ಕೊನೆಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿ ಮಾಡಿದ ಶಾಸಕ ಅರವಿಂದ್ ಬೆಲ್ಲದ್
ಇಂದು ಕೊನೆಗೂ ಭೇಟಿ ನಡೆಸಿದ ಶಾಸಕ ಅರವಿಂದ್ ಬೆಲ್ಲದ್, ಅರುಣ್ ಸಿಂಗ್ ಕರ್ನಾಟಕಕ್ಕೆ ಆಗಮಿಸುವ ಮುನ್ನವೇ ಸಿಎಂ ಯಡಿಯೂರಪ್ಪರನ್ನು ಪದವಿಯಿಂದ ಕೆಳಗಿಳಿಸಲು ಯೋಜನೆ ರೂಪಿಸಿದ್ದಾರೆ ಎಂದು ಹೇಳಲಾಗಿದೆ.
ದೆಹಲಿ: ಬಿಜೆಪಿಯ ಕರ್ನಾಟಕ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ರನ್ನು ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ್ ದೆಹಲಿಯ ಜಿಆರ್ಜಿ ರಸ್ತೆಯ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸಿದರು. ತಮ್ಮ ದೆಹಲಿ ಭೇಟಿಯನ್ನು ಈಮೊದಲು ಖಾಸಗಿ ಭೇಟಿ ಎಂದು ಹೇಳಿದ್ದ ಶಾಸಕ ಅರವಿಂದ್ ಬೆಲ್ಲದ್ ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ತಂಗಿದ್ದರು. ಮೊದಲ ಎರಡು ದಿನಗಳಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಶಾಸಕ ಅರವಿಂದ್ ಬೆಲ್ಲದ್ರನ್ನು ಭೇಟಿಯಾಗಲು ನಿರಾಕರಿಸಿದ್ದರು. ಆದರೆ ಇಂದು ಕೊನೆಗೂ ಭೇಟಿ ನಡೆಸಿದ ಶಾಸಕ ಅರವಿಂದ್ ಬೆಲ್ಲದ್, ಅರುಣ್ ಸಿಂಗ್ ಕರ್ನಾಟಕಕ್ಕೆ ಆಗಮಿಸುವ ಮುನ್ನವೇ ಸಿಎಂ ಯಡಿಯೂರಪ್ಪರನ್ನು ಪದವಿಯಿಂದ ಕೆಳಗಿಳಿಸಲು ಯೋಜನೆ ರೂಪಿಸಿದ್ದಾರೆ ಎಂದು ಹೇಳಲಾಗಿದೆ.
ಇತ್ತ ರಾಜ್ಯದ ಮುಖ್ಯಮಂತ್ರಿ ಸ್ಥಾನದಿಂದ ಬಿ ಎಸ್ ಯಡಿಯೂರಪ್ಪ ಅವರನ್ನು ಕೆಳಗಿಳಿಸಬಾರದು ಎಂದು ವೀರಶೈವ ಲಿಂಗಾಯತ ಮಠಾಧೀಶರು ಬಿಜೆಪಿ ಹೈಕಮಾಂಡ್ಗೆ ಒಕ್ಕೊರಲಿನ ಒತ್ತಾಯದ ಸಂದೇಶ ರವಾನಿಸಿದ್ದಾರೆ. ತುಮಕೂರು ಜಿಲ್ಲೆ ತಿಪಟೂರಿನ ಷಡಕ್ಷರಿ ಮಠದಲ್ಲಿ ಸುದ್ದಿಗೋಷ್ಠಿ ನಡೆಸಿದ 10ಕ್ಕೂ ಹೆಚ್ಚು ಮಠಾಧೀಶರು ಸಿಎಂ ಯಡಿಯೂರಪ್ಪ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಕೆಲವು ವ್ಯಕ್ತಿಗಳು ಸಿಎಂ ಸ್ಥಾನಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡಿದ್ದಾರೆ. ಇಂತಹ ಹೇಳಿಕೆಗಳಿಂದ ಮಾನಸಿಕವಾಗಿ ನೋವುಂಟಾಗುತ್ತಿದೆ. ಆದರೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಬಿಎಸ್ವೈ ಅವರು ಕಾರಣ ಎಂದು ಒಕ್ಕೊರಲ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಷಡಕ್ಷರಿ ಮಠದ ರುದ್ರಮುನಿ ಸ್ವಾಮಿಜಿ, ಜಂಗಮ ಮಠದ ಸಿದ್ದಲಿಂಗ ಸ್ವಾಮಿಜಿ, ಬೆಳ್ಳಾವಿ ಕಾರದ ಮಠದ ವೀರಬಸವ ಸ್ವಾಮಿಜಿ ಸೇರಿದಂತೆ ಹತ್ತಕ್ಕೂ ಹೆಚ್ಚು ಸ್ವಾಮಿಜಿಗಳು ಯಡಿಯೂರಪ್ಪ ಪರ ಬಿಜೆಪಿ ಹೈಕಮಾಂಡ್ಗೆ ಒಕ್ಕೊರಲಿನ ಸಂದೇಶ ರವಾನಿಸಿದ್ದಾರೆ.
ಇದನ್ನೂ ಓದಿ: ಮಂಡ್ಯದಲ್ಲಿನ ಹಾಲಿಗೆ ನೀರು ಬೆರೆಸಿ ವಂಚನೆ ಪ್ರಕರಣ ಸಿಐಡಿ ತನಿಖೆಗೆ : ಸಿಎಂ ಯಡಿಯೂರಪ್ಪ ಘೋಷಣೆ
ಕೊವಿಡ್ ಲಸಿಕೆ ಪಡೆದ ನಂತರ ದೇಹದಲ್ಲಿ ಅಯಸ್ಕಾಂತ ಶಕ್ತಿ ಉಂಟಾಗಿದೆ ಎಂದ ಉಲ್ಲಾಸನಗರ ವ್ಯಕ್ತಿಯ ವಾದ; ವಿಡಿಯೊ ವೈರಲ್
(BJP MLA Arvind Bellad meets Karnataka BJP in charge Arun Singh in Delhi about leadership change)
Published On - 3:56 pm, Mon, 14 June 21