ಬಿಜೆಪಿಯಲ್ಲಿ ಲಿಂಗಾಯತ ನಾಯಕರ ಅಸಮಾಧಾನ ಸ್ಫೋಟ: ನಾಯಕತ್ವ, ಉಸ್ತುವಾರಿ ಬದಲಾವಣೆಗೆ ಪಟ್ಟು

ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಬೆಳವಣಿಗೆಗಳಾಗುತ್ತಿವೆ. ಅದರಲ್ಲೂ ಬಿಜೆಪಿಯಲ್ಲಿ ಹಲವು ಆತಂಕರಿಕ ಗೊಂದಲಗಳು ಮುಂದುವರೆದಿವೆ. ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷರ ಆಯ್ಕೆ ಸಂಬಂಧ ಬಣ ರಾಜಕೀಯ ಶುರುವಾಗಿದೆ. ಇದರಿಂದ ಹೈಕಮಾಂಡ್ ಯಾರನ್ನ ಆಯ್ಮೆ ಮಾಡಬೇಕೆಂದು ಚಿಂತನೆಯಲ್ಲಿ ತೊಡಗಿದೆ. ಇದರ ಮಧ್ಯೆ ಇದೀಗ ರಾಜ್ಯ ಬಿಜೆಪಿ ನಾಯಕತ್ವವನ್ನು ಲಿಂಗಾಯತರಿಗೆ ಕೊಡಬೇಕೆಂಬ ಕೂಗು ಕೇಳಿಬಂದಿದೆ.

ಬಿಜೆಪಿಯಲ್ಲಿ ಲಿಂಗಾಯತ ನಾಯಕರ ಅಸಮಾಧಾನ ಸ್ಫೋಟ: ನಾಯಕತ್ವ, ಉಸ್ತುವಾರಿ ಬದಲಾವಣೆಗೆ ಪಟ್ಟು
ಬಿಜೆಪಿ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ರಮೇಶ್ ಬಿ. ಜವಳಗೇರಾ

Updated on: Sep 03, 2023 | 2:44 PM

ಹುಬ್ಬಳ್ಳಿ, (ಸೆಪ್ಟೆಂಬರ್ 03): ವಿಧಾನಸಭೆ ಚುನಾವಣೆ (Karnataka Assembly Elections 2023) ಸೋತು ಸುಣ್ಣಾಗಿರುವ ಬಿಜೆಪಿ(BJP) ಇದೀಗ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷ ಆಯ್ಮೆ ಸಂಬಂಧ ಗೊಂದಲಗಳು ಮುಂದುವರೆದಿವೆ. ಸಂಬಂಧ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್​ ಸಂತೋಷ್(BL Santosh)​ ಬಣಗಳ ಮಧ್ಯೆ ಪೈಪೋಟಿ ಶುರುವಾಗಿದೆ. ಸಿಟಿ ರವಿ ಅವರನ್ನು ರಾಜ್ಯಾಧ್ಯಕ್ಷ ಮಾಡಬೇಕೆಂದು ಬಿಎಲ್ ಸಂತೋಷ್​ ಕಸರತ್ತು ನಡೆಸಿದ್ದಾರೆ ಎನ್ನಲಾಗಿದೆ. ಆದ್ರೆ, ಇತ್ತ ಲಿಂಗಾಯತರಿಗೆ ನಾಯಕತ್ವ ನೀಡಬೇಕೆಂಬ ಕೂಗು ಕೇಳಿಬಂದಿದೆ. ಅಲ್ಲದೇ ​ಬಿಜೆಪಿಯಲ್ಲಿ ಲಿಂಗಾಯತ ನಾಯಕರ ಅಸಮಾಧಾನ ಸ್ಪೋಟಗೊಂಡಿದೆ.

ಹೌದು…. ರಾಜ್ಯ ಬಿಜೆಪಿಯಲ್ಲಿ ಲಿಂಗಾಯತರಿಗೆ ನಾಯಕತ್ವ ಕೊಡಬೇಕು. ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಬದಲಾಗಬೇಕೆಂದು ವಿಧಾನಪರಿಷತ್ ಸದಸ್ಯ ಪ್ರದೀಪ್​ ಶೆಟ್ಟರ್ ಬಹಿರಂಗವಾಗಿಯೆ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು (ಸೆಪ್ಟೆಂಬರ್​ 03) ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಲಿಂಗಾಯತ ನಾಯಕರನ್ನು ತುಳದಿದ್ದೆ ಸೋಲಿಗೆ ಕಾರಣವಾಗಿದೆ. ಇದೀಗ ಅನೇಕ ಲಿಂಗಾಯತ ನಾಯಕರು ಒಂದು ಕಾಲು ಪಕ್ಷದಿಂದ ಹೊರಗಡೆ ಇಟ್ಟಿದ್ದಾರೆ. ಮಾಜಿ ಸಚಿವರಾದ ಮುನೇನಕೊಪ್ಪ,ಮಾಧುಸ್ವಾಮಿ, ರೇಣುಕಾಚಾರ್ಯ,ಮಾಜಿ ಶಾಸಕ ಚಿಕ್ಕನಗೌಡರ ಒಂದು ಕಾಲ ಹೊರಗಡೆ ಇಟ್ಟಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ ರಾಜಕೀಯ; ಬಿಜೆಪಿಯಲ್ಲಿ ಬಿಎಸ್ ಯಡಿಯೂರಪ್ಪ VS ಬಿಎಲ್ ಸಂತೋಷ್ ಬಣ ಸಂಘರ್ಷ ಮತ್ತೆ ಮುನ್ನೆಲೆಗೆ

ನಾನು ವಿಧಾನಪರಿಷತ್ ಸದಸ್ಯನಾಗಿದ್ದರೂ ಕೆಲ ಕಾರ್ಯಕ್ರಮಗಳಿಗೆ ನನ್ನ ಕಡೆಗಣನೆ ಮಾಡಿದ್ದಾರೆ. ಗ್ರಾಮ ಪ‌ಂ‌ಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ನನ್ನ ಕರೆದಿಲ್ಲ. ಇದೊಂದೆ ಕಾರ್ಯಕ್ರಮ ಅಲ್ಲ. ನಾಲ್ಕೈದು ಕಾರ್ಯಕ್ರಮಕ್ಕೆ ಕಡೆಗಣಿಸಿದ್ದಾರೆ. ಇದು ನನಗೆ ಬೇಸರವಾಗಿದೆ. ಯಾಕೆ ಹೀಗೆ ಆಗುತ್ತಿದೆ ಎನ್ನುವುದು ಅರ್ಥ ಆಗುತ್ತಿಲ್ಲ. ಆದ್ರೆ ವೀರಶೈವ ಲಿಂಗಾಯತ ನಾಯಕರಿಗೆ ನಾಯಕತ್ವ ಕೊಟ್ರೆ ಮಾತ್ರ ಬಿಜೆಪಿ ಗೆಲ್ಲಲು‌ ಸಾಧ್ಯ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ವೀರಶೈವ ಲಿಂಗಾಯತರಿಗೆ ಕೊಡಬೇಕು ಎಂದು ಆಗ್ರಹಿಸಿದರು.

ನಾನು ಪಕ್ಷ ಬಿಟ್ಟು ಹೋಗಲ್ಲ. ಅನೇಕ ಕಾಂಗ್ರೆಸ್ ದೊಡ್ಡ ನಾಯಕರು ನನ್ನ ಸಂಪರ್ಕ ಮಾಡಿದ್ದಾರೆ. ಜಗದೀಶ್ ಶೆಟ್ಟರ್ ಬಿಜೆಪಿ ತೊರೆದಿದ್ದು ಸಮಸ್ಯೆ ಆಗಿದೆ. ಪಕ್ಷದಲ್ಲಿ ಹೇಳೋರು ಕೇಳೋರು ಇಲ್ಲದಂತಾಗಿದೆ. ಪಕ್ಷದಲ್ಲಿ ನಾಯಕತ್ವದ ಕೊರತೆ ಇದೆ. ಎರಡು ದಿನದ ಮುಂಚೆ ನನಗೆ ಕೇಂದ್ರ ಸಚಿವರು ಮಾತಾಡಿದ್ದಾರೆ. ಆದ್ರೆ ನನ್ನ ಪಕ್ಷದವರು ಅವೈಡ್ ಮಾಡಿದ್ದಾರೆ. ಬಿಜೆಪಿಯಲ್ಲಿ ಲಿಂಗಾಯತ ನಾಯಕರೇ ಇಲ್ಲ. ಬಿಜೆಪಿ ಲಿಂಗಾಯತ ನಾಯಕರನ್ನು ತುಳಿಯುತ್ತಿದ್ದಾರೆ. ಇದನ್ಜು ನಾನು ಒಪ್ಪಿಕೊಳ್ಳುತ್ತೇನೆ. ಲಿಂಗಾಯತ ನಾಯಕರಿಗೆ ಆಗುತ್ತಿರುವ ಬಗ್ಗೆ ರಾಷ್ಟ್ರೀಯ ನಾಯಕರ ಗಮನಕ್ಕೆ ತರುತ್ತೇವೆ ಎಂದು ಹೇಳಿದರು.

ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಸಿದ್ರು. ಬಿಜೆಪಿಯಲ್ಲಿ ಇರುವುದೇ ಅಲ್ಪ ಸ್ವಲ್ಪ ಲಿಂಗಾಯತ ನಾಯಕರು. ಅವರನ್ನು ಅವೈಡ್ ಮಾಡಿದ್ರೆ ಬಿಜೆಪಿ ಕೆಟ್ಟ ಸ್ಥಿತಿಗೆ ಹೋಗತ್ತೆ. ರಾಜ್ಯದ ಬಿಜೆಪಿ ಉಸ್ತುವಾರಿಗಳು ಬದಲಾಗಬೇಕು. ಹಾಗೇ ಲಿಂಗಾಯತ ನಾಯಕರಿಗೆ ನಾಯಕತ್ವ ನೀಡಿದರೆ ಮಾತ್ರ ಬಿಜೆಪಿ ಗೆಲ್ಲಲು‌ ಸಾಧ್ಯ. ಲೋಕಸಭೆ ಚುನಾವಣೆಗೆ ವೀರಶೈವ ಲಿಂಗಾಯತರಿಗೆ ಹೆಚ್ಚು ಸ್ಥಾನ ಕೊಡಿ ಎಂದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ