AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ರಾಜ್ಯಾಧ್ಯಕ್ಷರ ನೇಮಕ ಆಗುವ ತನಕ ನೀವೇ ನಾಯಕತ್ವ ವಹಿಸಿ; ಯಡಿಯೂರಪ್ಪಗೆ ಬಿಜೆಪಿ ಶಾಸಕರ ಒತ್ತಾಯ

ಹೊಸ ರಾಜ್ಯಾಧ್ಯಕ್ಷರ ನೇಮಕ ಆಗುವ ತನಕ ನೀವೇ ನಾಯಕತ್ವ ವಹಿಸಿ. ನಿಮಗೆ ಮಾತ್ರ ಕಾಂಗ್ರೆಸ್​​ ಪಕ್ಷ ಹೆದರುತ್ತದೆ. ಪಕ್ಷದ ನಾಯಕತ್ವದ ಕೊರತೆಯ ಲಾಭ ಪಡೆಯಲು ಕಾಂಗ್ರೆಸ್ ಯತ್ನಿಸುತ್ತಿದೆ. ಇದಕ್ಕೆಲ್ಲಾ ನಾವು ಕಡಿವಾಣ ಹಾಕಲೇಬೇಕು ಎಂದು ಶಾಸಕರು ಯಡಿಯೂರಪ್ಪ ಬಳಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೊಸ ರಾಜ್ಯಾಧ್ಯಕ್ಷರ ನೇಮಕ ಆಗುವ ತನಕ ನೀವೇ ನಾಯಕತ್ವ ವಹಿಸಿ; ಯಡಿಯೂರಪ್ಪಗೆ ಬಿಜೆಪಿ ಶಾಸಕರ ಒತ್ತಾಯ
ಯಡಿಯೂರಪ್ಪ
Follow us
ಕಿರಣ್​ ಹನಿಯಡ್ಕ
| Updated By: Ganapathi Sharma

Updated on: Aug 19, 2023 | 3:29 PM

ಬೆಂಗಳೂರು, ಆಗಸ್ಟ್ 19: ರಾಜ್ಯ ಬಿಜೆಪಿಗೆ ಹೊಸ ಅಧ್ಯಕ್ಷರ ನೇಮಕವಾಗುವ ವರೆಗೆ ನೀವೇ ಪಕ್ಷದ ನಾಯಕತ್ವ ವಹಿಸಿ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಬಳಿ ಪಕ್ಷದ ಶಾಸಕರು (BJP MLAs) ಒತ್ತಾಯಿಸಿದ್ದಾರೆ ಎಂಬುದು ತಿಳಿದುಬಂದಿದೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಯಡಿಯೂರಪ್ಪ ಶುಕ್ರವಾರ ರಾತ್ರಿ ಪಕ್ಷದ ನಾಯಕರ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಶಾಸಕರು ಯಡಿಯೂರಪ್ಪ ಅವರ ಮೇಲೆ ಒತ್ತಡ ಹೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೊಸ ರಾಜ್ಯಾಧ್ಯಕ್ಷರ ನೇಮಕ ಆಗುವ ತನಕ ನೀವೇ ನಾಯಕತ್ವ ವಹಿಸಿ. ನಿಮಗೆ ಮಾತ್ರ ಕಾಂಗ್ರೆಸ್​​ ಪಕ್ಷ ಹೆದರುತ್ತದೆ. ಪಕ್ಷದ ನಾಯಕತ್ವದ ಕೊರತೆಯ ಲಾಭ ಪಡೆಯಲು ಕಾಂಗ್ರೆಸ್ ಯತ್ನಿಸುತ್ತಿದೆ. ಇದಕ್ಕೆಲ್ಲಾ ನಾವು ಕಡಿವಾಣ ಹಾಕಲೇಬೇಕು ಎಂದು ಶಾಸಕರು ಯಡಿಯೂರಪ್ಪ ಬಳಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಶಾಸಕರ ಸಮಸ್ಯೆ ಕೇಳಲು ನಾಯಕರೇ ಇಲ್ಲದಂತಾಗಿದೆ. ಕ್ಷೇತ್ರದ ಸಮಸ್ಯೆ ಕುರಿತು ಚರ್ಚಿಸಲು ಯಾರೂ ಮುಂದಾಗುತ್ತಿಲ್ಲ. ನಮ್ಮ ಕೊರತೆಯನ್ನು ಕಾಂಗ್ರೆಸ್ ಪಕ್ಷ ಬಳಸಿಕೊಳ್ಳುತ್ತಿದೆ. ಅದನ್ನು ತಡೆಯಲು ನೀವೇ ಮುಂದಾಗಬೇಕು. ನೀವು ನಿವೃತ್ತಿ ಘೋಷಿಸಿರುವುದು ಚುನಾವಣಾ ರಾಜಕಾರಣಕ್ಕೆ ಮಾತ್ರ. ನೀವು ನಾಯಕತ್ವ ವಹಿಸಿಕೊಂಡು ಶಾಸಕರ ಬೆನ್ನಿಗೆ ನಿಲ್ಲಬೇಕು ಎಂದು ಸಭೆಯಲ್ಲಿ ಯಡಿಯೂರಪ್ಪ ಅವರಿಗೆ ಶಾಸಕರು ಮನವಿ ಮಾಡಿದ್ದಾರೆ. ಶಾಸಕರ ಒತ್ತಾಯ ಮೇರೆಗೆ ಆಗಸ್ಟ್ 23ರಂದು ಹೋರಾಟಕ್ಕೆ ಯಡಿಯೂರಪ್ಪ ಕರೆ ನೀಡಿದ್ದಾರೆ.

ಇದನ್ನೂ ಓದಿ: Karnataka Politics: ಬಿಜೆಪಿಗೆ ಮತ್ತೆ ಅನಿವಾರ್ಯವಾದರೇ ಬಿಎಸ್ ಯಡಿಯೂರಪ್ಪ, ಇತ್ತೀಚಿನ ಬೆಳವಣಿಗೆಗಳು ಹೇಳುವುದೇನು?

ಆಪರೇಷನ್ ಹಸ್ತದ ಭೀತಿಯ ನಡುವೆ ರಾಜ್ಯ ಬಿಜೆಪಿ ನಾಯಕರ ಅಸಮಾಧಾನಗಳನ್ನು ತಣಿಸುವ ನಿಟ್ಟಿನಲ್ಲಿ ಯಡಿಯೂರಪ್ಪ ನಿವಾಸದಲ್ಲಿ ಶುಕ್ರವಾರ ರಾತ್ರಿ ನಡೆದ ಸಭೆ ಮಹತ್ವ ಪಡೆದಿತ್ತು. ಅದೇ ರೀತಿ ಮುಂಬರುವ ಬಿಬಿಎಂಪಿ ಹಾಗೂ ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಂಘಟಿಸುವ ಬಗ್ಗೆಯೂ ಚರ್ಚೆ ನಡೆದಿತ್ತು. ಇದೇ ವೇಳೆ, ರಾಜ್ಯದಲ್ಲಿ ನಾಯಕತ್ವ ವಿಚಾರವಾಗಿಯೂ ಮಾತುಕತೆ ನಡೆದಿತ್ತು. ಶೀಘ್ರದಲ್ಲೇ ಪ್ರತಿಪಕ್ಷ ನಾಯಕನ ನೇಮಕ ಹಾಗೂ ನೂತನ ರಾಜ್ಯಾಧ್ಯಕ್ಷರ ನೇಮಕವಾಗಲಿದೆ ಎಂದು ಯಡಿಯೂರಪ್ಪ ಹೇಳಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ