ನಾನು ಕಾಂಗ್ರೆಸ್ ಬಿಡುವಾಗ ಬಿಜೆಪಿಗೆ ಅಗತ್ಯ ಇತ್ತು, ಕಾಂಗ್ರೆಸ್​ಗೆ ಅಂತಹ ಅಗತ್ಯವಿಲ್ಲ; ಸೋಮಶೇಖರ್ ಹೇಳಿಕೆಯ ಮರ್ಮವೇನು?

ಆಪರೇಷನ್​ ಹಸ್ತದ ಮೂಲಕ ಕಾಂಗ್ರೆಸ್, ಬಿಜೆಪಿಯ ಹಲವು ನಾಯಕರಿಗೆ ಗಾಳ ಹಾಕಿದೆ. ಈ ಗಾಳಕ್ಕೆ ಯಶವಂತಪುರ ಬಿಜೆಪಿ ಶಾಸಕ ಎಸ್​​ಟಿ ಸೋಮಶೇಖರ್ ಬಿದ್ದಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯ ಘಟಾನುಘಟಿ ನಾಯಕರು ಸೋಮಶೇಖರ್​ ಅವರ ಮನವೊಲಿಕೆಗೆ ಮುಂದಾಗಿದ್ದಾರೆ. ಈ ಕುರಿತು ಮಾತನಾಡಿದ ಮಾಜಿ ಸಚಿವ ಎಸ್​.ಟಿ ಸೋಮಶೇಖರ್​​ ನಾನು ಇದುವರೆಗೂ ಮಾನಸಿಕವಾಗಿ ಬಿಜೆಪಿಯಲ್ಲಿದ್ದೇನೆ ಎಂದರು.

ನಾನು ಕಾಂಗ್ರೆಸ್ ಬಿಡುವಾಗ ಬಿಜೆಪಿಗೆ ಅಗತ್ಯ ಇತ್ತು, ಕಾಂಗ್ರೆಸ್​ಗೆ ಅಂತಹ ಅಗತ್ಯವಿಲ್ಲ; ಸೋಮಶೇಖರ್ ಹೇಳಿಕೆಯ ಮರ್ಮವೇನು?
ಶಾಸಕ ಎಸ್​ ಟಿ ಸೋಮಶೇಖರ್​​
Follow us
| Updated By: ವಿವೇಕ ಬಿರಾದಾರ

Updated on: Aug 22, 2023 | 4:04 PM

ಬೆಂಗಳೂರು: ​ಆಪರೇಷನ್​ ಹಸ್ತದ ಮೂಲಕ ಕಾಂಗ್ರೆಸ್ (Congress), ಬಿಜೆಪಿಯ (BJP) ಹಲವು ನಾಯಕರಿಗೆ ಗಾಳ ಹಾಕಿದೆ. ಈ ಗಾಳಕ್ಕೆ ಯಶವಂತಪುರ ಬಿಜೆಪಿ ಶಾಸಕ ಎಸ್​​ಟಿ ಸೋಮಶೇಖರ್ (ST Somshekar) ಬಿದ್ದಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯ ಘಟಾನುಘಟಿ ನಾಯಕರು ಸೋಮಶೇಖರ್​ ಅವರ ಮನವೊಲಿಕೆಗೆ ಮುಂದಾಗಿದ್ದಾರೆ. ಈ ಕುರಿತು ಮಾತನಾಡಿದ ಮಾಜಿ ಸಚಿವ ಎಸ್​.ಟಿ ಸೋಮಶೇಖರ್​​ ನಾನು ಇದುವರೆಗೂ ಮಾನಸಿಕವಾಗಿ ಬಿಜೆಪಿಯಲ್ಲಿದ್ದೇನೆ. ಕಳೆದ 15 ದಿನಗಳಿಂದ ಎಲ್ಲಾ ಬೆಳವಣಿಗಳು ನಡೆಯುತ್ತಿವೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಭೇಟಿ ವೇಳೆ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಅವರು ನನ್ನನ್ನು ಕೇಳಿಲ್ಲ. ನಾನು ಕಾಂಗ್ರೆಸ್ ಬಿಡುವಾಗ ಬಿಜೆಪಿಗೆ ಅಗತ್ಯ ಇತ್ತು. ಈಗ ಕಾಂಗ್ರೆಸ್​ಗೆ ಅಂತಹ ಅಗತ್ಯವಿಲ್ಲ ಎಂದರು.

ಬೆಂಗಳೂರಲ್ಲಿ ಟಿವಿ9 ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್​​ನ ನಾಯಕರು ಪಕ್ಷಕ್ಕೆ ಬನ್ನಿ ಅಂತ ನನಗೆ ಹೇಳಿಲ್ಲ. ಸಾಧ್ಯವಿರುವ ಕಡೆ ಪಕ್ಷಕ್ಕೆ ಸೇರಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ನನ್ನ ಕ್ಷೇತ್ರದಲ್ಲೂ ತಮಗೆ ಲಿಂಕ್ ಇದ್ದ ಕಡೆ ಪ್ರಯತ್ನಿಸುತ್ತಿದ್ದಾರೆ. ನಾನು ಆಡಿಯೋ, ವಿಡಿಯೋ ತೋರಿಸಿದ್ದರೂ ಕ್ರಮ ಕೈಗೊಂಡಿಲ್ಲ. ಈಗ ನಾನು ಸೀರಿಯಸ್ ಆದ ನಂತರ ಕ್ರಮ ಕೈಗೊಂಡಿದ್ದಾರೆ. ಸಂಸದ ಸದಾನಂದಗೌಡರು ಕ್ರಮ ತೆಗೆದುಕೊಳ್ಳುವ ಬಗ್ಗೆ ಪತ್ರ ಬರೆದಿದ್ದರು ಎಂದು ತಿಳಿಸಿದರು.

ಕಾಂಗ್ರೆಸ್​ ಸೇರಿದ ಎಸ್​​ಟಿ ಸೋಮಶೇಖರ್​ ಬೆಂಬಲಿಗರು

ಸೋಮವಾರ (ಆ.21) ರಂದು ಎಸ್ .ಟಿ. ಸೋಮಶೇಖರ್ ಅವರ ಪ್ರಮುಖ ಬೆಂಬಲಿಗರು ಹಾಗೂ ನೂರಾರು ಸಂಖ್ಯೆಯ ಬಿಜೆಪಿ ಕಾರ್ಯಕರ್ತರು ಉಪಮುಖ್ಯಮಂತ್ರಿ ಮತ್ತು ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಈ ಮೂಲಕ ಫರ್‌ವಾಪಸಿಗೆ ಮೊದಲ ಹಂತಕ್ಕೆ ಚಾಲನೆ ದೊರಕಿತು.

ಇದನ್ನೂ ಓದಿ: ಆ.25 ರಂದು ಎಸ್​.ಟಿ ಸೋಮಶೇಖರ್ ದೆಹಲಿ ಪ್ರಯಾಣ; ಅಮಿತ್​ ಶಾ, ಬಿಲ್​ ಸಂತೋಷ್​ಗೆ ಭೇಟಿ

ಎಸ್​.ಟಿ ಸೋಮಶೇಖರ್​ ಕ್ಷೇತ್ರಕ್ಕೆ ಭರ್ಜರಿ ಅನುದಾನ

ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾದ ಶಾಸಕ ಎಸ್.ಟಿ.ಸೋಮಶೇಖರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ಅವರ ಯಶವಂತಪುರ ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸರ್ಕಾರ 7.63 ಕೋಟಿ ರೂ. ಬಿಡುಗಡೆ ಮಾಡಿದೆ. ಅನುದಾನ ಮಂಜೂರು ಮಾಡಿರುವುದು ಭಾರಿ ಚರ್ಚೆಗೆ ಹಾಗೂ ಕುತೂಹಲ ಮೂಡಿಸಿದೆ. ಅಲ್ಲದೇ ಅನುದಾನ ನಿಡುವ ಮೂಲಕ ಅವರನ್ನು ಕಾಂಗ್ರೆಸ್​ಗೆ ಸೆಳೆಯುವ ತಂತ್ರವೇ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ