ಗಣಿ-ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ: ಕೇಸ್​ನಲ್ಲಿ ತಮ್ಮ ಹೆಸರು ಕೇಳಿಬಂದಿದ್ದಕ್ಕೆ ಮುನಿರತ್ನ ಹೇಳಿದ್ದಿಷ್ಟು

Pratima Murder Case: ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಕೇಸ್​ನಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ (Munirathna) ಹೆಸರು ಕೇಳಿಬಂದಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುನಿರತ್ನರನ್ನು ವಿಚಾರಣೆ ನಡೆಸುವಂತೆ ಕಾಂಗ್ರೆಸ್​ ಮುಖಂಡನ ಒತ್ತಾಯಕ್ಕೆ ಇದೀಗ ಇದಕ್ಕೆ ಸ್ವತಃ ಶಾಸಕ ಮುನಿರತ್ನ ಪ್ರತಿಕ್ರಿಯಿಸಿ ಸ್ಪಷ್ಟನೆ ನೀಡಿದ್ದಾರೆ.

ಗಣಿ-ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ: ಕೇಸ್​ನಲ್ಲಿ ತಮ್ಮ ಹೆಸರು ಕೇಳಿಬಂದಿದ್ದಕ್ಕೆ ಮುನಿರತ್ನ ಹೇಳಿದ್ದಿಷ್ಟು
ಬಿಜೆಪಿ ಶಾಸಕ ಮುನಿರತ್ನ, ಮೃತ ಪ್ರತಿಮಾ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Nov 06, 2023 | 12:50 PM

ಬೆಂಗಳೂರು, (ನವೆಂಬರ್ 06): ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಕೇಸ್​ನಲ್ಲಿ(geology dept deputy director pratima murder case)  ಬೆಂಗಳೂರಿನ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ (Munirathna) ಹೆಸರು ಕೇಳಿಬಂದಿದ್ದು, ಇದೀಗ ಇದಕ್ಕೆ ಸ್ವತಃ ಮುನಿರತ್ನ ಅವರು ಪ್ರತಿಕ್ರಿಯಿಸಿ, ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಲೋಕಸಭೆ ಚುನಾವಣೆ ಮುಗಿಯುವ ತನಕ ಹೊರಗೆ ಇರಬಾರದು ಎಂದು ನನ್ನನ್ನು ತಿಹಾರ್ ಜೈಲಿಗೆ ಕಳಿಸಬೇಕು ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿಂದು ಮಾಧ್ಯಮಗಳ ಜೊತೆ ಮಾಡಿದ ಮುನಿರತ್ನ, ಮನೆ ಮುಂದೆ ನಡೆಯುವ ಅಪಘಾತವನ್ನೂ ನನ್ನ ತಲೆಗೆ ಕಟ್ಟುವ ಕೆಲಸ ಆಗುತ್ತಿದೆ. ಈಗ ಪ್ರತಿಮಾ ಕೊಲೆ ಪ್ರಕರಣದ ತನಿಖೆ ನಡೆಯುತ್ತಿದೆ. ಈ ಹಂತದಲ್ಲಿ ನಾನು ಮಾತನಾಡುವುದು ಸರಿಯಲ್ಲ, ಸೂಕ್ತವೂ ಅಲ್ಲ. ತನಿಖೆ ಮುಗಿದ ಮೇಲೆ ನಾನೇ ಮಾತನಾಡುತ್ತೇನೆ. ರಾಜಕೀಯವಾಗಿ ಮುಗಿಸಬೇಕು ಎನ್ನುವರಿಗೆ ತನಿಖೆ ಬಳಿಕ ಉತ್ತರಿಸುವೆ ಎಂದು ಖಡಕ್ ಆಗಿ ಹೇಳಿದರು.

ಇದನ್ನೂ ಓದಿ: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಹತ್ಯೆ: ಶಾಸಕ ಮುನಿರತ್ನರನ್ನು ವಿಚಾರಣೆ ನಡೆಸುವಂತೆ ಒತ್ತಾಯ

ಬೆಂಗಳೂರಿನಲ್ಲಿ ನಡೆದ ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುನಿರತ್ನರನ್ನು ವಿಚಾರಣೆ ನಡೆಸುವಂತೆ ಕೆಪಿಸಿಸಿ ಕಾನೂನು ಘಟಕದ ಮುಖಂಡ ಸೂರ್ಯ ಮುಕುಂದರಾಜ್​ ಹೇಳಿದದ್ದರು.

ಸೂರ್ಯ ಮುಕುಂದರಾಜ್ ಆರೋಪದಲ್ಲೇನಿದೆ?

ಹುಣಸಮಾರನಹಳ್ಳಿಯಲ್ಲಿ ಪರವಾನಗಿ ಪಡೆಯದೆ ಬಂಡೆಗಳು ಸ್ಫೋಟಿಸಲಾಗಿತ್ತು. ಈ ಸಂಬಂಧ ವರದಿ ಸಿದ್ಧಪಡಿಸಿ ಡಿಸಿಗೆ ಕೊಲೆಯಾದ ಪ್ರತಿಮಾ ನೀಡಿದ್ದರು. ಈ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿತ್ತು.ಹುಣಸಮಾರನಹಳ್ಳಿ ಪ್ರಕರಣದಲ್ಲಿ ಶಾಸಕ ಮುನಿರತ್ನ 2ನೇ ಆರೋಪಿಯಾಗಿದ್ದಾರೆ. ರಾಜಸ್ವಧನದಲ್ಲೂ ನಷ್ಟ ಉಂಟು ಮಾಡಿದ್ದಾರೆಂದು ವರದಿಯಲ್ಲಿ ಆರೋಪಿಸಲಾಗಿತ್ತು. ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಬಗ್ಗೆ ಹಲವು ಅನುಮಾನ ವ್ಯಕ್ತವಾಗುತ್ತಿದೆ. ಎಲ್ಲ ಆಯಾಮದಲ್ಲೂ ಬಿಜೆಪಿ ಶಾಸಕ ಮುನಿರತ್ನಗೆ ನೋಟಿಸ್ ನೀಡಿ ತನಿಖೆ ನಡೆಸುವಂತೆ ಸೂರ್ಯ ಮುಕುಂದರಾಜ್ ಆಗ್ರಹಿಸಿದ್ದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್