ವಿಜಯಪುರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಮಗ ಬಿ.ವೈ.ವಿಜಯೇಂದ್ರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಫೇಸ್ಬುಕ್ ಪೋಸ್ಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಯಡಿಯೂರಪ್ಪ ಅವರ ಇಡೀ ಕುಟುಂಬ ಹಗಲು ದರೋಡೆಯಲ್ಲಿ ನಿರತವಾಗಿದೆ. ಭ್ರಷ್ಟಾಚಾರದಿಂದ ಗಳಿಸಿದ ಹಣದಿಂದ ಏನನ್ನು ಬೇಕಾದರೂ ಖರೀದಿಸಬಹುದೆಂಬ ಅಹಂಕಾರ ಸಿಎಂ ಯಡಿಯೂರಪ್ಪ ಕುಟುಂಬದ ನೆತ್ತಿಗೇರಿದೆ. ತಮ್ಮದೇ ಜಾಲತಾಣಗಳ ಮೂಲಕ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಲಾಗುತ್ತಿದೆ. ಇದನ್ನು ವೀರಶೈವ ಲಿಂಗಾಯತ ಸಮಾಜ ಎಂದಿಗೂ ಸಹಿಸುವುದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಮಗ ಬಿ.ವೈ.ವಿಜಯೇಂದ್ರರನ್ನು ಕುಟುಕಿದ್ದಾರೆ.
ತಂದೆ ಯಡಿಯೂರಪ್ಪ ಅವರ ಸ್ಥಾನ ಪತನದ ಮುನ್ಸೂಚನೆ ವಿಜಯೇಂದ್ರಗೆ ಸಿಕ್ಕಿದ್ದು, ಇದನ್ನು ವೀರಶೈವ ಲಿಂಗಾಯತ ಸಮುದಾಯಕ್ಕೆ ಅವಮಾನ ಎಂಬಂತೆ ಎಂದು ಬಿಂಬಿಸಲಾಗುತ್ತಿದೆ. ಇದರಿಂದ ಪಕ್ಷಕ್ಕೆ ಭಾರಿ ಹಿನ್ನಡೆ ಆಗಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ಹೊರಹಾಕಿದ್ದಾರೆ.
ಸಿಎಂ ಯಡಿಯೂರಪ್ಪ ಮತ್ತು ವೀರಶೈವ ಸಮಾಜವನ್ನು ಕಡೆಗಣನೆ ಮಾಡಿದರೆ ಬಿಜೆಪಿ ಪಕ್ಷ ನಾಶವಾಗಲಿದೆ ಎಂದು ಹೇಳುವಂತೆ ಮಠಾಧೀಶರಿಗೆ ಒತ್ತಡ ಹಾಕಲಾಗುತ್ತಿದೆ. ಶ್ರೀಗಳಿಂದ ಹೇಳಿಕೆ ಕೊಡಿಸಲು ಸಂಪರ್ಕ ಮಾಡುತ್ತಿದ್ದಾರೆ. ಎಷ್ಟೇ ಖರ್ಚಾದರೂ ಸರಿ ಎಂದು ಶ್ರೀಗಳ ಸಂಪರ್ಕ ಮಾಡುತ್ತಿದ್ದಾರೆ. ಯಾರೂ ಈ ಆಮಿಷಕ್ಕೆ ಒಳಗಾಗಬಾರದು, ಇವರ ಪರ ಲಾಬಿ ಮಾಡಬಾರದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವೀರಶೈವ ಲಿಂಗಾಯತ ಸಮಾಜದ ಮಠಾಧೀಶರಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮನವಿ ಮಾಡಿದ್ದಾರೆ.
ಇದನ್ನೂ ಓದಿ: Karnataka Covid Update: ಇಂದು ಕರ್ನಾಟಕದಲ್ಲಿ ಪತ್ತೆಯಾದ ಕೊವಿಡ್ ಸೋಂಕಿತರ ಸಂಖ್ಯೆ 20,378, ಸೋಂಕುಮುಕ್ತರಾದ 28,053 ಜನರು
ಕೊವಿಡ್ ತಡೆಯಲು ದಿನಕ್ಕೆ 18 ಗಂಟೆ ಕೆಲಸ ಮಾಡುತ್ತಿದ್ದೇವೆ, ಸಿಎಂ ಯಡಿಯೂರಪ್ಪರ ಜತೆ ನಾವಿದ್ದೇವೆ: ಶಾಸಕ ರೇಣುಕಾಚಾರ್ಯ
(BJP MLA Basanagouda Patil Yatnal Criticism CM BS Yediyurappa and Vijayendra on Veerashaiava Lingayath matter in Facebook Post)