ಶಿವಮೊಗ್ಗ ಗಲಭೆ: ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆಗೆ ಬಿಜೆಪಿ ಕಿಡಿ, ಆರೋಪಿಗಳ ಹೆಸರು ಬಹಿರಂಗಪಡಿಸುವಂತೆ ಆಗ್ರಹ

ಶಿವಮೊಗ್ಗ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ ಜಿ ಪರಮೇಶ್ವರ್ ನೀಡಿರುವ ಬೇಜವಾಬ್ದಾರಿ ಹೇಳಿಕೆಗೆ ಬಿಜೆಪಿ ನಾಯಕರು ಆಕ್ರೋಶಕ್ಕೆ ಕಾರಣವಾಗಿದೆ. ಯಾರು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಆಗ್ರಹಿಸಿದ್ದಾರೆ.

ಶಿವಮೊಗ್ಗ ಗಲಭೆ: ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆಗೆ ಬಿಜೆಪಿ ಕಿಡಿ, ಆರೋಪಿಗಳ ಹೆಸರು ಬಹಿರಂಗಪಡಿಸುವಂತೆ ಆಗ್ರಹ
ಬಿಜೆಪಿ ಶಾಸಕ ಡಾ.ಅಶ್ವತ್ಥ್​​ ನಾರಾಯಣ
Follow us
ಕಿರಣ್​ ಹನಿಯಡ್ಕ
| Updated By: ರಮೇಶ್ ಬಿ. ಜವಳಗೇರಾ

Updated on:Oct 02, 2023 | 2:14 PM

ಬೆಂಗಳೂರು, (ಅಕ್ಟೋಬರ್ 02): ಶಿವಮೊಗ್ಗ ಗಲಭೆ (shivamogga riots) ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ ಜಿ ಪರಮೇಶ್ವರ್ ನೀಡಿರುವ ಬೇಜವಾಬ್ದಾರಿ ಹೇಳಿಕೆಗೆ ಬಿಜೆಪಿ ನಾಯಕರು ಆಕ್ರೋಶಕ್ಕೆ ಕಾರಣವಾಗಿದೆ. ಶಿವಮೊಗ್ಗ ಘಟನೆಗೆ ಕಾರಣ ಬಹಿರಂಗಪಡಿಸಲ್ಲ ಎಂಬ ಗೃಹ ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಡಿಸಿಎಂ ಡಾ. ಅಶ್ವಥ್ ನಾರಾಯಣ, ಯಾರು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿಸಬೇಕು. ಇದು ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ. ರಕ್ಷಣೆ ಮಾಡುವುದು, ಮುಚ್ಚಿ ಹಾಕುವ ಗೃಹ ಇಲಾಖೆ ಮತ್ತು ಸರ್ಕಾರ ಪ್ರಯತ್ನ ಖಂಡನೀಯ ಎಂದು ಮಾಜಿ ಡಿಸಿಎಂ ಡಾ. ಅಶ್ವಥ್ ನಾರಾಯಣ ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅಶ್ವತ್ಥ್ ನಾರಾಯಣ, ಗೃಹ ಸಚಿವರ ಪ್ರಕಾರ ಶಿವಮೊಗ್ಗ ಗಲಭೆ ಸಣ್ಣ ಪುಟ್ಟ ಎಂದರೆ ದೊಡ್ಡ ಪ್ರಕರಣ ಯಾವುದು? ಯಾರ ಪ್ರಾಣ ಹೋಗಬೇಕಿತ್ತು ಎಂದು ಬಯಸುತ್ತಿದ್ದರಾ? ಏನೂ ಕ್ರಮ ವಹಿಸದೇ ಈ ರೀತಿ ಹೇಳಿಕೆ ಕೊಡುತ್ತೀರಾ? ಟಿಪ್ಪು, ಔರಂಗಜೇಬನ‌ ಮೆರೆಸುತ್ತೀರಾ? ಪೊಲೀಸರು ಕೂಡ ಕರ್ತವ್ಯ ನಿಷ್ಠೆ, ಆತ್ಮಸಾಕ್ಷಿಯಿಂದ ಪ್ರಾಮಾಣಿಕವಾಗಿ ಇರಿ ಅಸಹಾಯಕರಾಗಿ ಇರಬೇಡಿ ಕಿಡಿಕಾರಿದರು.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಇದೇನು ಹೊಸದಾಗಿ ನಡೆಯುತ್ತಿದ್ಯಾ? ಗೃಹ ಸಚಿವ ಪರಮೇಶ್ವರ್‌ ಉಡಾಫೆ ಮಾತು

ಕಾಂಗ್ರೆಸ್ ಸರ್ಕಾರ ಪರಿಣಾಕಾರಿಯಾಗಿ ಕೆಲಸ ಮಾಡಿಲ್ಲ. ಆ ಕಾರಣಕ್ಕೆ ಗಲಭೆ, ಭಾರತದ ಮ್ಯಾಪ್ ಬದಲಾಯಿಸುವುದು ಎಲ್ಲಾ ನಡೆಯುತ್ತಿದೆ. ತುಷ್ಟಿಕರಣಕ್ಕಾಗಿ ಸರ್ಕಾರ ಸೈಲೆಂಟ್ ಆಗಿದೆ ಎಸ್ಪಿ ಮೇಲೆ ಹಲ್ಲೆ ಆಗಿದೆ. ಎಸ್ಪಿ ಕೈ ಕಟ್ಟಿ ಹಾಕಿದರೆ ಹೇಗೆ ಕೆಲಸ ಮಾಡಲು ಸಾಧ್ಯ? ನಮ್ಮ ದೇಶ ನಿರ್ನಾಮ ಮಾಡಲು ಬಂದವರನ್ನು ಇವರು ಮೆರೆಸುತ್ತಾರೆ. ಸಿದ್ದರಾಮಯ್ಯ ಬಾಯಿಗೆ ಬೀಗ ಹಾಕಿಕೊಂಡಿದ್ದಾರೆ. ಸರ್ಕಾರದ ಮನಸ್ಥಿತಿಗೆ ತಕ್ಕಂತೆ ಅಲ್ಲಿ ಕೆಲಸ ಮಾಡುತ್ತಿದ್ದಾರೆ. ಗಲಭೆ ಮಾಡಿದವರ ಮೇಲೆ ಗೂಂಡಾ ಕಾಯ್ದೆ ಹಾಕಿಬೇಕೆಂದು ಆಗ್ರಹಿಸಿದ ಅಶ್ವತ್ಥ್ ನಾರಾಯಣ, ಅಬ್ದುಲ್ ಕಲಾಂ ಅಂತಹ ವ್ಯಕ್ತಿಗಳನ್ನು ಗೌರವಿಸಿ ಎಂದರು.

ನಮ್ಮ ಕಾರ್ಯಕರ್ತ ಕೇವಲ ಕತ್ತಿ ವರಸೆ ಮಾಡಿದ್ದಕ್ಕೆ ಕೇಸ್ ಹಾಕಿದ್ದಾರೆ. ಇಲ್ಲಿ ಕತ್ತಿ ಪ್ರದರ್ಶನ ಮಾಡಿದರೆ ಯಾವ ಕೇಸ್ ಇಲ್ಲ ಏನೂ ಇಲ್ಲ. ಬಹಿರಂಗವಾಗಿ ಇವರ ತಾರತಮ್ಯ ನೋಡಿ. ಸಿಎಂ ಅವರಿಂದ ಇಂದು ಒಂದು ಪದವೂ ಬಂದಿಲ್ಲ. ಈ ರೀತಿ ಸರ್ಕಾರ ನಡೆದುಕೊಂಡರೆ ಯಾವ ಪರಿಸ್ಥಿತಿಗೆ ಕೊಂಡೊಯ್ಯುತ್ತಾರೆ ಎನ್ನುವುದು ಆತಂಕ ಇದೆ. ಆಗ ಮನಸ್ಸಿಗೆ ಅಂತಹ ಆತಂಕ ಬರುವುದು ಸಹಜ. ಸರ್ಕಾರ ಇದೆಯೋ ಇಲ್ಲವೋ ಎಂಬ ವಾತಾವರಣ ಇದೆ ಎಂದು ವಾಗ್ದಾಳಿ ನಡೆಸಿದರು.

ಮತ್ತಷ್ಟು ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:08 pm, Mon, 2 October 23

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್