ಉಡುಪಿ ವಿಡಿಯೋ ಇದ್ದರೆ ತೋರಿಸಿ ಎಂದ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಎನ್​ ರವಿಕುಮಾರ್ ತಿರುಗೇಟು

ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ ಆರೋಪ ಪ್ರಕರಣ ಸಂಬಂಧ ಬಿಜೆಪಿ ಕಾಂಗ್ರೆಸ್ ನಡುವೆ ಜಟಾಪಟಿ ನಡೆಯುತ್ತಿದೆ. ವಿಡಿಯೋ ಸಾಕ್ಷಿ ಕೇಳಿದ ಸಚಿವ ಪ್ರಿಯಾಂಕ್ ಖರ್ಗೆಗೆ ಬಿಜೆಪಿ ಎಂಎಲ್​ಸಿ ಎನ್ ರವಿಕುಮಾರ್ ಅವರು ಸಾಕ್ಷಿಗಳನ್ನು ಹೇಳಿದ್ದಾರೆ.

ಉಡುಪಿ ವಿಡಿಯೋ ಇದ್ದರೆ ತೋರಿಸಿ ಎಂದ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಎನ್​ ರವಿಕುಮಾರ್ ತಿರುಗೇಟು
ಎನ್ ರವಿಕುಮಾರ್ ಮತ್ತು ಪ್ರಿಯಾಂಕ್ ಖರ್ಗೆ
Follow us
ಅಮೀನ್​ ಸಾಬ್​
| Updated By: Rakesh Nayak Manchi

Updated on:Jul 29, 2023 | 10:28 PM

ಯಾದಗಿರಿ, ಜುಲೈ 29: ಉಡುಪಿಯ ನೇತ್ರಜ್ಯೋತಿ ಕಾಲೇಜಿನ (Udupi Netra Jyothi College) ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣ ಸಂಬಂಧ ವಿಡಿಯೋ ಇದ್ದರೆ ತೋರಿಸಿ ಎಂದು ಹೇಳಿದ ಸಚಿವ ಪ್ರಿಯಾಂಕ್ ಖರ್ಗೆಗೆ (Priyank Kharge) ಬಿಜೆಪಿ ಎಂಎಲ್​ಸಿ ಎನ್​.ರವಿಕುಮಾರ್ (N Ravikumar) ಅವರು ಸಾಕ್ಷ್ಯಗಳನ್ನು ಹೇಳಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಬುದ್ಧಿವಂತರು, ಅವರಿಗೆ ಪ್ರೂಫ್‌ ಏನಿದೆ ಅಂತಾ ನಾನು ಹೇಳುತ್ತೇನೆ. ಕಳೆದ ಒಂದು ವರ್ಷದಿಂದ ಗೌಪ್ಯವಾಗಿ ವಿಡಿಯೋ ಚಿತ್ರೀಕರಣ ನಡೆಯುತ್ತಿತ್ತು ಅಂತಾ ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ಅಷ್ಟು ಮಾತ್ರವಲ್ಲದೆ, ವಿಡಿಯೋ ಚಿತ್ರೀಕರಣ ಮಾಡುತ್ತಿದ್ದೆವು ಎಂದು ಸ್ವತಃ ವಿಡಿಯೋ ಚಿತ್ರೀಕರಣ ಮಾಡಿದ್ದ ವಿದ್ಯಾರ್ಥಿನಿಯರೇ ಪತ್ರದ ಮೂಲಕ ತಿಳಿಸಿದ್ದಾರೆ ಎಂದು ಹೇಳಿದರು.

ನಾವು ರೆಕಾರ್ಡ್ ಮಾಡುತ್ತಾ ಇದ್ದೆವು ಅಂತ ಸ್ವತಃ ವಿದ್ಯಾರ್ಥಿನಿಯರೇ ಕಾಲೇಜು ಆಡಳಿತ ಮಂಡಳಿಗೆ ಕ್ಷಮಾಪಣೆ ಪತ್ರ ಬರೆದಿದ್ದಾರೆ. ಪ್ರಿಯಾಂಕ್ ಖರ್ಗೆ ಅವರಿಗೆ ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು ಎಂದು ಎನ್ ರವಿಕುಮಾರ್ ಕೇಳಿದರು. ಅಲ್ಲದೆ, ಹಿಂದೂ ವಿದ್ಯಾರ್ಥಿನಿಯರು ಮೂರು ಜನ ಅಲ್ಪಸಂಖ್ಯಾತ ವಿದ್ಯಾರ್ಥಿನಿಯರ ವಿಡಿಯೋ ಮಾಡಿದ್ದಿದ್ದರೆ ನೀವು ಏನು ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಸಚಿವರ ವಿರುದ್ಧ ಸಿಎಂ ಸಿದ್ದರಾಮಯ್ಯಗೆ 20 ಶಾಸಕರು ದೂರು ಕೊಟ್ಟಿದ್ದಾರೆ: ಎನ್ ರವಿಕುಮಾರ್

ಇಷ್ಟೊಂದು ತುಷ್ಠೀಕರಣ, ಓಲೈಕೆ, ಮತ ಬ್ಯಾಂಕ್ ರಾಜಕಾರಣ ಮಾಡುವುದೇ? ಮಹಿಳೆಯರ ಸುರಕ್ಷತೆ ಬಲಿ ಕೊಟ್ಟು ರಾಜಕಾರಣ ಮಾಡುವುದಾದರೆ ನಿಮ್ಮ ರಾಜಕಾರಣ ರಾಜ್ಯಕ್ಕೆ ಅವಶ್ಯಕತೆಯಿಲ್ಲ ಎಂದು ಪ್ರಿಯಾಂಕ್ ಖರ್ಗೆ ವಿರುದ್ಧ ಎನ್ ರವಿಕುಮಾರ್ ಆಕ್ರೋಶ ಹೊರಹಾಕಿದರು.

ಹಣ ಮತ್ತು ಹೆಣದ ಮೇಲೆ ಕಾಂಗ್ರೆಸ್ ರಾಜಕಾರಣ

ಬಿಜೆಪಿಯವರು ಹೆಣದ ಮೇಲೆ ರಾಜಕಾರಣ ಮಾಡುತ್ತಿದ್ದಾರೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದ ಎನ್ ರವಿಕುಮಾರ್, ಹಣ ಮತ್ತು ಹೆಣದ ಮೇಲೆ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ. ಎರಡೇ ತಿಂಗಳಲ್ಲಿ ಕಾಂಗ್ರೆಸ್​ಗೆ ಹಣದ ಅಮಲು ಬಂದಿದೆ. ಈ ಸರ್ಕಾರ ಏನಪ್ಪ ಅಂತ ಜನ ಯೋಚನೆ ಮಾಡುತ್ತಿದ್ದಾರೆ. ಕಾಂಗ್ರೆಸ್​ನವರು ಆಕಾಶದಲ್ಲಿದ್ದಾರೆ. ಸ್ವಲ್ಪ ಅವರು ಭೂಮಿಗೆ ಇಳಿಯಬೇಕು ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:23 pm, Sat, 29 July 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್