AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ರೌಪದಿ ಮುರ್ಮು ಬಗ್ಗೆ ಕಾಂಗ್ರೆಸ್ ನಾಯಕನ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಒಡಿಶಾ ವಿಧಾನಸಭೆಯಲ್ಲಿ ಬಿಜೆಪಿ ಶಾಸಕರ ಪ್ರತಿಭಟನೆ

ಕಾಂಗ್ರೆಸ್ ನಾಯಕ ಅಜೋಯ್ ಕುಮಾರ್ ಅವರು ದ್ರೌಪದಿ ಮುರ್ಮು ಅವರು ಭಾರತದ ಬಹಳ ದುಷ್ಟ ತತ್ವವನ್ನು ಪ್ರತಿನಿಧಿಕರಿಸುತ್ತಿದ್ದಾರೆ.  ಅವರನ್ನು ಆದಿವಾಸಿಗಳ ಸಂಕೇತ ಎಂದು ಮಾಡಬಾರದು ಎಂದು ಹೇಳಿದ್ದಾರೆ.

ದ್ರೌಪದಿ ಮುರ್ಮು ಬಗ್ಗೆ ಕಾಂಗ್ರೆಸ್ ನಾಯಕನ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಒಡಿಶಾ ವಿಧಾನಸಭೆಯಲ್ಲಿ ಬಿಜೆಪಿ ಶಾಸಕರ ಪ್ರತಿಭಟನೆ
ಬಿಜೆಪಿ ಶಾಸಕರ ಪ್ರತಿಭಟನೆ
TV9 Web
| Edited By: |

Updated on:Jul 14, 2022 | 5:08 PM

Share

ಭುವನೇಶ್ವರ್: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್​​ಡಿಎ (NDA) ಅಭ್ಯರ್ಥಿ ದ್ರೌಪದಿ ಮುರ್ಮ (Droupadi Murmu) ಬಗ್ಗೆ ಕಾಂಗ್ರೆಸ್ ನಾಯಕ ಅಜೋಯ್ ಕುಮಾರ್ (Ajoy Kumar) ನೀಡಿದ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಬಿಜೆಪಿ ಶಾಸಕರು ಒಡಿಶಾ ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿ ಕಲಾಪಕ್ಕೆ ಅಡ್ಡಿಯುಂಟು ಮಾಡಿದ್ದಾರೆ. ಕಾಂಗ್ರೆಸ್ ನಾಯಕ ಅಜೋಯ್ ಕುಮಾರ್ ಅವರು ದ್ರೌಪದಿ ಮುರ್ಮು,  ಭಾರತದ ಬಹಳ ದುಷ್ಟ ತತ್ವವನ್ನು ಪ್ರತಿನಿಧಿಕರಿಸುತ್ತಿದ್ದಾರೆ.  ಅವರನ್ನು ಆದಿವಾಸಿಗಳ ಸಂಕೇತ ಎಂದು ಮಾಡಬಾರದು ಎಂದು ಹೇಳಿದ್ದಾರೆ. ಈ ಹೇಳಿಕೆ ಖಂಡಿಸಿದ ಬಿಜೆಪಿ ರಾಮಮಂದಿರ ಸ್ಕ್ವೇರ್​​ನಿಂದ ಮಾಸ್ಟರ್ ಕ್ಯಾಂಟೀನ್ ಸ್ಕ್ವೇರ್​​ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಬೆಳಗ್ಗೆ ಕಲಾಪ ಆರಂಭವಾಗಿ 10.30ರ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕರು ಸದನದ ಅಂಗಳಕ್ಕೆ ಇಳಿದು ಪ್ರತಿಭಟನೆ ನಡೆಸಿ ಆಕ್ಷೇಪಾರ್ಹ ಹೇಳಿಕೆಗೆ ಅಜೋಯ್ ಕುಮಾರ್ ಮತ್ತು ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಸ್ಪೀಕರ್ ಬಿಕ್ರಮ್ ಕೇಶರಿ ಅರುಖಾ ಅವರು ಪ್ರತಿಭಟನೆ ನಡೆಸುತ್ತಿದ್ದ ಸದಸ್ಯರಲ್ಲಿ ಸೀಟಿಗೆ ಮರಳುವಂತೆ ಒತ್ತಾಯಿಸಿದ್ದು, ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿ ಎಂದು ಹೇಳಿದ್ದಾರೆ. ಆದರೆ ಶಾಸಕರು ಪಟ್ಟು ಬಿಡದೆ ಪ್ರತಿಭಟನೆ ನಡೆಸಿದ ಕಾರಣ ಕಲಾಪವನ್ನು 11.30ಕ್ಕೆ ರದ್ದು ಮಾಡಲಾಯಿತು. 4 ಗಂಟೆಗೆ ಶೂನ್ಯವೇಳೆಯಲ್ಲಿ ಚರ್ಚೆ ಆರಂಭವಾದಾಗ ಬಿಜೆಪಿ ಮತ್ತೆ ಅದೇ ವಿಷಯವನ್ನು ಎತ್ತಿದೆ.

ವಿಪಕ್ಷಗಳ ಮುಖ್ಯ ವಿಪ್ ಮೋಹನ್ ಮಾಜ್ಹಿ ಅಜೋಯ್ ವಿರುದ್ಧ ಖಂಡನಾ ನಿರ್ಣಯಕ್ಕೆ ಒತ್ತಾಯಿಸಿದ್ದಾರೆ. ಒಡಿಶಾದ ಸಚಿವರು, ಜಾರ್ಖಂಡ್ ರಾಜ್ಯಪಾಲರು ಆಗಿದ್ದ ದ್ರೌಪದಿ ಮುರ್ಮು ಉತ್ತಮ ಆಡಳಿತಾಧಿಕಾರಿ ಎಂದು ಈಗಾಗಲೇ ಸಾಬೀತುಪಡಿಸಿದ್ದಾರೆ. ಆಕೆ ಬುಡಕಟ್ಟು ಜನರ ಅಭಿವೃದ್ಧಿಗಾಗಿ ಮಾಡಿದ ಕಾರ್ಯಗಳು ಶ್ಲಾಘನೀಯ. ಅಜೋಯ್ ಕುಮಾರ್ ಅವರ ಹೇಳಿಕೆಯು ಆಕೆಯ ಬಗ್ಗೆ ಕಾಂಗ್ರೆಸ್ ಪಕ್ಷದ ವರ್ತನೆಯನ್ನು ಬಿಂಬಿಸುತ್ತದೆ ಎಂದಿದ್ದಾರೆ.

ಇದನ್ನೂ ಓದಿ
Image
Lulu Mall: ಲುಲು ಮಾಲ್​ನೊಳಗೆ ನಮಾಜ್ ಮಾಡಿದ ವಿಡಿಯೋ ವೈರಲ್; ಹಿಂದೂ ಸಂಘಟನೆಗಳ ಆಕ್ಷೇಪ
Image
ಮುಂಬೈಗೆ ಬಂದಾಗ ಉದ್ಧವ್ ಠಾಕ್ರೆ ಮನೆ ಮಾತೋಶ್ರೀಗೆ ಭೇಟಿ ನೀಡಲ್ಲ ದ್ರೌಪದಿ ಮುರ್ಮು
Image
Watch ಉತ್ತರ ಪ್ರದೇಶ: ಬಿಜೆಪಿ ಶಾಸಕ, ನಗರ ಪಾಲಿಕೆ ಅಧ್ಯಕ್ಷರಿಗೆ ಕೆಸರು ಸ್ನಾನ ಮಾಡಿಸಿ ಮಳೆಗಾಗಿ ಪ್ರಾರ್ಥಿಸಿದ ಮಹಿಳೆಯರು
Image
ದ್ರೌಪದಿ ಮುರ್ಮು ಒಳ್ಳೆಯವರು, ನನ್ನ ಮಾತನ್ನು ಬೇರೇ ರೀತಿಯಲ್ಲಿ ಅರ್ಥೈಸಲಾಗಿದೆ: ಕಾಂಗ್ರೆಸ್ ನಾಯಕ

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ನರಸಿಂಘ ಮಿಶ್ರಾ ಅವರು ಬಿಜೆಪಿ ಸದಸ್ಯರ ಒತ್ತಾಯಕ್ಕೆ ಪ್ರತಿಕ್ರಿಯಿಸಿದ್ದು ಅಜೋಯ್ ಮತ್ತು ರಾಹುಲ್ ಗಾಂಧಿ ಈ ವಿಧಾನಸಭೆಯ ಸದಸ್ಯರು ಅಲ್ಲ. ಹೀಗಿರುವಾಗ ಅವರ ಬಗ್ಗೆ ಚರ್ಚೆಗಳು  ವಿಧಾನಸಭೆಯ ನಿಯಮಾವಳಿಗಳ ವಿರುದ್ಧವಾಗಿದೆ. ಅಜೋಯ್ ಅವರು ವೈಯಕ್ತಿಕವಾಗಿ ಮುರ್ಮು ಅವರನ್ನು ಹೊಗಳಿದ್ದಾರೆ. ಆದಾಗ್ಯೂ, ಕಾಂಗ್ರೆಸ್ ಆಕೆ ಪ್ರತಿನಿಧಿಕರಿಸುತ್ತಿರುವ ಸಿದ್ಧಾಂತನ್ನು ವಿರೋಧಿಸುತ್ತಲೇ ಬಂದಿದೆ ಎಂದು ಹೇಳಿದ್ದಾರೆ.

ವಿಧಾನಸಭೆ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಡಿ ಶಾಸಕ ಡೆಬಿ ಪ್ರಸಾದ್ ಮಿಶ್ರಾ, ಮುರ್ಮು ಮೇಲಿನ ವೈಯಕ್ತಿಕ ದಾಳಿ ಖಂಡನೀಯ ಆದರೆ ಕಲಾಪ ಮುಂದವರಿಯಲು ಬಿಡಬೇಕು ಎಂದು ಹೇಳಿದ್ದಾರೆ. ದ್ರೌಪದಿ ಮುರ್ಮು ಅವರ ಗ್ರಾಮವಾದ ಬರಿಪದದ ರಾಯಿರಂಗ್​​ಪುರ್ ಸೇರಿದಂತೆ ಹಲವಡೆ ಬಿಜೆಪಿ ಪ್ರತಿಭಟನೆ ನಡೆಸಿದೆ. ಬಿಜೆಪಿ ರಾಜ್ಯ ಘಟಕವು ಒಡಿಶಾ, ಮಹಿಳೆ, ಬುಡಕಟ್ಟು ಜನಾಂಗ ಮತ್ತು ದಲಿತರನ್ನು ಅವಮಾನಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಅಜೋಯ್ ಕುಮಾರ್ ಪ್ರತಿಕೃತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದೆ.

Published On - 4:24 pm, Thu, 14 July 22

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ