ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ಶುರುವಾಯ್ತು ಯತ್ನಾಳ್, ಬೆಲ್ಲದ್ ರಾಜಕೀಯ ವರಸೆ

|

Updated on: Nov 17, 2023 | 2:22 PM

ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿರುವುದರಿಂದ ಬಸನಗೌಡ ಪಾಟೀಲ್ ಯತ್ನಾಳ್ ಅಸಮಾಧಾನಗೊಂಡಿದ್ದು, ಇದೀಗ ವಿಪಕ್ಷ ನಾಯಕನ ಸ್ಥಾನಕ್ಕೆ ಭಾರೀ ಪೈಪೋಟಿ ನಡೆಸಿದ್ದಾರೆ. ಈ ಬಗ್ಗೆ ಚರ್ಚೆಸಲು ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರದಿಂದ ಆಗಮಿಸಿರುವ ವೀಕ್ಷರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ಮಾಡಿದ್ದಾರೆ. ಅಲ್ಲದೇ ಅವರಿಗೆ ಕೆಲ ವಿಚಾರಣಗಳನ್ನು ದೂರು ನೀಡಿದ್ದು, ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಬಹಿರಂಗವಾಗಿದೆ.

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ಶುರುವಾಯ್ತು ಯತ್ನಾಳ್, ಬೆಲ್ಲದ್ ರಾಜಕೀಯ ವರಸೆ
ಬಸನಗೌಡ ಪಾಟೀಲ್ ಯತ್ನಾಳ್
Follow us on

ಬೆಂಗಳೂರು, (ನವೆಂಬರ್ 17): ಕರ್ನಾಟಕ ಬಿಜೆಪಿಯಲ್ಲಿ (Karnataka BJP) ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆದಿವೆ. ಬಿವೈ ವಿಜಯೇಂದ್ರ (BY Vijayendra) ಅವರನ್ನು ರಾಜ್ಯಾಧ್ಯರನ್ನಾಗಿ ಆಯ್ಮೆ ಮಾಡಿದ ಬೆನ್ನಲ್ಲೇ ಇದೀಗ ವಿಧಾಸಭೆ ಹಾಗೂ ವಿಧಾನಪರಿಷತ್ ವಿರೋಧ ಪಕ್ಷ ನಾಯಕರ ಆಯ್ಕೆಗೆ ಹೈಕಮಾಂಡ್ ಮುಂದಾಗಿದ್ದು, ಇಂದು (ನವೆಂಬರ್ 17) ಬಿಜೆಪಿ ಶಾಸಕಾಂಗ ಸಭೆ ನಿಗದಿಯಾಗಿದೆ. ಹೀಗಾಗಿ ಕೇಂದ್ರದಿಂದ ಇಬ್ಬರು ವೀಕ್ಷಕರು ಸಹ ಆಗಮಿಸಿದ್ದಾರೆ. ಮತ್ತೊಂದೆಡೆ ಯಡಿಯೂರಪ್ಪನವರ ವಿರೋಧ ಬಣದಲ್ಲಿ ಗುರುತಿಸಿಕೊಂಡಿರುವ ಬಸನಗೌಡ ಪಾಟೀಲ್ ಯತ್ಬಾಳ್ (Basangouda Patil yatnal) ಹಾಗೂ ಅರವಿಂದ್ ಬೆಲ್ಲದ್ ತಮ್ಮ ರಾಜಕೀಯ ಆಟ ಶುರು ಮಾಡಿದ್ದಾರೆ.

ಹೌದು…ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ ಬೆನ್ನಲ್ಲೇ ಸೈಲೆಂಟ್ ಆಗಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಅರವಿಂದ ಬೆಲ್ಲದ್ ವಿಪಕ್ಷ ನಾಯಕರನ ಆಯ್ಕೆ ಸಂಬಂಧ ಮೊದಲಿಗೆ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಬಳಿಕ ಕೇಂದ್ರದಿಂದ ವೀಕ್ಷಕರಾಗಿ ಬಂದಿರುವ ನಿರ್ಮಲಾ ಸೀತರಾಮನ್ ಹಾಗೂ ದುಷ್ಯಂತ್ ಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಸಹ ವಿಪಕ್ಷ ನಾಯಕ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದು, ತಮ್ಮ ಬೇಡಿಕೆಯನ್ನು ವೀಕ್ಷಕರ ಮುಂದೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ವಿಧಾನಸಭೆ, ಪರಿಷತ್​ ವಿಪಕ್ಷ ನಾಯಕರ ಆಯ್ಕೆ: ಬೆಂಗಳೂರಿಗೆ ಬಂದಿಳಿದ ಕೇಂದ್ರ ಬಿಜೆಪಿ ವೀಕ್ಷಕರು

ಉತ್ತರ ಕರ್ನಾಟಕಕ್ಕೆ ನೀಡುವಂತೆ ಪಟ್ಟು

ವಿಜಯೇಂದ್ರ ಅವರಿಗೆ ಅಧ್ಯಕ್ಷ ಪಟ್ಟ ನೀಡಿರುವುದರಿಂದ ಅಸಮಾಧಾನಗೊಂಡಿರುವ ಯತ್ನಾಳ್ ಹಾಗೂ ಬೆಲ್ಲದ್ , ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ವಿಪಕ್ಷ ನಾಯಕ ಸ್ಥಾನವನ್ನು ಉತ್ತರ ಕರ್ನಾಟಕಕ್ಕೆ ನೀಡಬೇಕೆಂದು ಮನವಿ ಮಾಡಿದ್ದಾರೆ. ಇದರೊಂದಿಗೆ ಪರೋಕ್ಷವಾಗಿ ತಮಗೆ ನೀಡಬೇಕೆಂದು ಯತ್ನಾಳ್ ಸಂದೇಶ ರವಾನಿಸಿದ್ದಾರೆ. ಇದರೊಂದಿಗೆ ಯತ್ನಾಳ್ ತಮ್ಮ ರಾಜಕೀಯ ವರಸೆ ಶುರು ಮಾಡಿಕೊಂಡಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿಪಕ್ಷ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಮೇಲೆ ಕಟ್ಟಿದ್ದರು. ಅಧ್ಯಕ್ಷ ಹುದ್ದೆ ಸಿಗಲಿಲ್ಲ ಅಂದ್ರೆ ವಿರೋಧ ಪಕ್ಷದ ನಾಯಕನನ್ನಾಗಿ ಮಾಡಿ ಎಂದು ಬೇಡಿಕೆ ಇಟ್ಟಿದ್ದರು. ಈಗ ರಾಜ್ಯಾಧ್ಯಕ್ಷ ಹುದ್ದೆ ಕೈತಪ್ಪಿ ಹೋಗಿದ್ದು, ವಿರೋಧ ಪಕ್ಷದ ನಾಯಕನನ್ನಾಗಿ ಮಾಡಿ ಎಂದು ಪಟ್ಟು ಹಿಡಿದ್ದಾರೆ.

ವೀಕ್ಷಕರ ಬಳಿಕ ಯತ್ನಾಳ್ ಹೇಳಿದ್ದೇನು?

ಇನ್ನು ಬೊಮ್ಮಾಯಿ ಹಾಗೂ ವೀಕ್ಷಕರ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಯತ್ನಾಳ್, ಚುನಾವಣೆ ವೇಳೆ ಆಗಿರುವ ಬೆಳವಣಿಗೆ ಬಗ್ಗೆ ಎಲ್ಲವನ್ನೂ ವಿವರಿಸಿದ್ದೇನೆ. ಒಂದು ವರ್ಗದ ಕೇಂದ್ರೀಕೃತವಾಗಿ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. ಹೈಕಮಾಂಡ್ ವೀಕ್ಷಕರಿಗೆ ರಾಜ್ಯದ ಎಷ್ಟೋ ವಿಷಯಗಳು ಗೊತ್ತಿರಲಿಲ್ಲ. ಧೈರ್ಯದಿಂದ ನಾನು ಎಲ್ಲವನ್ನೂ ಹೇಳಿದ್ದೇನೆ. ದೇಶದಲ್ಲಿ ನಾವು ಉಳಿಯಬೇಕಾದರೆ ಮೋದಿ ಮತ್ತೆ ಪ್ರಧಾನಿ ಆಗಬೇಕು. ವರಿಷ್ಠರು ಕೆಲವೇ ಚೇಲಾಗಳ ಮಾತುಕೇಳಿ ನಿರ್ಧಾರ ತೆಗೆದುಕೊಳ್ಳಬಾರದು. ಕೆಲವರು ಬ್ಲ್ಯಾಕ್​ಮೇಲ್ ಮಾಡಲು ಪ್ರಯತ್ನ ಮಾಡುತ್ತಾರೆ. ಇದಕ್ಕೆ ನಾನು ಭಯಪಡುವುದಿಲ್ಲ ಎಂದಿದ್ದಕ್ಕೆ ಇಬ್ಬರೂ ಬಹಳ ಖುಷಿಯಾದರು. ನೀವು ಎಲ್ಲವನ್ನೂ ಧೈರ್ಯವಾಗಿ ಹೇಳಿದ್ದೀರಿ ಎಂದು ವೀಕ್ಷಕರು ಹೇಳಿದರು. ಜೆ.ಪಿ.ನಡ್ಡಾ, ಪ್ರಧಾನಿಗೆ ಎಲ್ಲವನ್ನೂ ತಿಳಿಸುವುದಾಗಿ ಅವರು ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದರು. ಇದೊಂದಿಗೆ ಯತ್ನಾಳ್ ,  ವಿಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದ್ದಕ್ಕೆ ಅಸಮಾಧಾನಗೊಂಡಿದ್ದಾರೆ ಎನ್ನುವುದು ಸಾಬೀತಾಯ್ತು.

ಇನ್ನು ಯತ್ನಾಳ್ ಬಿಜೆಪಿ ಕಚೇರಿಗೆ ಭೇಟಿ ನೀಡಿಲ್ಲ. ಬದಲಿಗೆ ಬೊಮ್ಮಾಯಿ ಅವರ ಮನೆಗೆ ಚರ್ಚೆ ಮಾಡಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೇ ವೀಕ್ಷಕರಿಗೆ ಕೆಲ ದೂರುಗಳನ್ನು ನೀಡಿದ್ದು, ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಜಗಜ್ಜಾಹೀರಾಗಿದೆ.

ಈಗ ಒಂದೊಂದಾಗಿ ಬಿಜೆಪಿಯಲ್ಲಿ ಅಸಮಧಾನದ ಸ್ಫೋಟಗೊಳ್ಳುತ್ತಿದ್ದು,ಇದನ್ನು ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಗೆ ಕಂಟ್ರೋಲ್ ಮಾಡುತ್ತಾರೆ ಎನ್ನುವುದು ಕುತೂಹಲ ಮೂಡಿಸಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:20 pm, Fri, 17 November 23