AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್​ಬುಕ್ ಪೋಸ್ಟ್ ಮೂಲಕ ಸಿಎಂ ಯಡಿಯೂರಪ್ಪ ಕುಟುಂಬವನ್ನು ಕುಟುಕಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

Basanagouda Patil Yatnal: ಯಾರೂ ಈ ಆಮಿಷಕ್ಕೆ ಒಳಗಾಗಬಾರದು, ಇವರ ‌ಪರ‌ ಲಾಬಿ‌ ಮಾಡಬಾರದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವೀರಶೈವ ಲಿಂಗಾಯತ ಸಮಾಜದ ಮಠಾಧೀಶರುಗಳಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮನವಿ ಮಾಡಿದ್ದಾರೆ.

ಫೇಸ್​ಬುಕ್ ಪೋಸ್ಟ್ ಮೂಲಕ ಸಿಎಂ ಯಡಿಯೂರಪ್ಪ ಕುಟುಂಬವನ್ನು ಕುಟುಕಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಬಸನಗೌಡ ಪಾಟೀಲ್​ ಯತ್ನಾಳ್​ ಮತ್ತು ಬಿ.ಎಸ್​.ಯಡಿಯೂರಪ್ಪ
guruganesh bhat
| Edited By: |

Updated on: May 30, 2021 | 9:03 PM

Share

ವಿಜಯಪುರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಮಗ ಬಿ.ವೈ.ವಿಜಯೇಂದ್ರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​​ ಫೇಸ್​ಬುಕ್ ಪೋಸ್ಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಯಡಿಯೂರಪ್ಪ ಅವರ ಇಡೀ ಕುಟುಂಬ ಹಗಲು ದರೋಡೆಯಲ್ಲಿ ನಿರತವಾಗಿದೆ. ಭ್ರಷ್ಟಾಚಾರದಿಂದ ಗಳಿಸಿದ‌ ಹಣದಿಂದ ಏನನ್ನು ಬೇಕಾದರೂ ಖರೀದಿಸಬಹುದೆಂಬ ಅಹಂಕಾರ ಸಿಎಂ ಯಡಿಯೂರಪ್ಪ ಕುಟುಂಬದ ನೆತ್ತಿಗೇರಿದೆ. ತಮ್ಮದೇ ಜಾಲತಾಣಗಳ ಮೂಲಕ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಲಾಗುತ್ತಿದೆ. ಇದನ್ನು ವೀರಶೈವ ಲಿಂಗಾಯತ ಸಮಾಜ ಎಂದಿಗೂ ಸಹಿಸುವುದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಮಗ ಬಿ.ವೈ.ವಿಜಯೇಂದ್ರರನ್ನು ಕುಟುಕಿದ್ದಾರೆ.

ತಂದೆ ಯಡಿಯೂರಪ್ಪ ಅವರ ಸ್ಥಾನ ಪತನದ ಮುನ್ಸೂಚನೆ ವಿಜಯೇಂದ್ರಗೆ ಸಿಕ್ಕಿದ್ದು, ಇದನ್ನು ವೀರಶೈವ ಲಿಂಗಾಯತ ಸಮುದಾಯಕ್ಕೆ ಅವಮಾನ ಎಂಬಂತೆ ಎಂದು ಬಿಂಬಿಸಲಾಗುತ್ತಿದೆ. ಇದರಿಂದ ಪಕ್ಷಕ್ಕೆ ಭಾರಿ ಹಿನ್ನಡೆ‌ ಆಗಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ಹೊರಹಾಕಿದ್ದಾರೆ.

ಸಿಎಂ ಯಡಿಯೂರಪ್ಪ ಮತ್ತು ವೀರಶೈವ ಸಮಾಜವನ್ನು ಕಡೆಗಣನೆ ಮಾಡಿದರೆ ಬಿಜೆಪಿ ಪಕ್ಷ ನಾಶವಾಗಲಿದೆ ಎಂದು ಹೇಳುವಂತೆ ಮಠಾಧೀಶರಿಗೆ ಒತ್ತಡ ಹಾಕಲಾಗುತ್ತಿದೆ. ಶ್ರೀಗಳಿಂದ ಹೇಳಿಕೆ ಕೊಡಿಸಲು ಸಂಪರ್ಕ ಮಾಡುತ್ತಿದ್ದಾರೆ. ಎಷ್ಟೇ ಖರ್ಚಾದರೂ ಸರಿ ಎಂದು ಶ್ರೀಗಳ ಸಂಪರ್ಕ ಮಾಡುತ್ತಿದ್ದಾರೆ. ಯಾರೂ ಈ ಆಮಿಷಕ್ಕೆ ಒಳಗಾಗಬಾರದು, ಇವರ ‌ಪರ‌ ಲಾಬಿ‌ ಮಾಡಬಾರದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವೀರಶೈವ ಲಿಂಗಾಯತ ಸಮಾಜದ ಮಠಾಧೀಶರಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Karnataka Covid Update: ಇಂದು ಕರ್ನಾಟಕದಲ್ಲಿ ಪತ್ತೆಯಾದ ಕೊವಿಡ್ ಸೋಂಕಿತರ ಸಂಖ್ಯೆ 20,378, ಸೋಂಕುಮುಕ್ತರಾದ 28,053 ಜನರು

ಕೊವಿಡ್ ತಡೆಯಲು ದಿನಕ್ಕೆ 18 ಗಂಟೆ ಕೆಲಸ ಮಾಡುತ್ತಿದ್ದೇವೆ, ಸಿಎಂ ಯಡಿಯೂರಪ್ಪರ ಜತೆ ನಾವಿದ್ದೇವೆ: ಶಾಸಕ ರೇಣುಕಾಚಾರ್ಯ

(BJP MLA Basanagouda Patil Yatnal Criticism CM BS Yediyurappa and Vijayendra on Veerashaiava Lingayath matter in Facebook Post)

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ