ಬೆಂಗಳೂರು: ಮತದಾರರ ಗುರುತಿನ ಚೀಟಿ ರದ್ದುಪಡಿಸುವ ಅವ್ಯವಹಾರ ಇದೀಗ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ದೊಡ್ಡಮಟ್ಟದ ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ. ಎರಡೂ ಪಕ್ಷಗಳು ಪರಸ್ಪರ್ ಆನ್ಲೈನ್-ಆಫ್ಲೈನ್ನಲ್ಲಿ ಹರಿಹಾಯುತ್ತಲೇ ಇವೆ. ಇದೀಗ ಅರೋಗ್ಯ ಸಚಿವ ಡಾ ಕೆ.ಸುಧಾಕರ್ ಕಾಂಗ್ರೆಸ್ ವಿರುದ್ಧ ಸರಣಿ ಟ್ವೀಟ್ಗಳನ್ನು ಮಾಡಿ ಹಳೆಯ ವಿಚಾರಗಳನ್ನು ಮತ್ತೊಮ್ಮೆ ಕೆದಕಿದ್ದಾರೆ. ‘ಸುಳ್ಳುಗಳ ಸರಮಾಲೆ ಹೆಣೆಯುತ್ತಿದೆ ಕಾಂಗ್ರೆಸ್’ ಎಂದು ಹಳೆಯ ಪತ್ರವೊಂದರ ಫೋಟೊವನ್ನು ಟ್ವೀಟ್ ಮಾಡಿದ್ದಾರೆ.
‘ಕುಣಿಯಲಾರದವನಿಗೆ ನೆಲ ಡೊಂಕು ಎಂಬಂತೆ ಜನರ ವಿಶ್ವಾಸ ಕಳೆದುಕೊಂಡು ಹತಾಶಗೊಂಡಿರುವ ಕಾಂಗ್ರೆಸ್ ಪಕ್ಷವು ಮತಯಂತ್ರಗಳ ಮೇಲೆ ಸಂಶಯ ಮೂಡಿಸುವುದು, ಚುನಾವಣಾ ಆಯೋಗದ ಬಗ್ಗೆ ಅಪಸ್ವರ ಎತ್ತುವುದು ಹೀಗೆ ಒಂದಲ್ಲಾ ಒಂದು ಕ್ಯಾತೆ ತೆಗೆಯುತ್ತಲೇ ಬಂದಿದೆ. ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ ಆರೋಪ ಈ ಸುಳ್ಳುಗಳ ಸರಮಾಲೆಗೆ ಹೊಸ ಸೇರ್ಪಡೆಯಷ್ಟೆ’ ಎಂದು ಸುಧಾಕರ್ ಹೇಳಿದ್ದಾರೆ.
‘ಬಿಜೆಪಿ ಸರ್ಕಾರದ ವಿರುದ್ಧ ರಚನಾತ್ಮಕ ಹೋರಾಟ ಮಾಡಲು ಯಾವುದೇ ವಿಷಯಗಳಲ್ಲಿದೆ ಹತಾಶಗೊಂಡಿರುವ ಕಾಂಗ್ರೆಸ್ ನಾಯಕರು ದಿನಕ್ಕೊಂದು ಕಟ್ಟುಕಥೆ ಸೃಷ್ಟಿಸುವ ಹುನ್ನಾರ ನಡೆಸುತ್ತಿದ್ದಾರೆ. ಬಿಜೆಪಿ ಪಕ್ಷ ಹಾಗೂ ಸರ್ಕಾರದ ವರ್ಚಸ್ಸಿಗೆ ಮಸಿ ಬಳಿಯುವ ಭರಾಟೆಯಲ್ಲಿ ತಮಗೆ ತಾವೇ ಮಸಿ ಬಳಿದುಕೊಳ್ಳುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ.
‘ದಿಟ್ಟ ನಾಯಕತ್ವ, ಅಭಿವೃದ್ಧಿ, ಸುಶಾಸನ, ಭ್ರಷ್ಟಾಚಾರ-ಮುಕ್ತ ಆಡಳಿತ ನೀಡುವ ಮೂಲಕ ದೇಶಾದ್ಯಂತ ಜನಮನ್ನಣೆ ಪಡೆಯುತ್ತಿರುವ ನಮ್ಮ ಪಕ್ಷಕ್ಕೆ ಚುನಾವಣೆ ಗೆಲ್ಲಲು ಯಾವುದೇ ವಾಮಮಾರ್ಗದ ಅವಶ್ಯಕತೆಯೂ ಇಲ್ಲ. ನಮಗೆ ಅದರ ಬಗ್ಗೆ ನಂಬಿಕೆಯೂ ಇಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ 2017ರಲ್ಲಿ ಅಂದಿನ ಕಾಂಗ್ರೆಸ್ ಸರಕಾರವೇ ಅನುಮತಿ ಕೊಟ್ಟ ಒಂದು ಸಂಸ್ಥೆಯ ಮೇಲೆ ಈಗ ಇಲ್ಲಸಲ್ಲದ ಆರೋಪ ಮಾಡಿ ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿರುವುದು ‘ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಸವರಿದಂತಾಗಿದೆ.’
1/4 pic.twitter.com/1RHnZXzEsy
— Dr Sudhakar K (@mla_sudhakar) November 20, 2022
‘ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ 2017ರಲ್ಲಿ ಅಂದಿನ ಕಾಂಗ್ರೆಸ್ ಸರಕಾರವೇ ಅನುಮತಿ ಕೊಟ್ಟ ಒಂದು ಸಂಸ್ಥೆಯ ಮೇಲೆ ಈಗ ಇಲ್ಲಸಲ್ಲದ ಆರೋಪ ಮಾಡಿ ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿರುವುದು ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಸವರಿದ ಕಥೆಯನ್ನು ನೆನಪಿಸುತ್ತದೆ’ ಎಂದು ಅವರು ಹೇಳಿದ್ದಾರೆ.
Published On - 11:08 am, Sun, 20 November 22