AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಣಿಯಲಾರದವನಿಗೆ ನೆಲ ಡೊಂಕು ಎಂಬಂತಿದೆ ಕಾಂಗ್ರೆಸ್ ಸ್ಥಿತಿ: ಟ್ವೀಟ್ ಮೂಲಕ ಹರಿಹಾಯ್ದ ಸಚಿವ ಸುಧಾಕರ

‘ಇಲ್ಲಸಲ್ಲದ ಆರೋಪ ಮಾಡಿ ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿರುವುದು ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಸವರಿದ ಕಥೆಯನ್ನು ನೆನಪಿಸುತ್ತದೆ’ ಎಂದು ಅವರು ಹೇಳಿದ್ದಾರೆ.

ಕುಣಿಯಲಾರದವನಿಗೆ ನೆಲ ಡೊಂಕು ಎಂಬಂತಿದೆ ಕಾಂಗ್ರೆಸ್ ಸ್ಥಿತಿ: ಟ್ವೀಟ್ ಮೂಲಕ ಹರಿಹಾಯ್ದ ಸಚಿವ ಸುಧಾಕರ
ಆರೋಗ್ಯ ಸಚಿವ ಡಾ ಕೆ.ಸುಧಾಕರ್
TV9 Web
| Edited By: |

Updated on:Nov 20, 2022 | 11:08 AM

Share

ಬೆಂಗಳೂರು: ಮತದಾರರ ಗುರುತಿನ ಚೀಟಿ ರದ್ದುಪಡಿಸುವ ಅವ್ಯವಹಾರ ಇದೀಗ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ದೊಡ್ಡಮಟ್ಟದ ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ. ಎರಡೂ ಪಕ್ಷಗಳು ಪರಸ್ಪರ್​ ಆನ್​ಲೈನ್-ಆಫ್​ಲೈನ್​ನಲ್ಲಿ ಹರಿಹಾಯುತ್ತಲೇ ಇವೆ. ಇದೀಗ ಅರೋಗ್ಯ ಸಚಿವ ಡಾ ಕೆ.ಸುಧಾಕರ್ ಕಾಂಗ್ರೆಸ್ ವಿರುದ್ಧ ಸರಣಿ ಟ್ವೀಟ್​ಗಳನ್ನು ಮಾಡಿ ಹಳೆಯ ವಿಚಾರಗಳನ್ನು ಮತ್ತೊಮ್ಮೆ ಕೆದಕಿದ್ದಾರೆ. ‘ಸುಳ್ಳುಗಳ ಸರಮಾಲೆ ಹೆಣೆಯುತ್ತಿದೆ ಕಾಂಗ್ರೆಸ್’ ಎಂದು ಹಳೆಯ ಪತ್ರವೊಂದರ ಫೋಟೊವನ್ನು ಟ್ವೀಟ್ ಮಾಡಿದ್ದಾರೆ.

‘ಕುಣಿಯಲಾರದವನಿಗೆ ನೆಲ ಡೊಂಕು ಎಂಬಂತೆ ಜನರ ವಿಶ್ವಾಸ ಕಳೆದುಕೊಂಡು ಹತಾಶಗೊಂಡಿರುವ ಕಾಂಗ್ರೆಸ್ ಪಕ್ಷವು ಮತಯಂತ್ರಗಳ ಮೇಲೆ ಸಂಶಯ ಮೂಡಿಸುವುದು, ಚುನಾವಣಾ ಆಯೋಗದ ಬಗ್ಗೆ ಅಪಸ್ವರ ಎತ್ತುವುದು ಹೀಗೆ ಒಂದಲ್ಲಾ ಒಂದು ಕ್ಯಾತೆ ತೆಗೆಯುತ್ತಲೇ ಬಂದಿದೆ. ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ ಆರೋಪ ಈ ಸುಳ್ಳುಗಳ ಸರಮಾಲೆಗೆ ಹೊಸ ಸೇರ್ಪಡೆಯಷ್ಟೆ’ ಎಂದು ಸುಧಾಕರ್ ಹೇಳಿದ್ದಾರೆ.

‘ಬಿಜೆಪಿ ಸರ್ಕಾರದ ವಿರುದ್ಧ ರಚನಾತ್ಮಕ ಹೋರಾಟ ಮಾಡಲು ಯಾವುದೇ ವಿಷಯಗಳಲ್ಲಿದೆ ಹತಾಶಗೊಂಡಿರುವ ಕಾಂಗ್ರೆಸ್ ನಾಯಕರು ದಿನಕ್ಕೊಂದು ಕಟ್ಟುಕಥೆ ಸೃಷ್ಟಿಸುವ ಹುನ್ನಾರ ನಡೆಸುತ್ತಿದ್ದಾರೆ. ಬಿಜೆಪಿ ಪಕ್ಷ ಹಾಗೂ ಸರ್ಕಾರದ ವರ್ಚಸ್ಸಿಗೆ ಮಸಿ ಬಳಿಯುವ ಭರಾಟೆಯಲ್ಲಿ ತಮಗೆ ತಾವೇ ಮಸಿ ಬಳಿದುಕೊಳ್ಳುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ.

‘ದಿಟ್ಟ ನಾಯಕತ್ವ, ಅಭಿವೃದ್ಧಿ, ಸುಶಾಸನ, ಭ್ರಷ್ಟಾಚಾರ-ಮುಕ್ತ ಆಡಳಿತ ನೀಡುವ ಮೂಲಕ ದೇಶಾದ್ಯಂತ ಜನಮನ್ನಣೆ ಪಡೆಯುತ್ತಿರುವ ನಮ್ಮ ಪಕ್ಷಕ್ಕೆ ಚುನಾವಣೆ ಗೆಲ್ಲಲು ಯಾವುದೇ ವಾಮಮಾರ್ಗದ ಅವಶ್ಯಕತೆಯೂ ಇಲ್ಲ. ನಮಗೆ ಅದರ ಬಗ್ಗೆ ನಂಬಿಕೆಯೂ ಇಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

‘ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ 2017ರಲ್ಲಿ ಅಂದಿನ ಕಾಂಗ್ರೆಸ್ ಸರಕಾರವೇ ಅನುಮತಿ ಕೊಟ್ಟ ಒಂದು ಸಂಸ್ಥೆಯ ಮೇಲೆ ಈಗ ಇಲ್ಲಸಲ್ಲದ ಆರೋಪ ಮಾಡಿ ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿರುವುದು ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಸವರಿದ ಕಥೆಯನ್ನು ನೆನಪಿಸುತ್ತದೆ’ ಎಂದು ಅವರು ಹೇಳಿದ್ದಾರೆ.

Published On - 11:08 am, Sun, 20 November 22

Follow Us
ನನ್ನ ಮೇಲೂ ಇಡಿ ದಾಳಿ ಆಗಬಹುದು: ಪ್ರಿಯಾಂಕ್ ಖರ್ಗೆ
ನನ್ನ ಮೇಲೂ ಇಡಿ ದಾಳಿ ಆಗಬಹುದು: ಪ್ರಿಯಾಂಕ್ ಖರ್ಗೆ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ