ಕರ್ನಾಟಕ ವಿಧಾನಪರಿಷತ್‌ನ ನೂತನ ಉಪಸಭಾಪತಿಯಾಗಿ ಬಿಜೆಪಿಯ ಎಂ.ಕೆ.ಪ್ರಾಣೇಶ್ ಆಯ್ಕೆ
ವಿಧಾನಪರಿಷತ್‌ನ ನೂತನ ಉಪಸಭಾಪತಿಯಾಗಿ ಬಿಜೆಪಿಯ ಎಂ.ಕೆ.ಪ್ರಾಣೇಶ್ ಆಯ್ಕೆಯಾಗಿದ್ದಾರೆ.
ಬೆಳಗಾವಿ: ವಿಧಾನಪರಿಷತ್‌ನ ನೂತನ ಉಪಸಭಾಪತಿಯಾಗಿ ಬಿಜೆಪಿಯ ಎಂ.ಕೆ.ಪ್ರಾಣೇಶ್ (mk pranesh) ಆಯ್ಕೆಯಾಗಿದ್ದಾರೆ. ಇಂದು(ಡಿಸೆಂಬರ್ 23) ನಡೆದ ಉಪಸಭಾಪತಿ ಚುನಾವಣೆಯಲ್ಲಿ ಬಿಜೆಪಿಯ ಎಂ.ಕೆ.ಪ್ರಾಣೇಶ್ 39 ಮತಗಳನ್ನು ಪಡೆದರೆ ಕಾಂಗ್ರೆಸ್‌ನ ಅರವಿಂದ್ ಅರಳಿ 26 ಮತಗಳನ್ನ ಪಡೆದಿದ್ದಾರೆ.
ಜೆಡಿಎಸ್ ಸದಸ್ಯರು ಮತದಾನ ಮಾಡದೆ ತಟಸ್ಥರಾಗಿದ್ದರು. ಕೋಟಾ ಶ್ರೀನಿವಾಸ್ ಪೂಜಾರಿ, ಎಸ್. ರುದ್ರೇಗೌಡ,ತಳವಾರ್ ಸಾಬಣ್ಣ, ಅರುಣ್ ಡಿಎಸ್ ಅವರು ಬಿಜೆಪಿಯಿಂದ ಎಂ.ಕೆ ಪ್ರಾಣೇಶ್ ಹೆಸರು ಉಪಸಭಾಪತಿ ಸ್ಥಾನಕ್ಕೆ ಪ್ರಸ್ತಾಪ ಮಾಡಿದರು. ಇನ್ನು ಉಪಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ನಿಂದ ಅರವಿಂದ ಕುಮಾರ್ ಅರಳಿ ಅವರ ಹೆಸರನ್ನು ಬಿ.ಕೆ. ಹರಿಪಸ್ರಾದ್ ಪ್ರಸ್ತಾಪ ಮಾಡಿದರು.
ಪ್ರಾಣೇಶ್ ಪರ ಮತ ಚಲಾಯಿಸುವವರು ಎದ್ದು ನಿಲ್ಲುವಂತೆ ಸೂಚಿಸಿದ್ದು ಪ್ರಾಣೇಶ್ ಪರ 39 ಮತಗಳು ಚಲಾವಣೆಗೊಂಡಿವೆ. ಇನ್ನೂ ಜೆಡಿಎಸ್ ಪಕ್ಷದಿಂದ ಯಾರೊಬ್ಬರೂ ಕೂಡ ಮತ ಚಲಾಯಿಸಿರಲಿಲ್ಲ. ಪ್ರಸ್ತಾವದ ಪರವಾಗಿ 39 ಮತಗಳು ಬಂದಿವೆ. ಪ್ರಸ್ತಾವದ ವಿರೋಧವಾಗಿ 26 ಮತಗಳು ಬಂದವು. ಅಂತಿಮವಾಗಿ ಪ್ರಾಣೇಶ್ ಅವರು ಉಪಸಭಾಪತಿಯಾಗಿ ಆಯ್ಕೆಯಾಗಿದ್ದಾರೆಂದು ಸಭಾಪತಿ ಬಸವರಾಜ್ ಹೊರಟ್ಟಿ ಘೋಷಣೆ ಮಾಡಿದರು.
ಗುರುವಾರ ಬಿಜೆಪಿ-ಕಾಂಗ್ರೆಸ್ ನಾಯಕರು ವಿಧಾನಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮೀರವರಿಗೆ ನಾಮಪತ್ರವನ್ನ ಸಲ್ಲಿಸಿದ್ದರು. ಸಂಖ್ಯಾಬಲದ ಪ್ರಕಾರ ಬಿಜೆಪಿ 39, ಕಾಂಗ್ರೆಸ್ 26, ಜೆಡಿಎಸ್ 8 ಹಾಗೂ ಪಕ್ಷೇತರರು 2 ಸದಸ್ಯರಿದ್ದಾರೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 2:28 pm, Fri, 23 December 22