AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಕರ್ನಾಟಕದಲ್ಲಿ ರಾಹುಕಾಲ ಆರಂಭ: ಭಾರತ್ ಜೋಡೋ ಯಾತ್ರೆಗೆ ಬಿಜೆಪಿ ವ್ಯಂಗ್ಯಭರಿತ ಸ್ವಾಗತ!

ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಇರುವ ಕರ್ನಾಟಕದಲ್ಲಿ ಕಾಂಗ್ರೆಸ್‌ ಪರ ಅಲೆ ಎಬ್ಬಿಸಲು ಭಾರತ್ ಜೋಡೋ ಯಾತ್ರೆ ರಾಜ್ಯಕ್ಕೆ ಆಗಮಿಸಿದ್ದು, ಇದಕ್ಕೆ ಬಿಜೆಪಿ ವ್ಯಂಗ್ಯಭರಿತವಾಗಿ ಸ್ವಾಗತ ಮಾಡಿದೆ.

ಇಂದಿನಿಂದ ಕರ್ನಾಟಕದಲ್ಲಿ  ರಾಹುಕಾಲ ಆರಂಭ: ಭಾರತ್ ಜೋಡೋ ಯಾತ್ರೆಗೆ ಬಿಜೆಪಿ ವ್ಯಂಗ್ಯಭರಿತ ಸ್ವಾಗತ!
bharat jodo yatra In Karnataka
TV9 Web
| Edited By: |

Updated on:Sep 30, 2022 | 12:06 PM

Share

ಬೆಂಗಳೂರು/ಚಾಮರಾನಗರ: ದೇಶದಲ್ಲಿ ಒಗ್ಗಟ್ಟು ಮೂಡಿಸುವ ಅಭಿಲಾಷೆಯೊಂದಿಗೆ ತಮಿಳುನಾಡಿನ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್‌ ಜೋಡೋ (Bharat Jodo Yatra)ಹೆಸರಿನಲ್ಲಿ ಪಾದಯಾತ್ರೆ ಕೈಗೊಂಡಿರುವ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಅವರು 20 ದಿನಗಳ ಕಾಲ ಕೇರಳದಲ್ಲಿ ಯಾತ್ರೆ ನಡೆಸಿ ಇಂದು(ಸೆಪ್ಟೆಂಬರ್ 30) ಕರ್ನಾಟಕ ಪ್ರವೇಶಿಸಿದ್ದಾರೆ.

ರಾಜ್ಯಕ್ಕೆ ಆಗಮಿಸಿದ ರಾಹುಲ್ ಗಾಂಧಿ (Rahul Gandhi) ಅವರನ್ನು ಬಂಡೀಪುರದ ಬಳಿ ಸಿದ್ದರಾಮಯ್ಯ ಅವರು ಬರ ಮಾಡಿಕೊಂಡರು. ರಾಹುಲ್ ಗಾಂಧಿಯವರಿಗೆ ರೇಷ್ಮೆ ಹಾರ ಹಾಕುವ ಮೂಲಕ‌ ಸ್ವಾಗತ ಕೋರಿದರು. ಜೋಡೋ ಯಾತ್ರೆ ನೇತೃತ್ವದ ವಹಿಸಿಕೊಂಡು ಕರ್ನಾಟಕಕ್ಕೆ ಆಗಮಿಸುತ್ತಿದ್ದಂತೆಯೇ ಇತ್ತ ಬಿಜೆಪಿ (BJP)ಐಟಿ ಸೆಲ್ ಹಾಗೂ ನಾಯಕರು ಸರಣಿ ಟ್ವೀಟ್ ಮೂಲಕ ವ್ಯಂಗ್ಯವಾಗಿ ಸ್ವಾಗತಿಸಿದ್ದಾರೆ.

ಇದನ್ನೂ ಓದಿ: Bharat Jodo Yatra: ಕರ್ನಾಟಕಕ್ಕೆ ರಾಹುಲ್ ಗಾಂಧಿ ಪ್ರವೇಶ; ತಮಿಳುನಾಡು ಗಡಿಯಲ್ಲೇ ಸಿದ್ದರಾಮಯ್ಯ ಸ್ವಾಗತ

ವ್ಯಂಗ್ಯವಾಗಿ ಸ್ವಾಗತಿಸಿದ ಬಿಜೆಪಿ

ಈ ಹಿಂದೆ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಆಗಮಿಸಿದ್ದಾಗ ಕಾಂಗ್ರೆಸ್​ ಸಾಮಾಜಿ ಜಾಲತಾಣಗಳಲ್ಲಿ ವ್ಯಂಗ್ಯಭರತವಾಗಿ ಸ್ವಾಗತ ಮಾಡಿತ್ತು. ಇದೀಗ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮೂಲಕ ಕರ್ನಾಟಕಕ್ಕೆ ಆಮಿಸಿದ್ದು, ಇದಕ್ಕೆ ಬಿಜೆಪಿ ಸರಣಿ ಟ್ವೀಟ್ ಮೂಲಕ ವ್ಯಂಗ್ಯವಾಗಿ ಸ್ವಾಗತ ಕೋರಿದೆ.

ಇಂದು ರಾಜ್ಯದಲ್ಲಿ ರಾಹುಕಾಲ ಆರಂಭದ ಸಮಯ ಬೆಳಿಗ್ಗೆ 10.30. ಆದುದರಿಂದ ದಿನನಿತ್ಯದ ನೆಮ್ಮದಿ ಮತ್ತು ಶಾಂತಿಗಾಗಿ ರಾಹು ಸಂಬಂಧಿತವಾದ ಕಾರ್ಯಕ್ರಮಗಳಿಂದ ಅಂತರ ಕಾಯ್ದುಕೊಳ್ಳುವಂತೆ ಜನಹಿತಕ್ಕಾಗಿ ಜಾರಿ ಎಂದು ಟ್ವೀಟ್ ಮಾಡಿದೆ.

ಜಾಮೀನಿನ ಆಧಾರದಲ್ಲಿ ಜೈಲಿನಿಂದ ಹೊರಗಿದ್ದುಕೊಂಡು ಭಾರತ್‌ ಜೋಡೋ ಯಾತ್ರೆ ಮಾಡುತ್ತಿರುವ ಭ್ರಷ್ಟ ಪರಿವಾರದ ನಕಲಿ ಗಾಂಧಿ ಕುಡಿ ರಾಹುಲ್ ಗಾಂಧಿ ಅವರಿಗೆ ಕರ್ನಾಟಕಕ್ಕೆ ಆತ್ಮೀಯ ಸ್ವಾಗತ.

ಇದನ್ನೂ ಓದಿ: Bharat Jodo Yatra: ಭಾರತ ಜೋಡಿಸುತ್ತಿರುವ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷ ಜೋಡಿಸುವುದು ಯಾವಾಗ

ಭಯೋತ್ಪಾದಕರ ಬಗ್ಗೆ ಮೃದು ಧೊರಣೆ ಹೊಂದಿ, ದೇಶ ವಿಭಜಕರ ಜೊತೆ ಸಂಬಂಧ ಹೊಂದಿರುವ ರಾಹುಲ್‌ ಗಾಂಧಿ ಅವರಿಗೆ ಸ್ವಾಗತ. ರಾಹುಲ್ ಗಾಂಧಿ‌ ಮಾಡುತ್ತಿರುವುದು ಭಾರತ ಜೋಡೋ ಯಾತ್ರೆಯಲ್ಲ, ಎಐಸಿಸಿ ಮುಂದಿನ ಅಧ್ಯಕ್ಷ ಸ್ಥಾನವನ್ನು ನಕಲಿ ಗಾಂಧಿಗಳ ಕುಟುಂಬದಲ್ಲೇ ಇರಿಸಿಕೊಳ್ಳಲು ಮತ್ತು ನಿಯಂತ್ರಿಸಲು ನಡೆಸುತ್ತಿರುವ ಕಸರತ್ತು ಎಂದು ಟಾಂಗ್ ಕೊಟ್ಟಿದೆ.

‘ಭಾರತ್​ ಜೋಡೋ’ ಪಾದಯಾತ್ರೆ ಬಗ್ಗೆ ಜೋಶಿ ಟ್ವೀಟ್ ​ವಿಭಜನಕಾರಿ ಶಕ್ತಿಗಳೊಂದಿಗೆ ಭಾರತ್ ಜೋಡೋ ಚರ್ಚಿಸಿ. ಭಾರತ ಮಾತೆಗೆ ಅಪಮಾನಿಸುತ್ತ ಜಾತ್ರೆಯೊಂದಿಗೆ ಬಂದಿದ್ದೀರಿ. ಭಾರತ್ ಜೋಡೋ ಯಾತ್ರೆ ಎಂಬ ಜಾತ್ರೆ ಜೊತೆ ಬಂದಿದ್ದೀರಿ. ಭಾರತಮಾತೆಗೆ ಅಪಾರ ಗೌರವ ಕೊಡುವ ಜಾಗಕ್ಕೆ ಬಂದಿದ್ದೀರಿ. ಭಾರತಮಾತೆಗೆ ಗೌರವ ಕೊಡುವ ಕರ್ನಾಟಕಕ್ಕೆ ಬಂದಿದ್ದೀರಿ, ಇಲ್ಲಿ ನೀವು ಅಪಮಾನಿಸಲ್ಲ ಎಂಬ ಆಶಯದೊಂದಿಗೆ ಸ್ವಾಗತ. ಭಾರತಮಾತೆಗೆ ಅಪಮಾನಿಸಲ್ಲವೆಂಬ ಆಶಯದೊಂದಿಗೆ ಸ್ವಾಗತ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟ್ವೀಟ್ ಮಾಡಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:04 pm, Fri, 30 September 22

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!