Karnataka Assembly Poll 2023: ಕಾಂಗ್ರೆಸ್ ಬಾಗಿಲು ತಟ್ಟಿದ ಬಿಜೆಪಿ ಹಾಲಿ MLC, ರಾಜಾಜಿನಗರ ಕ್ಷೇತ್ರದ ಟಿಕೆಟ್​ಗೆ ಬೇಡಿಕೆ

| Updated By: ರಮೇಶ್ ಬಿ. ಜವಳಗೇರಾ

Updated on: Nov 29, 2022 | 11:01 PM

ಜೆಡಿಎಸ್​ನಿಂದ ಅಮಾನತುಗೊಂಡು ಬಿಜೆಪಿ ಸೇರ್ಪಡೆಯಾಗಿರುವ ವಿಧಾನಪರಿಷತ್​ ಸದಸ್ಯರೊಬ್ಬರು ಕಾಂಗ್ರೆಸ್​ ಬಾಗಿಲು ತಟ್ಟಿದ್ದಾರೆ. ಎರಡೇ ವರ್ಷಕ್ಕೆ ಬಿಜೆಪಿ ತೊರೆಯಲು ಮುಂದಾಗಿದ್ದಾರೆ.

Karnataka Assembly Poll 2023: ಕಾಂಗ್ರೆಸ್ ಬಾಗಿಲು ತಟ್ಟಿದ ಬಿಜೆಪಿ ಹಾಲಿ MLC, ರಾಜಾಜಿನಗರ ಕ್ಷೇತ್ರದ ಟಿಕೆಟ್​ಗೆ ಬೇಡಿಕೆ
Puttanna And BS Yediyurappa
Follow us on

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ( Karnataka Assembly Poll 2023) ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಆಕಾಂಕ್ಷಿಗಳು ಟಿಕೆಟ್​ಗಾಗಿ ಭರ್ಜರಿ ಲಾಬಿ ನಡೆಸಿದ್ದಾರೆ. ಇದರ ಮಧ್ಯೆ ಸೈಲೆಂಟ್​ ಆಗಿ ಪಕ್ಷಾಂತರ ಬೆಳವಣಿಗೆಗಳು ನಡೆಯುತ್ತಿವೆ. ಇದಕ್ಕೆ ಪೂರಕವೆಂಬಂತೆ ಇತ್ತೀಚೆಗೆ ಅಷ್ಟೇ ಬಿಜೆಪಿ ಸೇರ್ಪಡೆಯಾಗಿ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಗೆಲುವು ಸಾಧಿಸಿರುವ ಪುಟ್ಟಣ್ಣ (BJP MLC Puttanna)  ಕಾಂಗ್ರೆಸ್​ ಬಾಗಿಲು ತಟ್ಟಿದ್ದಾರೆ.

ಹೌದು…ಜೆಡಿಎಸ್​ ತೊರೆದು ಬಿಜೆಪಿ ಸೇರ್ಪಡೆಯಾಗಿ ವಿಧಾನಪರಿಷ್ ಸದಸ್ಯರಾಗಿಯೂ ಆಯ್ಕೆಯಾಗಿರುವ ಪುಟ್ಟಣ್ಣ ಅವರು ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದು, ಕಾಂಗ್ರೆಸ್ ಸೇರ್ಪಡೆ ಬಗ್ಗೆ ಒಂದು ಸುತ್ತಿನ ಮಾತುಕತೆ ಮಾಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಸೇರಿ ಆರೇ ತಿಂಗಳಿಗೆ ವಿಧಾನಸಭೆ ಚುನಾವಣೆ ಟಿಕೆಟ್​ಗಾಗಿ​ ಅರ್ಜಿ ಸಲ್ಲಿಸಿದ ​ನಟ, ನಿರ್ದೇಶಕ ಎಸ್. ನಾರಾಯಣ್

ನ.24ರಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದ್ದು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಬೇಡಿಕೆ ಇಟ್ಟಿದ್ದಾರೆ. ಒಂದು ವೇಳೆ ಟಿಕೆಟ್​​ ಕೊಟ್ಟರೆ MLC ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿಯೂ ಸಿದ್ದರಾಮಯ್ಯನವರ ಮುಂದೆ ಹೇಳಿದ್ದಾರೆ. ಇದಕ್ಕೆ ಸಿದ್ದರಾಮಯ್ಯ ಚರ್ಚೆ ಮಾಡಿ ಹೇಳುತ್ತೇನೆ ಎಂದು ಪುಟ್ಟಣಗೆ ಹೇಳಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಅಲ್ಲದೇ ಖುದ್ದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಸಹ ಭೇಟಿ ಮಾಡಿದ್ದು, ರಾಜಾಜಿನಗರದ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ. ಆದ್ರೆ, ಇದಕ್ಕೆ ಡಿಕೆ ಶಿವಕುಮಾರ್ ಯಶವಂತಪುರ ಕ್ಷೇತ್ರದಿಂದ ಸ್ಪರ್ಧಿಸುವಂತೆ ಪುಟ್ಟಣ ಅವರಿಗೆ ಹೇಳಿದ್ದಾರೆ ಎನ್ನಲಾಗಿದೆ.

ಪಕ್ಷ ವಿರೋಧ ಚಟುವಟಿಕೆಗಳ ಹಿನ್ನೆಲೆಯಲ್ಲಿ ಜೆಡಿಎಸ್, ಪುಟ್ಟಣ್ಣ ಅವರನ್ನು ಪಕ್ಷದಿಂದ ಉಚ್ಛಾಟನೆಗೊಳಿಸಿತ್ತು. ಬಳಿಕ ಪುಟ್ಟಣ್ಣ ಅವರು ಅಂದು ಮುಖ್ಯಮಂತ್ರಿಯಾಗಿದ್ದ ಬಿಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಅಲ್ಲದೇ ಬಿಎಸ್ ಯಡಿಯೂರಪ್ಪ ಅವರು ಪುಟ್ಟಣ್ಣಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಟಿಕೆಟ್ ಸಹ ಕೊಡಿಸುವಲ್ಲಿ ಯಶಸ್ವಿಯಾಗಿದ್ದರು. ಬಳಿಕ ನಡೆದ ಚುನಾವಣೆಯಲ್ಲಿ ಪುಟ್ಟಣ್ಣ ಗೆಲುವು ಸಾಧಿಸಿ ಪರಿಷತ್​ಗೆ ಆಯ್ಕೆಯಾದ್ದರು. ಆದ್ರೆ, ಇದೀಗ ಪುಟ್ಟಣ ಎರಡೇ ವರ್ಷಕ್ಕೆ ಬಿಜೆಪಿ ತೊರೆಯಲು ಮುಂದಾಗಿದ್ದಾರೆ.

ರಾಜಾಜಿನಗರ ಕ್ಷೇತ್ರದ ಟಿಕೆಟ್​ಗಾಗು 9 ಅರ್ಜಿ ಸಲ್ಲಿಕೆ

ರಾಜಾಜಿನಗರ ಒಂದೇ ಕ್ಷೇತ್ರಕ್ಕೆ ಬರೋಬ್ಬರಿ 9 ಅರ್ಜಿ ಸಲ್ಲಿಸಲಾಗಿದೆ. ರಾಜಾಜಿನಗರದಲ್ಲಿ ಗೆಲುವು ಸುಲಭ ಅನ್ನೋ ಲೆಕ್ಕಾಚಾರ ಮಾಡಿಕೊಂಡು ನಾ ಮುಂದು..ತಾ ಮುಂದು ಎಂದು ಬಿ ಫಾರಂಗೆ ಅರ್ಜಿ ಸಲ್ಲಿಸಿದ್ಧಾರೆ.

ಕಳೆದ ಬಾರಿ ಸ್ಪರ್ಧಿಸಿ ಸೋಲುಕಂಡಿದ್ದ ಮಾಜಿ ಮೇಯರ್ ಪದ್ಮಾವತಿ ಅವರು ಈ ಬಾರಿಯೂ ರಾಜಾಜಿನಗರ ಟಿಕೆಟ್​ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಇನ್ನು ಇತ್ತೀಚೆಗೆ ಕಾಂಗ್ರೆಸ್ ಸೇರಿರುವ ಸಿನಿಮಾ ನಿರ್ದೇಶಕ ಎಸ್ ನಾರಾಯಣ್, ಮಾಜಿ ಉಪಮೇಯರ್ ಪುಟ್ಟರಾಜು, ಕಾಂಗ್ರೆಸ್ ಯುವ ನಾಯಕಿ ಭವ್ಯ ನರಸಿಂಹಮೂರ್ತಿ, ಮಹಿಳಾ ಕಾಂಗ್ರೆಸ್​ ಅಧ್ಯಕ್ಷೆಯಾಗಿದ್ದ ಮಂಜುಳಾ ನಾಯ್ಡು ಸೇರಿದಂತೆ ಒಟ್ಟು 9 ಜನರು ಅರ್ಜಿ ಅಲ್ಲಿಸಿದ್ದಾರೆ. ಇದರ ಮಧ್ಯೆ ಇದೀಗ ಬಿಜೆಪಿಯ ಪುಟ್ಟಣ್ಣ ಸಹ ರಾಜಾಜಿನಗರ ಟಿಕೆಟ್​ಗೆ ಬೇಡಿಕೆ ಇಟ್ಟಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:37 pm, Tue, 29 November 22