ಕಾಂಗ್ರೆಸ್​ಗೆ ಸೇರಲ್ಲ ಎಂದ ಮರುದಿನವೇ ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ಶಿವರಾಮ್​ ಹೆಬ್ಬಾರ್​

ಆಪರೇಷನ್​ ಹಸ್ತದ ಗಾಳಕ್ಕೆ ಸಿಲುಕಿ ಶಿವರಾಮ್​ ಹೆಬ್ಬಾರ್​ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ವಂದತಿಗಳು ಎದ್ದಿದ್ದವು. ಈ ಕುರಿತು ಶಿವರಾಮ್​ ಹೆಬ್ಬಾರ್​ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್​ಗೆ ಸೇರುವುದಿಲ್ಲ ಎಂದು ಹೇಳಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು ಸಾಕಷ್ಟು ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

ಶಾಸಕ ಶಿವರಾಮ್​ ಹೆಬ್ಬಾರ್​​, ಸಿಎಂ ಸಿದ್ದರಾಮಯ್ಯ
Follow us
TV9 Web
| Updated By: ವಿವೇಕ ಬಿರಾದಾರ

Updated on: Aug 26, 2023 | 11:26 AM

ಬೆಂಗಳೂರು: ಘರವಾಪಸಿ ಕೋಲಾಹಲದ ನಡುವೆ ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್​ ಹೆಬ್ಬಾರ್ (Shivaram Hebbar)​ ಶುಕ್ರವಾರ ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಭೇಟಿ ಮಾಡಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಸಿಎಂ ಜೊತೆ ಹೆಬ್ಬಾರ್​ ಸುಮಾರು ಒಂದೂವರೆ ಗಂಟೆಗಳ ಕಾಲ ಚರ್ಚೆ ನಡೆಸಿದ್ದು, ರಾಜ್ಯ ರಾಜಕೀಯದಲ್ಲಿ ಮೊತ್ತೊಂದು ಚರ್ಚೆಗೆ ನಾಂದಿ ಹಾಡಿದೆ.

ಕ್ಷೇತ್ರದಲ್ಲಿ ಶೇ 70 ಕ್ಕಿಂತ ಕಡಿಮೆ ಮಳೆ ಆಗಿರುವ ಹಿನ್ನಲೆಯಲ್ಲಿ ಬರಪೀಡಿತ ತಾಲೂಕು ಘೋಷಣೆಗೆ ಮನವಿ ಮಾಡಲಾಗಿದೆ. ಯಲ್ಲಾಪುರ – ಮುಂಡಗೋಡ – ಶಿರಸಿ ಭಾಗದ ಬನವಾಸಿಯನ್ನು ಬರಪೀಡಿತ ಎಂದು ಘೋಷಿಸಿ. ಮಳೆಯಿಲ್ಲದೆ ರೈತರು ಸಂಕಷ್ಟದಲ್ಲಿದ್ದಾರೆ. ಕ್ಷೇತ್ರಕ್ಕೆ ಹೆಚ್ಚಿನ ಅನುಧಾನ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಸಜ್ಜಾದ್ರಾ ಶಾಸಕರು? ರಾಜ್ಯ ರಾಜಕಾರಣದಲ್ಲಾಗುತ್ತಿರುವ ಬೆಳವಣಿಗೆ ವಿವರ ಇಲ್ಲಿದೆ

ಆಪರೇಷನ್​ ಹಸ್ತದ ಗಾಳಕ್ಕೆ ಸಿಲುಕಿ ಶಿವರಾಮ್​ ಹೆಬ್ಬಾರ್​ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ವಂದತಿಗಳು ಎದ್ದಿದ್ದವು. ಈ ಕುರಿತು ಶಿವರಾಮ್​ ಹೆಬ್ಬಾರ್​ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್​ಗೆ ಸೇರುವುದಿಲ್ಲ ಎಂದು ಹೇಳಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು ಸಾಕಷ್ಟು ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಬಿಜೆಪಿಯ ನಾಯಕ ಎಸ್​​​. ಟಿ ಸೋಮಶೇಖರ್,​​ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರನ್ನು ಭೇಟಿಯಾಗಿದ್ದು ಸೋಮಶೇಖರ್ ಕಾಂಗ್ರೆಸ್​ಗೆ ಸೇರುತ್ತಾರೆ ಎಂಬ ವಂದತಿ ದಟ್ಟವಾಗಿಸಿದೆ. ಇವರ ನಂತರ ಶುಕ್ರವಾರ ಒಂದೇ ದಿನ ಪ್ರತ್ಯೇಕವಾಗಿ ಶಿವರಾಮ್​​ ಹೆಬ್ಬಾರ್​ ಮತ್ತು ಎಂಪಿ ರೇಣುಕಾಚಾರ್ಯ ಭೇಟಿಯಾಗಿದ್ದು ಬಿಜೆಪಿ ವಲಯದಲ್ಲಿ ಕಳವಳ ಸೃಷ್ಟಿಸಿದೆ. ​​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ