AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಸ್ಟ್​ಮಾರ್ಟಮ್ ಆದ್ಮೇಲೆ ಇನ್ನೇನ್ ಮಾತಾಡ್ಲಿ: ವಿಧಾನ ಪರಿಷತ್ ಸೋಲಿನ ಅಸಮಾಧಾನ ಹೊರಹಾಕಿದ ಕವಟಗಿಮಠ

ಎಲ್ಲ ವಿಷಯವನ್ನೂ ಬಹಿರಂಗವಾಗಿ ಹೇಳಲು ಆಗುವುದಿಲ್ಲ. ಅತಿಯಾದ ಆತ್ಮವಿಶ್ವಾಸವೂ ಸೋಲಿಗೆ ಕಾರಣ ಎಂದರು.

ಪೋಸ್ಟ್​ಮಾರ್ಟಮ್ ಆದ್ಮೇಲೆ ಇನ್ನೇನ್ ಮಾತಾಡ್ಲಿ: ವಿಧಾನ ಪರಿಷತ್ ಸೋಲಿನ ಅಸಮಾಧಾನ ಹೊರಹಾಕಿದ ಕವಟಗಿಮಠ
ಮಹಾಂತೇಶ ಕವಟಗಿಮಠ ಮತ್ತು ನಳಿನ್ ಕುಮಾರ್ ಕಟೀಲ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 20, 2021 | 9:24 PM

ಬೆಳಗಾವಿ: ಕರ್ನಾಟಕದಲ್ಲಿ ಈಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಲ್ಲಿ ಬಿಜೆಪಿ ಸೋಲಿನ ಕುರಿತು ಸೋಮವಾರ ಆತ್ಮಾವಲೋಕನ ನಡೆಯಿತು. ಖಾಸಗಿ ಹೋಟೆಲ್​ನಲ್ಲಿ ನಡೆದ ಅವಲೋಕನ ಸಭೆಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಬಿಜೆಪಿ ಪರಾಜಿತ ಅಭ್ಯರ್ಥಿ ಮಹಾಂತೇಶ ಕವಟಗಿಮಠ, ಎಲ್ಲ ಪೋಸ್ಟ್​ಮಾರ್ಟಮ್ ಆದಮೇಲೆ ಇನ್ನೇನು ಮಾತಾಡಬೇಕು ಎಂದು ಅವರು ನೇರವಾಗಿ ತಮ್ಮ ಸೋಲಿನ ಕುರಿತ ಬೇಸರ ಹೊರಹಾಕಿದರು. ಎಲ್ಲಿ ತಪ್ಪಾಗಿದೆ ಎಂಬ ಬಗ್ಗೆ ರಾಜ್ಯಾಧ್ಯಕ್ಷರು ವಿವರ ಪಡೆದಿದ್ದಾರೆ. ಸಭೆಯಲ್ಲಿ ಯಾರ ಬಗ್ಗೆಯೂ ಶಿಸ್ತುಕ್ರಮ ಜರುಗಿಸುವ ಚರ್ಚೆ ಆಗಲಿಲ್ಲ. ಸಮನ್ವಯದ ಕೊರತೆಯೇ ನನ್ನ ಸೋಲಿಗೆ ಕಾರಣ. ಪಕ್ಷೇತರರ ಅಭ್ಯರ್ಥಿಯಿಂದಾಗಿ ಸೋಲೊಪ್ಪಬೇಕಾಯಿತು ಎಂದು ನಾನು ಹೇಳುವುದಿಲ್ಲ. ನಾನು ಹೇಳಬೇಕು ಎಂದುಕೊಂಡಿದ್ದ ಎಲ್ಲ ವಿವರಗಳನ್ನೂ ಪಕ್ಷದ ವೇದಿಕೆಯಲ್ಲಿ ಹೇಳಿದ್ದೇನೆ. ಎಲ್ಲ ವಿಷಯವನ್ನೂ ಬಹಿರಂಗವಾಗಿ ಹೇಳಲು ಆಗುವುದಿಲ್ಲ. ಪ್ರಥಮ ಪ್ರಾಶಸ್ತ್ಯ ಮತ ಕೇಳುವುದರಲ್ಲಿ ನಾವು ವಿಫಲರಾದೆವು ಎನ್ನಲು ಆಗುವುದಿಲ್ಲ. ಅತಿಯಾದ ಆತ್ಮವಿಶ್ವಾಸವೂ ಸೋಲಿಗೆ ಕಾರಣ ಎಂದರು.

ಅವಲೋಕನಾ ಸಭೆ ಬಳಿಕ ಮಾತನಾಡಿದ ಮಾಜಿ ಸಚಿವ ಲಕ್ಷ್ಮಣ ಸವದಿ, ಸೋಲಿನ‌ ಬಗ್ಗೆ ವರಿಷ್ಠರು ಅಂತರಿಕ ವರದಿ ತರಿಸಿಕೊಂಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ 15 ಕ್ಷೇತ್ರ ಗೆಲ್ಲುವ ಬಗ್ಗೆ ಚರ್ಚೆ ನಡೆಯಿತು. ಈ ಸಭೆಯಲ್ಲಿ ಕವಟಗಿಮಠ ಸೋಲಿನ ಬಗ್ಗೆ ಹೆಚ್ಚು ಚರ್ಚೆಯಾಗಲಿಲ್ಲ ಎಂದರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಮಾತನಾಡಿ, ಸೋಲಿನ ಕುರಿತು ಸಭೆಯಲ್ಲಿ ಪರಾಮರ್ಶೆ ಮಾಡಲಾಗಿದೆ. ಸಭೆಯಲ್ಲಿ ಎಲ್ಲರ ಅಭಿಪ್ರಾಯವನ್ನೂ ಪಡೆದುಕೊಂಡಿದ್ದೇವೆ. ಮತ್ತಷ್ಟು ಜನರ ಅಭಿಪ್ರಾಯ ಸಂಗ್ರಹಿಸುವುದು ಬಾಕಿ ಇದೆ ಎಂದರು.

ಅಶಿಸ್ತಿನ ವರ್ತನೆ ತೋರಿದರೆ ಶಿಸ್ತು ಕ್ರಮ ಜರುಗಿಸಲಾಗುವುದು. ಮತ್ತೊಂದು ದೊಡ್ಡಮಟ್ಟದ ಅವಲೋಕನ ಸಭೆಯ ಬಳಿಕ ಕಾರಣ ಸೋಲಿಗೆ ಕಾರಣ ಹುಡುಕಲಾಗುತ್ತದೆ. ಮತದಾರ ಬೇರೆ ರೀತಿಯ ಆಲೋಚನೆ ಮಾಡಿದ್ದರಿಂದ ಬಿಜೆಪಿಗೆ ಸೋಲುಂಟಾಯಿತು ಎಂದು ಹೇಳಿದರು. ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ನೇತೃತ್ವದಲ್ಲಿ ಸಭೆ ನಡೆಯಿತು. ಬೆಳಗಾವಿ ಜಿಲ್ಲೆಯ ಬಿಜೆಪಿ ನಾಯಕರಾದ ರಮೇಶ್ ಜಾರಕಿಹೊಳಿ, ಉಮೇಶ್ ಕತ್ತಿ, ಪಿ.ರಾಜೀವ್, ಬಾಲಚಂದ್ರ ಜಾರಕಿಹೊಳಿ, ಲಕ್ಷ್ಮಣ ಸವದಿ ಸಭೆಯಿಂದ ದೂರವೇ ಉಳಿದಿದ್ದರು.

ಇದನ್ನೂ ಓದಿ: Karnataka Anti Conversion Bill 2021: ಮತಾಂತರ ನಿಷೇಧ ಮಸೂದೆಗೆ ಸಂಪುಟ ಒಪ್ಪಿಗೆ ಇದನ್ನೂ ಓದಿ: ವಿಧಾನ ಪರಿಷತ್​ನಲ್ಲಿ ಪ್ರತಿಧ್ವನಿಸಿದ ದುರ್ಬಲ ಗೃಹಮಂತ್ರಿ ಆಕ್ಷೇಪ: ಕಾವೇರಿದ ಚರ್ಚೆ, ಗದ್ದಲ, ಸಭಾತ್ಯಾಗ

ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ