ಹೊಸ ರಾಜ್ಯಾಧ್ಯಕ್ಷರ ನೇಮಕ ಆಗುವ ತನಕ ನೀವೇ ನಾಯಕತ್ವ ವಹಿಸಿ; ಯಡಿಯೂರಪ್ಪಗೆ ಬಿಜೆಪಿ ಶಾಸಕರ ಒತ್ತಾಯ

ಹೊಸ ರಾಜ್ಯಾಧ್ಯಕ್ಷರ ನೇಮಕ ಆಗುವ ತನಕ ನೀವೇ ನಾಯಕತ್ವ ವಹಿಸಿ. ನಿಮಗೆ ಮಾತ್ರ ಕಾಂಗ್ರೆಸ್​​ ಪಕ್ಷ ಹೆದರುತ್ತದೆ. ಪಕ್ಷದ ನಾಯಕತ್ವದ ಕೊರತೆಯ ಲಾಭ ಪಡೆಯಲು ಕಾಂಗ್ರೆಸ್ ಯತ್ನಿಸುತ್ತಿದೆ. ಇದಕ್ಕೆಲ್ಲಾ ನಾವು ಕಡಿವಾಣ ಹಾಕಲೇಬೇಕು ಎಂದು ಶಾಸಕರು ಯಡಿಯೂರಪ್ಪ ಬಳಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೊಸ ರಾಜ್ಯಾಧ್ಯಕ್ಷರ ನೇಮಕ ಆಗುವ ತನಕ ನೀವೇ ನಾಯಕತ್ವ ವಹಿಸಿ; ಯಡಿಯೂರಪ್ಪಗೆ ಬಿಜೆಪಿ ಶಾಸಕರ ಒತ್ತಾಯ
ಯಡಿಯೂರಪ್ಪ
Edited By:

Updated on: Aug 19, 2023 | 3:29 PM

ಬೆಂಗಳೂರು, ಆಗಸ್ಟ್ 19: ರಾಜ್ಯ ಬಿಜೆಪಿಗೆ ಹೊಸ ಅಧ್ಯಕ್ಷರ ನೇಮಕವಾಗುವ ವರೆಗೆ ನೀವೇ ಪಕ್ಷದ ನಾಯಕತ್ವ ವಹಿಸಿ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಬಳಿ ಪಕ್ಷದ ಶಾಸಕರು (BJP MLAs) ಒತ್ತಾಯಿಸಿದ್ದಾರೆ ಎಂಬುದು ತಿಳಿದುಬಂದಿದೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಯಡಿಯೂರಪ್ಪ ಶುಕ್ರವಾರ ರಾತ್ರಿ ಪಕ್ಷದ ನಾಯಕರ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಶಾಸಕರು ಯಡಿಯೂರಪ್ಪ ಅವರ ಮೇಲೆ ಒತ್ತಡ ಹೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೊಸ ರಾಜ್ಯಾಧ್ಯಕ್ಷರ ನೇಮಕ ಆಗುವ ತನಕ ನೀವೇ ನಾಯಕತ್ವ ವಹಿಸಿ. ನಿಮಗೆ ಮಾತ್ರ ಕಾಂಗ್ರೆಸ್​​ ಪಕ್ಷ ಹೆದರುತ್ತದೆ. ಪಕ್ಷದ ನಾಯಕತ್ವದ ಕೊರತೆಯ ಲಾಭ ಪಡೆಯಲು ಕಾಂಗ್ರೆಸ್ ಯತ್ನಿಸುತ್ತಿದೆ. ಇದಕ್ಕೆಲ್ಲಾ ನಾವು ಕಡಿವಾಣ ಹಾಕಲೇಬೇಕು ಎಂದು ಶಾಸಕರು ಯಡಿಯೂರಪ್ಪ ಬಳಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಶಾಸಕರ ಸಮಸ್ಯೆ ಕೇಳಲು ನಾಯಕರೇ ಇಲ್ಲದಂತಾಗಿದೆ. ಕ್ಷೇತ್ರದ ಸಮಸ್ಯೆ ಕುರಿತು ಚರ್ಚಿಸಲು ಯಾರೂ ಮುಂದಾಗುತ್ತಿಲ್ಲ. ನಮ್ಮ ಕೊರತೆಯನ್ನು ಕಾಂಗ್ರೆಸ್ ಪಕ್ಷ ಬಳಸಿಕೊಳ್ಳುತ್ತಿದೆ. ಅದನ್ನು ತಡೆಯಲು ನೀವೇ ಮುಂದಾಗಬೇಕು. ನೀವು ನಿವೃತ್ತಿ ಘೋಷಿಸಿರುವುದು ಚುನಾವಣಾ ರಾಜಕಾರಣಕ್ಕೆ ಮಾತ್ರ. ನೀವು ನಾಯಕತ್ವ ವಹಿಸಿಕೊಂಡು ಶಾಸಕರ ಬೆನ್ನಿಗೆ ನಿಲ್ಲಬೇಕು ಎಂದು ಸಭೆಯಲ್ಲಿ ಯಡಿಯೂರಪ್ಪ ಅವರಿಗೆ ಶಾಸಕರು ಮನವಿ ಮಾಡಿದ್ದಾರೆ. ಶಾಸಕರ ಒತ್ತಾಯ ಮೇರೆಗೆ ಆಗಸ್ಟ್ 23ರಂದು ಹೋರಾಟಕ್ಕೆ ಯಡಿಯೂರಪ್ಪ ಕರೆ ನೀಡಿದ್ದಾರೆ.

ಇದನ್ನೂ ಓದಿ: Karnataka Politics: ಬಿಜೆಪಿಗೆ ಮತ್ತೆ ಅನಿವಾರ್ಯವಾದರೇ ಬಿಎಸ್ ಯಡಿಯೂರಪ್ಪ, ಇತ್ತೀಚಿನ ಬೆಳವಣಿಗೆಗಳು ಹೇಳುವುದೇನು?

ಆಪರೇಷನ್ ಹಸ್ತದ ಭೀತಿಯ ನಡುವೆ ರಾಜ್ಯ ಬಿಜೆಪಿ ನಾಯಕರ ಅಸಮಾಧಾನಗಳನ್ನು ತಣಿಸುವ ನಿಟ್ಟಿನಲ್ಲಿ ಯಡಿಯೂರಪ್ಪ ನಿವಾಸದಲ್ಲಿ ಶುಕ್ರವಾರ ರಾತ್ರಿ ನಡೆದ ಸಭೆ ಮಹತ್ವ ಪಡೆದಿತ್ತು. ಅದೇ ರೀತಿ ಮುಂಬರುವ ಬಿಬಿಎಂಪಿ ಹಾಗೂ ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಂಘಟಿಸುವ ಬಗ್ಗೆಯೂ ಚರ್ಚೆ ನಡೆದಿತ್ತು. ಇದೇ ವೇಳೆ, ರಾಜ್ಯದಲ್ಲಿ ನಾಯಕತ್ವ ವಿಚಾರವಾಗಿಯೂ ಮಾತುಕತೆ ನಡೆದಿತ್ತು. ಶೀಘ್ರದಲ್ಲೇ ಪ್ರತಿಪಕ್ಷ ನಾಯಕನ ನೇಮಕ ಹಾಗೂ ನೂತನ ರಾಜ್ಯಾಧ್ಯಕ್ಷರ ನೇಮಕವಾಗಲಿದೆ ಎಂದು ಯಡಿಯೂರಪ್ಪ ಹೇಳಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More
Loading...
Unable to load recommendations.
Follow Us