AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರು ದೊಡ್ಡವನು ಸಿದ್ದರಾಮಯ್ಯ ಸಿಎಂ ಆಗಿದ್ದಾರೆ: ಡಿಕೆಶಿ ವಿರುದ್ಧ ಜಾರಕಿಹೊಳಿ ವಾಗ್ದಾಳಿ

ಸ್ವಲ್ಪ ದಿನಗಳ ಕಾಲ ಸೈಲೆಂಟ್ ಆಗಿದ್ದ ಬಿಜೆಪಿ ಶಾಸಕರ ರಮೇಶ್ ಜಾರಕಿಹೊಳಿ ಇದೀಗ ಮತ್ತೆ ಸಿಡಿದೆದ್ದಿದ್ದಾರೆ. ಅವರಪ್ಪ ಬಂದ್ರೂ ನನ್ನನ್ನು ಹತ್ತಿಕ್ಕಲು ಆಗಲ್ಲ ಎಂದು ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೇವರು ದೊಡ್ಡವನು ಸಿದ್ದರಾಮಯ್ಯ ಸಿಎಂ ಆಗಿದ್ದಾರೆ: ಡಿಕೆಶಿ ವಿರುದ್ಧ ಜಾರಕಿಹೊಳಿ ವಾಗ್ದಾಳಿ
Sahadev Mane
| Edited By: |

Updated on: Jan 21, 2024 | 4:08 PM

Share

ಬೆಳಗಾವಿ, (ಜನವರಿ 21): ಸಿದ್ದರಾಮಯ್ಯ (Siddaramaiah) ಒಳ್ಳೆಯ ಸಿಎಂ ಆದ್ರೆ 2018ರಲ್ಲಿದ್ದಂತೆ ಈಗ ಇಲ್ಲ. ಕೊತ್ವಾಲ್‌ ಶಿಷ್ಯ ಡಿಸಿಎಂ ಆಗಿದ್ದಾರೆ. ಹೀಗಾಗಿ ಸಿದ್ದರಾಮಯ್ಯಗೆ ಬೆಲೆ ಇಲ್ಲ. ಕೊತ್ವಾಲ್‌ ಶಿಷ್ಯ ಸಿಎಂ ಆಗಿದ್ದರೆ ನಮ್ಮ ಆಸ್ತಿ ಎಲ್ಲಾ ಅವರ ಹೆಸರಿಗೆ ಆಗ್ತಿತ್ತು. ದೇವರು ದೊಡ್ಡವನು ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಆಗಿದ್ದಾರೆ. ಕೊತ್ವಾಲ್‌ ಶಿಷ್ಯ ನನ್ನ ವಿರುದ್ಧ 420 ಕೇಸ್ ಹಾಕಿಸಿದ್ದಾರೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೆಸರು ಹೇಳದೇ ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಸಿಡಿ ಪ್ರಕರಣದಲ್ಲಿ ನನಗೆ ಶಿಕ್ಷೆ ಮಾಡಿಸಬೇಕು ಅಂದುಕೊಂಡಿದ್ದ ಆದರೆ ಆಗಲಿಲ್ಲ. ಸಿಡಿ ಪ್ರಕರಣದಲ್ಲಿ ವಿಫಲನಾಗಿ ಈಗ 420 ಕೇಸ್ ದಾಖಲು ಮಾಡಿಸಿ ಮಾಧ್ಯಮಗಳಲ್ಲಿ ನನ್ನ ಹೆಸರು ನೋಡಿ ಸಮಾಧಾನ ಮಾಡಿಕೊಳ್ಳುತ್ತಿದ್ದಾನೆ. ಡಿ.ಕೆ.ಶಿವಕುಮಾರ್‌ರವರ ಅಪ್ಪ ಬಂದ್ರೂ ನನ್ನನ್ನು ಹತ್ತಿಕ್ಕಲು ಆಗಲ್ಲ ಎಂದು ಮತ್ತೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮುಂದಿನ ದಿನಗಳಲ್ಲಿ ಸಿಎಂ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿ, ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಿ ಹ್ಯಾಂಡ್ ಆಗಿ ಕೆಲಸ ಮಾಡಲು ಅಲ್ಲಿಯವರು ಬಿಡುತ್ತಿಲ್ಲ. ಅವರ ಮೇಲೆ ಒತ್ತಡ ತರುವ ಕೆಲಸವನ್ನು ಮಾಡುತ್ತಿದ್ದಾರೆ. ಡಿಕೆ ಶಿವಕುಮಾರ್ ಹೈಕಮಾಂಡ್ ಮೇಲೆ ಒತ್ತಡ ತಂದು ಸಿಎಂ ಶಕ್ತಿ ಕುಂದಿಸುವ ಕೆಲಸ ಮಾಡುತ್ತಿದ್ದಾನೆ ಎಂದು ಗಂಭೀರ ಆರೋಪ ಮಾಡಿದರು.

ಬೆಳಗಾವಿ ಡಿಸಿಸಿ ಬ್ಯಾಂಕ್​ ಅಧ್ಯಕ್ಷರ ನೇಮಕಾತಿ ಬಗ್ಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ರಮೇಶ್ ಕತ್ತಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮುಂದುವರಿಯುತ್ತಾರೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಬೇರೆಯವರ ನೇಮಕ ಆಗುವುದಿಲ್ಲ. ಯಾವುದೇ ಬದಲಾವಣೆ ಇಲ್ಲ, ಎಲ್ಲವೂ ಸುಳ್ಳು ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಬೆಳಗಾವಿ ಡಿಸಿಸಿ ಬ್ಯಾಂಕ್​ಗೆ ಹೊಸ​ ಅಧ್ಯಕ್ಷರ ನೇಮಕ ಅಂತೆ-ಕಂತೆಗಳಿಗೆ ತೆರೆ ಎಳೆದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ