ಸರಿಯಾದ ದಿಕ್ಕಿನಲ್ಲಿ ಪ್ರಯತ್ನಿಸಿದರೆ ಬೆಂಗಳೂರಿನಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ ಗೆಲ್ಲುವ ಅವಕಾಶ: ಧರ್ಮೇಂದ್ರ ಪ್ರಧಾನ್

|

Updated on: Feb 23, 2023 | 11:07 PM

ಈ ಹಿಂದಿನ ಚುನಾವಣೆಯಲ್ಲಿ 18 ಸ್ಥಾನ ಗೆದ್ದಿದ್ದೇವೆ, ಈ ಸಲ ರೆಕಾರ್ಡ್‌ ಬ್ರೇಕ್ ಮಾಡಬಹುದು. ಬೆಂಗಳೂರಿನಲ್ಲಿ ಕೆಲಸ ಮಾಡಿದರೆ ಹೆಚ್ಚು ಸ್ಥಾನ ಗೆಲ್ಲುವ ಅವಕಾಶವಿದೆ ಎಂದು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಸರಿಯಾದ ದಿಕ್ಕಿನಲ್ಲಿ ಪ್ರಯತ್ನಿಸಿದರೆ ಬೆಂಗಳೂರಿನಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ ಗೆಲ್ಲುವ ಅವಕಾಶ: ಧರ್ಮೇಂದ್ರ ಪ್ರಧಾನ್
ಧರ್ಮೇಂದ್ರ ಪ್ರಧಾನ್ ಜೊತೆ ಬಸವರಾಜ ಬೊಮ್ಮಾಯಿ ಮತ್ತು ಆರ್.ಅಶೋಕ್
Follow us on

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಸಮೀಪಿಸುತ್ತಿದ್ದಂತೆ ಬಿಜೆಪಿ ಹೈಕಮಾಂಡ್ ಫುಲ್ ಆ್ಯಕ್ಟಿವ್ ಆಗಿದ್ದು, ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi), ಬಿಜೆಪಿ ಚಾಣಕ್ಯ ಅಮಿತ್ ಶಾ (Amit Shah) ಸೇರಿದಂತೆ ಘಟಾನುಘಟಿ ನಾಯಕರು ಆಗಮಿಸುತ್ತಿದ್ದಾರೆ. ಹೀಗೆ ಬಂದ ನಾಯಕರು ಸಮಾವೇಶಗಳಲ್ಲಿ ಭಾಗಿಯಾಗುತ್ತಿದ್ದು, ಪಕ್ಷದ ನಾಯಕರು, ಮುಖಂಡರ ಸಭೆಗಳನ್ನು ನಡೆಸುತ್ತಿದ್ದಾರೆ. ಅದರಂತೆ ಇಂದು ಬೆಂಗಳೂರು ಬಿಜೆಪಿ ನಾಯಕರ ಸಭೆ ನಡೆಯಿತು. ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ (Dharmendra Pradhan) ಮತ್ತು ಸಹ ಉಸ್ತುವಾರಿ ಮನ್​ಸುಖ್‌ ಮಾಂಡವೀಯ (Mansukh L. Mandaviya) ಅವರ ನೇತೃತ್ವದಲ್ಲಿ ಈ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಧರ್ಮೇಂದ್ರ ಪ್ರಧಾನ್, ಬೆಂಗಳೂರಿನಲ್ಲಿ ನಮಗೆ ಹೆಚ್ಚು ಸ್ಥಾನ ಗೆಲ್ಲುವ ಎಲ್ಲಾ ಅವಕಾಶಗಳಿವೆ. ಸರಿಯಾದ ದಿಕ್ಕಿನಲ್ಲಿ ಪ್ರಯತ್ನಿಸಿದರೆ ಖಂಡಿತ ಫಲಿತಾಂಶ ಸಿಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಕೆಲಸ ಮಾಡಿದರೆ ಹೆಚ್ಚು ಸ್ಥಾನ ಗೆಲ್ಲುವ ಅವಕಾಶವಿದೆ ಎಂಬ ಮಾಹಿತಿ ನಮಗೆ ಇದೆ. ಈ ಹಿಂದೆ ನಡೆದ ಚುನಾವಣೆಯಲ್ಲಿ ನಾವು 18 ಸ್ಥಾನಗಳನ್ನು ಗೆದ್ದಿದ್ದೇವೆ, ಈ ಸಲ ರೆಕಾರ್ಡ್‌ ಬ್ರೇಕ್ ಮಾಡಬಹುದು. ಬೆಂಗಳೂರಿನ ನೀವೆಲ್ಲರೂ ಸಮರ್ಥರು, ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಕೆಲಸ ಮಾಡಿ. ಬೆಂಗಳೂರು ನಗರದ ಸುತ್ತಮುತ್ತಲಿನ ಕ್ಷೇತ್ರಗಳತ್ತಲೂ ಗಮನಹರಿಸಿ ಎಂದು ಧರ್ಮೇಂದ್ರ ಪ್ರಧಾನ್ ಅವರು ಸಲಹೆ ನೀಡಿದರು.

ಇದನ್ನೂ ಓದಿ: Amit Shah: ಈ ಬಾರಿ ಕರ್ನಾಟಕದಲ್ಲಿ ಪೂರ್ಣ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಮಿತ್ ಶಾ 

ಪೇಜ್ ಪ್ರಮುಖ್, ಬೂತ್ ಸಮಿತಿ ಎಲ್ಲವೂ ಆಕ್ಟೀವ್ ಇರಬೇಕು

ಸಭೆಯಲ್ಲಿ ಮಾತನಾಡಿದ ಮನ್​ಸುಖ್ ಮಾಂಡವೀಯ, ಪಕ್ಷದ ಕಾರ್ಯಕ್ರಮಗಳು ಸೂಕ್ತವಾಗಿ ಕಾರ್ಯರೂಪದಲ್ಲಿರಲಿ. ಪೇಜ್ ಪ್ರಮುಖ್, ಬೂತ್ ಸಮಿತಿ ಎಲ್ಲವೂ ಆಕ್ಟೀವ್ ಇರಬೇಕು. ಮನೆಯನ್ನು ಒಂದು ಬಾರಿ ಮಾತ್ರ ನಾವು ಗುಡಿಸುವುದಲ್ಲ. ಪ್ರತೀ ದಿನ ಮನೆ ಗುಡಿಸುವಂತೆ ಪ್ರತೀ ದಿನವೂ ನಾವು ಕೆಲಸ ಮಾಡಬೇಕು. ಆಗ ಮಾತ್ರ ನಿರೀಕ್ಷಿತ ಫಲಿತಾಂಶ ಲಭ್ಯವಾಗಲಿದೆ. ವಾರ್ಡ್​ಗಳಲ್ಲಿ ಸಭೆಗಳು ಆಗಬೇಕು. ಸರ್ಕಾರದ ಯೋಜನೆಗಳು ನಿಯಮಿತವಾಗಿ ತಲುಪಬೇಕು. ನಿಮಗೆ ವಹಿಸಲ್ಪಟ್ಟ ಜವಾಬ್ದಾರಿಗಳು ಕಾಲಮಿತಿಯಲ್ಲಿ ನೆರವೇರಲಿ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:03 pm, Thu, 23 February 23