆ. ಹಾಗಾದರೆ ನಾನು ಅಪರಾಧಿಯೇ? ಈ ಹೋರಾಟವನ್ನು ಇಲ್ಲಿಗೆ ನಿಲ್ಲಿಸುವುದಿಲ್ಲ, ಮುಂದುವರಿಸುತ್ತೇವೆ ಎಂದು ಸುನಿಲ್ ಕುಮಾರ್ ಹೇಳಿದರು.

ಸಿಟಿ ರವಿ ಪೊಲೀಸ್ ವಶಕ್ಕೆ, ನಂತರ ಬಿಡುಗಡೆ

ಈ ಮಧ್ಯೆ, ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕ ಸಿಟಿ ರವಿ ಅವರನ್ನು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದ್ದಾರೆ. ರವಿ ಬಂಧನ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಠಾಣೆ ಒಳ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ, ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್