ಬೆಂಗಳೂರು, (ನವೆಂಬರ್ 06): ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಕೇಸ್ನಲ್ಲಿ(geology dept deputy director pratima murder case) ಬೆಂಗಳೂರಿನ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ (Munirathna) ಹೆಸರು ಕೇಳಿಬಂದಿದ್ದು, ಇದೀಗ ಇದಕ್ಕೆ ಸ್ವತಃ ಮುನಿರತ್ನ ಅವರು ಪ್ರತಿಕ್ರಿಯಿಸಿ, ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಲೋಕಸಭೆ ಚುನಾವಣೆ ಮುಗಿಯುವ ತನಕ ಹೊರಗೆ ಇರಬಾರದು ಎಂದು ನನ್ನನ್ನು ತಿಹಾರ್ ಜೈಲಿಗೆ ಕಳಿಸಬೇಕು ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿಂದು ಮಾಧ್ಯಮಗಳ ಜೊತೆ ಮಾಡಿದ ಮುನಿರತ್ನ, ಮನೆ ಮುಂದೆ ನಡೆಯುವ ಅಪಘಾತವನ್ನೂ ನನ್ನ ತಲೆಗೆ ಕಟ್ಟುವ ಕೆಲಸ ಆಗುತ್ತಿದೆ. ಈಗ ಪ್ರತಿಮಾ ಕೊಲೆ ಪ್ರಕರಣದ ತನಿಖೆ ನಡೆಯುತ್ತಿದೆ. ಈ ಹಂತದಲ್ಲಿ ನಾನು ಮಾತನಾಡುವುದು ಸರಿಯಲ್ಲ, ಸೂಕ್ತವೂ ಅಲ್ಲ. ತನಿಖೆ ಮುಗಿದ ಮೇಲೆ ನಾನೇ ಮಾತನಾಡುತ್ತೇನೆ. ರಾಜಕೀಯವಾಗಿ ಮುಗಿಸಬೇಕು ಎನ್ನುವರಿಗೆ ತನಿಖೆ ಬಳಿಕ ಉತ್ತರಿಸುವೆ ಎಂದು ಖಡಕ್ ಆಗಿ ಹೇಳಿದರು.
ಇದನ್ನೂ ಓದಿ: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಹತ್ಯೆ: ಶಾಸಕ ಮುನಿರತ್ನರನ್ನು ವಿಚಾರಣೆ ನಡೆಸುವಂತೆ ಒತ್ತಾಯ
ಬೆಂಗಳೂರಿನಲ್ಲಿ ನಡೆದ ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುನಿರತ್ನರನ್ನು ವಿಚಾರಣೆ ನಡೆಸುವಂತೆ ಕೆಪಿಸಿಸಿ ಕಾನೂನು ಘಟಕದ ಮುಖಂಡ ಸೂರ್ಯ ಮುಕುಂದರಾಜ್ ಹೇಳಿದದ್ದರು.
ಹುಣಸಮಾರನಹಳ್ಳಿಯಲ್ಲಿ ಪರವಾನಗಿ ಪಡೆಯದೆ ಬಂಡೆಗಳು ಸ್ಫೋಟಿಸಲಾಗಿತ್ತು. ಈ ಸಂಬಂಧ ವರದಿ ಸಿದ್ಧಪಡಿಸಿ ಡಿಸಿಗೆ ಕೊಲೆಯಾದ ಪ್ರತಿಮಾ ನೀಡಿದ್ದರು. ಈ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿತ್ತು.ಹುಣಸಮಾರನಹಳ್ಳಿ ಪ್ರಕರಣದಲ್ಲಿ ಶಾಸಕ ಮುನಿರತ್ನ 2ನೇ ಆರೋಪಿಯಾಗಿದ್ದಾರೆ. ರಾಜಸ್ವಧನದಲ್ಲೂ ನಷ್ಟ ಉಂಟು ಮಾಡಿದ್ದಾರೆಂದು ವರದಿಯಲ್ಲಿ ಆರೋಪಿಸಲಾಗಿತ್ತು. ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಬಗ್ಗೆ ಹಲವು ಅನುಮಾನ ವ್ಯಕ್ತವಾಗುತ್ತಿದೆ. ಎಲ್ಲ ಆಯಾಮದಲ್ಲೂ ಬಿಜೆಪಿ ಶಾಸಕ ಮುನಿರತ್ನಗೆ ನೋಟಿಸ್ ನೀಡಿ ತನಿಖೆ ನಡೆಸುವಂತೆ ಸೂರ್ಯ ಮುಕುಂದರಾಜ್ ಆಗ್ರಹಿಸಿದ್ದರು.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ