AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಶಾಸಕಾಂಗ ಪಕ್ಷದ ಸಭೆ ರದ್ದು: ನಾಳೆ ದೆಹಲಿಗೆ ತೆರಳಲಿರುವ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ವಿಪಕ್ಷ ನಾಯಕ ಘೋಷಣೆ ಸಾಧ್ಯತೆ

ನಾಳೆ ನಗರದಲ್ಲಿ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ರದ್ದು ಮಾಡಲಾಗಿದೆ. ಮುಂದಿನ ಕ್ರಮದ ಬಗ್ಗೆ ಹೈಕಮಾಂಡ್ ಜತೆ ಚರ್ಚಿಸಲು ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ನಾಳೆ ನವದೆಹಲಿಗೆ ಪ್ರಯಾಣ ಬೆಳೆಸಲಿದ್ದು, ವಿಪಕ್ಷ ನಾಯಕರ ಘೋಷಣೆ ಸಾಧ್ಯತೆ ಇದೆ.

ಬಿಜೆಪಿ ಶಾಸಕಾಂಗ ಪಕ್ಷದ ಸಭೆ ರದ್ದು: ನಾಳೆ ದೆಹಲಿಗೆ ತೆರಳಲಿರುವ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ವಿಪಕ್ಷ ನಾಯಕ ಘೋಷಣೆ ಸಾಧ್ಯತೆ
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ|

Updated on:Jul 01, 2023 | 8:40 PM

Share

ಬೆಂಗಳೂರು: ನಾಳೆ ನಗರದಲ್ಲಿ ನಿಗದಿಯಾಗಿದ್ದ ಬಿಜೆಪಿ (BJP) ಶಾಸಕಾಂಗ ಪಕ್ಷದ ಸಭೆ ರದ್ದು ಮಾಡಲಾಗಿದೆ. ಮುಂದಿನ ಕ್ರಮದ ಬಗ್ಗೆ ಹೈಕಮಾಂಡ್ ಜತೆ ಚರ್ಚಿಸಲು ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ನಾಳೆ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನಿಂದ ನವದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ನಾಳೆ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಬಿಜೆಪಿ ಸಭೆಯಲ್ಲಿ ಬಿಎಸ್​ ಯಡಿಯೂರಪ್ಪ ಭಾಗವಹಿಸಲಿದ್ದು, ಬಳಿಕ ದೆಹಲಿಯಲ್ಲೇ ವಿಧಾನಸಭೆ, ವಿಧಾನಪರಿಷತ್ ವಿಪಕ್ಷ ನಾಯಕ, ಮುಖ್ಯ ಸಚೇತಕರ ಹೆಸರು ಘೋಷಣೆ ನಿರೀಕ್ಷೆ ಇದೆ.

ಜುಲೈ 3 ರಂದು ಬಜೆಟ್ ಅಧಿವೇಶನ ಆರಂಭಗೊಳ್ಳಲಿದೆ. ಆದರೆ ಬಿಜೆಪಿ ಇನ್ನೂ ವಿರೋಧ ಪಕ್ಷದ ನಾಯಕನನ್ನು ನಾಮನಿರ್ದೇಶನ ಮಾಡಿಲ್ಲ. ಬಿಜೆಪಿ ಮೂಲಗಳ ಪ್ರಕಾರ, ಶಾಸಕಾಂಗ ಪಕ್ಷದ ಹೊಸ ನಾಯಕನನ್ನು ಆಯ್ಕೆ ಮಾಡಲು ಭಾನುವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ‘ನ್ಯೂಸ್ 9’ ವರದಿ ಮಾಡಿತ್ತು. ಸಭೆಯಲ್ಲಿ ಆಯ್ಕೆಯಾಗುವವರು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಇದನ್ನೂ ಓದಿ: ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಭಾನುವಾರ ಸಭೆ; ಯಾರಾಗಲಿದ್ದಾರೆ ಪ್ರತಿಪಕ್ಷ ನಾಯಕ?

ಮುಂಚೂಣಿಯಲ್ಲಿರುವ ಹೆಸರುಗಳು

ಪಕ್ಷದ ಹಲವು ಹಿರಿಯ ನಾಯಕರು ಈ ಹುದ್ದೆಯ ಮೇಲೆ ಕಣ್ಣಿಟ್ಟಿದ್ದು, 2024ರ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ನಿರ್ಧಾರ ನಿರ್ಣಾಯಕವಾಗಲಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಆರ್.ಅಶೋಕ, ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್​ ಹೆಸರು ಕೇಳಿಬಂದಿದೆ.

ಇನ್ನು ಇದೇ ವೇಳೆ, ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿಗೆ ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ವಿರುದ್ಧ ಬಹಿರಂಗ ಹೇಳಿಕೆ ನೀಡಿದ 11 ಪಕ್ಷದ ಮುಖಂಡರಿಗೆ ಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ನೋಟಿಸ್ ಜಾರಿ ಮಾಡಲಾಗಿದೆ.

ಇದನ್ನೂ ಓದಿ: ಸ್ವಪಕ್ಷದವರ ವಿರುದ್ಧವೇ ಬಹಿರಂಗ ಹೇಳಿಕೆ: ಯತ್ನಾಳ್, ರೇಣುಕಾಚಾರ್ಯಗೆ ಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ನೋಟಿಸ್ ಜಾರಿ

ಪಕ್ಷಕ್ಕೆ ಮುಜುಗರ ಉಂಟು ಮಾಡುವಂತಹ ಬಹಿರಂಗ ಹೇಳಿಕೆಗಳನ್ನು ನೀಡಬೇಡಿ ಎಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಹಾಗೂ ಬಿಎಸ್​ ಯಡಿಯೂರಪ್ಪ ಪಕ್ಷದ ಮುಖಂಡರಿಗೆ ಸೂಚಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:24 pm, Sat, 1 July 23