ಇಂದು ವಿರೋಧ ಪಕ್ಷದ ನಾಯಕನ ಆಯ್ಕೆ ಫೈನಲ್: ಒಕ್ಕಲಿಗ ನಾಯಕನಿಗೆ ಪಟ್ಟ ಫಿಕ್ಸ್​, ಯಾರು ಗೊತ್ತಾ?

Karnataka Opposition Leader: ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡ ಬಳಿಕ ಬಾಡಿಹೋಗಿದ್ದ ಕಮಲ ದಳಗಳು ಇದೀಗ ಮತ್ತೆ ನಳನಳಿಸುತ್ತಿವೆ. ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ ಬೆನ್ನಲ್ಲೇ ಇದೀಗ ಬಿಜೆಪಿಯಲ್ಲಿ ಒಂಒಂದೇ ಚಟುವಟಿಕೆಗಳು ಶುರುವಾಗಿದ್ದು, ಇಂದು ವಿರೋಧ ಪಕ್ಷದ ನಾಯಕನ ಆಯ್ಕೆ ಸಂಬಂಧ ಶಾಸಕಾಂಗ ಸಭೆ ನಡೆಯಲಿದೆ. ಈ ಸಭೆಯಲ್ಲಿ ಶಾಸಕ ಅಭಿಪ್ರಾಯ ಸಂಗ್ರಹಿಸಿ ವಿಪಕ್ಷ ನಾಯಕನ ಆಯ್ಕೆಯಾಗಲಿದೆ. ಹಾಗಾದ್ರೆ, ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಯಾರೆಲ್ಲಾ ಹೆಸರುಗಳು ಕೇಳಿಬಂದಿವೆ ಎನ್ನುವ ವಿವರ ಇಲ್ಲಿದೆ.

ಇಂದು ವಿರೋಧ ಪಕ್ಷದ ನಾಯಕನ ಆಯ್ಕೆ ಫೈನಲ್: ಒಕ್ಕಲಿಗ ನಾಯಕನಿಗೆ ಪಟ್ಟ ಫಿಕ್ಸ್​, ಯಾರು ಗೊತ್ತಾ?
ಬಿಜೆಪಿ ನಾಯಕರು
Follow us
ರಮೇಶ್ ಬಿ. ಜವಳಗೇರಾ
|

Updated on: Nov 17, 2023 | 8:52 AM

ಬೆಂಗಳೂರು (ನವೆಂಬರ್ 17): ರಾಜ್ಯ ಬಿಜೆಪಿಯಲ್ಲಿ (BJP) ಚಟುವಟಿಕೆಗಳು ಗರಿಗೆದರಿವೆ. ವಿಧಾನಸಭಾ ಚುನಾವಣೆಯಲ್ಲಿ (Karnataka Assembly Elections 2023)ಸೋಲುಂಡ ಬಳಿಕ ಬಾಡಿಹೋಗಿದ್ದ ಕಮಲ ದಳಗಳು ಇದೀಗ ಮತ್ತೆ ನಳನಳಿಸುತ್ತಿವೆ. ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ಎಸ್​ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಅಧಿಕೃತವಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಈ ಮೂಲಕ ರಾಜ್ಯ ಬಿಜೆಪಿ ಕಾರ್ಯಕರ್ತರಿಗೆ ಬಲ ತುಂಬಿಸುತ್ತಿರುವ ಬಿಜೆಪಿ ಹೈಕಮಾಂಡ್, ಇದೀಗ​ ರಾಜ್ಯದಲ್ಲಿ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಮುಂದಾಗಿದೆ. ಇಂದು ನವೆಂಬರ್ 17) ಸಂಜೆ ಬೆಂಗಳೂರಿನ ಐಟಿಸಿ ಗಾರ್ಡೆನಿಯಾ ಹೋಟೆಲ್​ನಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಯಲಿದ್ದು, ಸಭೆಯಲ್ಲಿ ವಿಪಕ್ಷ ನಾಯಕನ ಆಯ್ಕೆ ಪ್ರತಿಕ್ರಿಯೆ ನಡೆಯಲಿದೆ. ಇನ್ನು ಪ್ರತಿಪಕ್ಷ ಸ್ಥಾನಕ್ಕೆ ಹಲವಾರು ನಾಯಕರ ಹೆಸರುಗಳು ಕೇಳಿಬಂದಿದ್ದು, ಹೈಕಮಾಂಡ್ ಯಾರಿಗೆ ಮಣೆ ಹಾಕುತ್ತೆ ಎನ್ನುವುದು ಕುತೂಹಲ ಮೂಡಿಸಿದೆ.

ಎಲ್ಲಾ ಆಯಾಮಗಳಿಂದಲೂ ಲೆಕ್ಕಾಚಾರ ಹಾಕಿರುವ ಬಿಜೆಪಿ ಹೈಕಮಾಂಡ್​ ಅಳೆದೂ ತೂಗಿ ಪ್ರಬಲ ನಾಯಕನ ಆಯ್ಕೆ ಮಾಡುವ ಜೊತೆಗೆ ಎರಡೆರಡು ಶಕ್ತಿ ಕೇಂದ್ರಗಳು ನಿರ್ಮಾಣ ಆಗದಂತೆ ಎಚ್ಚರಿಕೆ ವಹಿಸಿದ್ದು, ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರ ಅಭಿಪ್ರಾಯ ಸಂಗ್ರಹಿಸಿದ ಬಳಿಕ ಅಂತಿಮವಾಗಿ ಹೈಕಮಾಂಡ್, ಅಧಿಕೃತವಾಗಿ ವಿಪಕ್ಷ ನಾಯಕರ ಯಾರು ಎನ್ನುವುದನ್ನು ಹೆಸರು ಘೋಷಣೆ ಮಾಡಲಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಸ್ಫೋಟವಾಗುತ್ತಾ ಬಿಜೆಪಿ ಭಿನ್ನಮತ? ವಿಜಯೇಂದ್ರ ಆಯ್ಕೆ ಬಗ್ಗೆ ವಿ ಸೋಮಣ್ಣ ಮಾರ್ಮಿಕ ಮಾತು ಹೀಗಿದೆ ನೋಡಿ

ರೇಸ್​ನಲ್ಲಿ ಯಾರ್ಯಾರು?

ವಿರೋಧ ಪಕ್ಷದ ನಾಯಕ ಎಂದರೆ ಮುಖ್ಯಮಂತ್ರಿ ಅಷ್ಟೇ ಅಧಿಕಾರ ಚಲಾಯಿಸುವ ಶಕ್ತಿ ಇರುತ್ತದೆ. ಆದರೆ ಆದೇಶ ಅಧಿಕಾರ ಇರುವುದಿಲ್ಲ ಅಷ್ಟೆ. ಇದರಿಂದ ಈ ಹುದ್ದೆ ಮೇಲೆ ಪ್ರಮುಖ ನಾಯಕರು ಕಣ್ಣಿಟ್ಟಿದ್ದಾರೆ. ಪ್ರಮುಖವಾಗಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​, ಕಾರ್ಕಳ ಶಾಸಕ ವಿ ಸುನೀಲ್​ ಕುಮಾರ್​, ಮಲ್ಲೇಶ್ವರ ಶಾಸಕ ಅಶ್ವತ್ಥ ನಾರಾಯಣ, ಪದ್ಮನಾಭ ನಗರ ಶಾಸಕ ಆರ್​ ಅಶೋಕ್​, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಮುಂಚೂಣಿಯಲ್ಲಿದ್ದಾರೆ.

ಆದರೆ, ರಾಜ್ಯಾಧ್ಯಕ್ಷರ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳುವುದು ಮಾತ್ರವಲ್ಲದೆ, ರಾಜ್ಯದಲ್ಲಿ ಬಿಜೆಪಿ ಅಂಗಪಕ್ಷವಾಗಿ ಎನ್​ಡಿಎ ಮೈತ್ರಿಕೂಟದಲ್ಲಿ ಸೇರ್ಪಡೆ ಆಗಿರುವ ಜೆಡಿಎಸ್​ ನಾಯಕ ಕುಮಾರಸ್ವಾಮಿ ಜೊತೆಗೂ ಉತ್ತಮ ಬಾಂಧವ್ಯ ಇಟ್ಟುಕೊಂಡು ಹೋಗುವಂತಹ ನಾಯಕನನ್ನು ಆಯ್ಕೆ ಮಾಡಲು ನಿರ್ಧಾರ ಮಾಡಿದೆ. ಈಗಾಗಲೇ ರಾಜ್ಯಾಧ್ಯಕ್ಷ ಸ್ಥಾನವನ್ನು ಲಿಂಗಾಯತ ಸಮುದಾಯಕ್ಕೆ ಕೊಟ್ಟಿದ್ದು, ವಿಪಕ್ಷ ನಾಯಕನ ಸ್ಥಾನವನ್ನು ಒಕ್ಕಲಿಗರಿಗೆ ಇಲ್ಲ ಹಿಂದೂಳಿದ ವರ್ಗದ ನಾಯಕನಿಗೆ ನೀಡಲಾಗುತ್ತದೆ ಎನ್ನಲಾಗಿದೆ.

ಇನ್ನು ರಾಜ್ಯದಲ್ಲಿ ಒಕ್ಕಲಿಗರು ಹಾಗು ಲಿಂಗಾಯರ ಸಮುದಾಯವೇ ರಾಜಕೀಯದ ಎರಡು ಶಕ್ತಿಗಳು ಎನ್ನುವುದನ್ನು ಎಲ್ಲರೂ ಒಪ್ಪಿಕೊಂಡಿದ್ದು, ಅದರ ಭಾಗವಾಗಿಯೇ ಲಿಂಗಾಯರು ಹಾಗು ಒಕ್ಕಲಿಗರಿಗೆ ಅಧಿಕಾರ ಹಂಚುವ ಕೆಲಸವನ್ನು ಬಿಜೆಪಿ ಹೈಕಮಾಂಡ್ ಮಾಡುತ್ತಿದೆ. ಹೀಗಾಗಿ ಬಸನಗೌಡ ಪಾಟೀಲ್ ಯತ್ನಾಳ್​ಗೆ ವಿಪಕ್ಷ ನಾಯಕನ ಸ್ಥಾನ ಸಿಗುವ ಸಾಧ್ಯತೆಗಳು ತೀರಾ ಕಡಿಮೆ. ಯಾಕಂದ್ರೆ ಲಿಂಗಾಯತ ಸಮುದಾಯಕ್ಕೆ ಈಗಾಗಲೇ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ.

ಮೂಲಗಳ ಪ್ರಕಾರ ಒಕ್ಕಲಿಗ ಕೋಟದಡಿಯಲ್ಲಿ ಅಶ್ವತ್ಥ್ ನಾರಾಯಣ ಹಾಗೂ ಆರ್ ಅಶೋಕ್ ಮಧ್ಯೆ ಪೈಪೋಟಿ ನಡೆದಿದೆ. ಈ ಇಬ್ಬರ ಬಗ್ಗೆ ಕೇಂದ್ರದ ನಾಯಕರು, ಶಾಸಕರ ಬಳಿ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಇನ್ನು ಹಿಂದೂಳಿದ ವರ್ಗದ ನಾಯಕನಿಗೆ ಮಣೆ ಹಾಕುವುದಾದರೆ ಸುನಿಲ್ ಕುಮಾರ್ ಕಾರ್ಕಳ ಹೆಸರು ಮುಂಚೂಣಿಯಲ್ಲಿದೆ. ಇವರ ಜೊತೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೆಸರು ಸಹ ಕೇಳಿಬರುತ್ತಿದೆ.

ಆರ್​. ಅಶೋಕ್​ ಪ್ರತಿಪಕ್ಷ ನಾಯಕ​?

ಪದ್ಮನಾಭ ನಗರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವ ಆರ್​. ಅಶೋಕ್ ವಿರೋಧ ಪಕ್ಷದ ನಾಯಕರಾಗುವುದು ಬಹುತೇಕ ಫಿಕ್ಸ್​ ಎನ್ನಲಾಗುತ್ತಿದೆ. ಆರ್​ ಅಶೋಕ್​, ರಾಜ್ಯದ ಉಪಮುಖ್ಯಮಂತ್ರಿ ಆಗಿ, ಕಂದಾಯ ಸಚಿವ, ಗೃಹ ಸಚಿವ, ಆರೋಗ್ಯ, ಸಾರಿಗೆ, ಪೌರಾಡಳಿತ ಸಚಿವರಾಗಿಯೂ ಕೆಲಸ ಮಾಡಿದ ಅನುಭವ ಇದೆ. ಇನ್ನು ರಾಜಕೀಯ ಅನುಭವ ಚೆನ್ನಾಗಿದ್ದು, ಹೊಂದಾಣಿಕೆ ಮಾಡಿಕೊಂಡು ಹೋಗುವ ಕಲೆಯೂ ಇದೆ. ಇಷ್ಟು ವರ್ಷಗಳ ಕಾಲ ವಿಧಾನಸಭೆಯಲ್ಲಿ ಕೆಲಸ ಮಾಡಿರುವ ಹಿನ್ನೆಲೆಯಲ್ಲಿ ಉತ್ತಮ ಸಂಸದೀಯ ಪಟು ಎಂದು ಹೇಳಬಹುದು.

ಪ್ರಮುಖವಾಗಿ ಜೆಡಿಎಸ್​ ಜೊತೆಗೆ ಹೋಂದಾಣಿಕೆ ಮಾಡಿಕೊಳ್ಳುವುದಕ್ಕೆ ಯಾವುದೇ ಸಮಸ್ಯೆ ಆಗುವುದಿಲ್ಲ. ಕುಮಾರಸ್ವಾಮಿ ಅಧಿಕೃತ ವಿರೋಧ ಪಕ್ಷದ ನಾಯಕ ಅಲ್ಲದಿದ್ದರೂ ಅಧಿಕೃತ ವಿರೋಧ ಪಕ್ಷವಾಗಿಯೇ ಕೆಲಸ ಮಾಡುತ್ತಾರೆ. ಕುಮಾರಸ್ವಾಮಿ ಹೋರಾಟಕ್ಕೆ ಆರ್​ ಅಶೋಕ್​ ಸಾಥ್​ ಕೊಟ್ಟರೆ ಸಾಕು ಎನ್ನುವುದು ಲೆಕ್ಕಾಚಾರ.

ವಿಧಾನ ಪರಿಷತ್​ ವಿಪಕ್ಷ ಸ್ಥಾನಕ್ಕೂ ಪೈಪೋಟಿ

ಇನ್ನು ವಿಧಾನ ಪರಿಷತ್​ ವಿಪಕ್ಷ ಸ್ಥಾನಕ್ಕೆ ಪೈಪೋಟಿ ಶುರುವಾಗಿದೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಒಕ್ಕಲ ಸಮುದಾಯಕ್ಕೆ ನೀಡಿದರೆ, ವಿಧಾನ ಪರಿಷತ್​ ವಿಪಕ್ಷ ನಾಯಕ ಸ್ಥಾನಕ್ಕೆ ಹಿಂದೂಳಿದ ವರ್ಗಕ್ಕೆ ನೀಡುವ ಬಗ್ಗೆ ಚಿಂತನೆಗಳು ನಡೆದಿವೆ. ಕೋಟ ಶ್ರೀನಿವಾಸ ಪೂಜಾರಿ, ತೇಜಸ್ವಿನಿ ಗೌಡ, ಛಲವಾದಿ ನಾರಾಯಣಸ್ವಾಮಿ ಮತ್ತು ಭಾರತಿ ಶೆಟ್ಟಿ ರೇಸ್​​ನಲ್ಲಿದ್ದಾರೆ. ಆದ್ರೆ, ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಣೆ ಹಾಕುವ ಸಾಧ್ಯತೆಗಳು ಹೆಚ್ಚಿವೆ. ಈಗಾಗಲೇ ಈ ಹಿಂದೆಯೂ ಸಹ ಶ್ರೀನಿವಾಸ ಪೂಜಾರಿ ಅವರು ವಿಪಕ್ಷ ನಾಯಕ ಸ್ಥಾನವನ್ನು ನಿಭಾಯಿಸಿದ್ದಾರೆ. ಮತ್ತೆ ಅವರನ್ನು ಆಯ್ಕೆ ಖಚಿತ ಎನ್ನಲಾಗಿದೆ.

ವಿಧಾನಸಭೆ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕ ಸ್ಥಾನಕ್ಕೆ ಇಂದು ಆಯ್ಕೆ ಪ್ರತಿಕ್ರಿಯೆ ನಡೆಯಲಿದ್ದು,  ವೀಕ್ಷಕರಾಗಿರುವ ಕೇಂದ್ರ ಸಚಿವೆ ನಿರ್ಮಲಾ‌ ಸೀತಾರಾಮನ್ ಅವರು ಶಾಸಕ ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್​ಗೆ ಮಾಹಿತಿ ನೀಡಲಿದ್ದಾರೆ. ಆದ್ರೆ, ಹೈಕಮಾಂಡ್​ ಯಾರಿಗೆ ಮಣೆ ಹಾಕುತ್ತೆ ಎನ್ನುವುದೇ ಕುತೂಹಲ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್