Babul Supriyo: ಬಿಜೆಪಿ ತೊರೆದು ಬೇರೆ ಪಕ್ಷ ಸೇರುತ್ತಾರಾ ಸಂಸದ ಬಾಬುಲ್ ಸುಪ್ರಿಯೋ?; ಅನುಮಾನಕ್ಕೆ ಕಾರಣವಾಯ್ತು ಫೇಸ್​ಬುಕ್ ಪೋಸ್ಟ್

ಬಿಜೆಪಿ ಬಿಟ್ಟು ಬೇರಾವ ಪಕ್ಷಕ್ಕೂ ನಾನು ಸೇರ್ಪಡೆಯಾಗುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಸಂಸದ ಬಾಬುಲ್ ಸುಪ್ರಿಯೋ ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದರು. ಆದರೆ, ಆ ಭಾಗವನ್ನು ಈ ಡಿಲೀಟ್ ಮಾಡಿರುವುದು ಚರ್ಚೆಗೆ ಕಾರಣವಾಗಿದೆ.

Babul Supriyo: ಬಿಜೆಪಿ ತೊರೆದು ಬೇರೆ ಪಕ್ಷ ಸೇರುತ್ತಾರಾ ಸಂಸದ ಬಾಬುಲ್ ಸುಪ್ರಿಯೋ?; ಅನುಮಾನಕ್ಕೆ ಕಾರಣವಾಯ್ತು ಫೇಸ್​ಬುಕ್ ಪೋಸ್ಟ್
ಬಾಬುಲ್ ಸುಪ್ರಿಯೊ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jul 31, 2021 | 8:25 PM

ನವದೆಹಲಿ: ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ಬಾಬುಲ್ ಸುಪ್ರಿಯೋ ಸಕ್ರಿಯ ರಾಜಕಾರಣಕ್ಕೆ ಗುಡ್​ ಬೈ ಹೇಳುವುದಾಗಿ ಘೋಷಣೆ ಮಾಡಿದ್ದಾರೆ. ಜುಲೈ 7ರಂದು ಕೇಂದ್ರ ಸಂಪುಟ ಪುನಾರಚನೆ ವೇಳೆ ಸಚಿವ ಸ್ಥಾನದಿಂದ ಬಾಬುಲ್ ಸುಪ್ರಿಯೋ ಕೆಳಗಿಳಿದಿದ್ದರು. ತಾವು ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿ, ರಾಜಕಾರಣದಿಂದ ದೂರ ಉಳಿಯುವುದಾಗಿ ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿದ್ದರು. ಮೊದಲು ತಾವು ಬಿಜೆಪಿಯನ್ನು ತೊರೆದು ಬೇರಾವ ಪಕ್ಷಕ್ಕೂ ಸೇರ್ಪಡೆಯಾಗುವುದಿಲ್ಲ ಎಂದು ಬಾಬುಲ್ ಸುಪ್ರಿಯೋ ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದರು. ಆದರೆ, ಇದೀಗ ಆ ಭಾಗವನ್ನು ಡಿಲೀಟ್ ಮಾಡಿರುವ ಅವರು ತಮ್ಮ ಫೇಸ್​ಬುಕ್ ಪೋಸ್ಟ್ ಅನ್ನು ಎಡಿಟ್ ಮಾಡಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಬಾಬುಲ್ ಸುಪ್ರಿಯೋ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೇರೆ ಪಕ್ಷಕ್ಕೆ ಸೇರುತ್ತಾರಾ? ಎಂಬ ಅನುಮಾನ ಹರಿದಾಡುತ್ತಿದೆ.

ಈ ಹಿಂದೆ ಡಿ.ವಿ. ಸದಾನಂದ ಗೌಡ ಸೇರಿದಂತೆ 12 ಸಚಿವರ ಬಳಿ ರಾಜೀನಾಮೆ ಪಡೆದು ಹೊಸ ಸಚಿವರನ್ನು ಕೇಂದ್ರ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿತ್ತು. ಈ ವೇಳೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ನಮಗೆ ಹೈಕಮಾಂಡ್​ನಿಂದ ಆದೇಶ ನೀಡಲಾಗಿತ್ತು. ಅದರಂತೆ ರಾಜೀನಾಮೆ ನೀಡಿದ್ದೇವೆ ಎಂದು ಬಾಬುಲ್ ಸುಪ್ರಿಯೋ ಫೇಸ್​ಬುಕ್​ನಲ್ಲಿ ಬರೆದುಕೊಂಡು ಅನೇಕ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದರು. ಈ ಮೊದಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಬಾಬುಲ್ ಸುಪ್ರಿಯೋ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆಯ ರಾಜ್ಯ ಸಚಿವರಾಗಿದ್ದರು. ಸಂಪುಟ ಪುನಾರಚನೆ ವೇಳೆ ಅವರು ರಾಜೀನಾಮೆ ನೀಡಿದ್ದರು. ಗಾಯಕರಾಗಿದ್ದ ಬಾಬುಲ್ ಸುಪ್ರಿಯೋ ಬಳಿಕ ರಾಜಕಾರಣಕ್ಕೆ ಇಳಿದಿದ್ದರು. ರಾಜಕಾರಣಕ್ಕೆ ಗುಡ್​ ಬೈ ಹೇಳುತ್ತಿರುವುದಾಗಿ ಸುದೀರ್ಘವಾದ ಫೇಸ್​ಬುಕ್ ಪೋಸ್ಟ್ ಮೂಲಕ ಸಂಸದ ಸುಪ್ರಿಯೋ ತಿಳಿಸಿದ್ದಾರೆ.

BJP MP Babul Supriyo may Joining Another Party as he Edits Facebook Post Removes Loyalty to BJP

ಎಡಿಟ್ ಆಗಿರುವ ಸುಪ್ರಿಯೋ ಅವರ ಫೇಸ್​ಬುಕ್ ಪೋಸ್ಟ್

ನಾನು ರಾಜಕಾರಣಕ್ಕೆ ಬಂದು ಬಹಳ ಸಮಯವಾಯಿತೇನೋ ಎನಿಸುತ್ತಿದೆ. ನನ್ನ ಅಧಿಕಾರಾವಧಿಯಲ್ಲಿ ಹಲವರಿಗೆ ಸಹಾಯ ಮಾಡಿದೆ, ಇನ್ನು ಕೆಲವರಿಗೆ ಬೇಸರವನ್ನೂ ಮಾಡಿದೆ. ಇದೀಗ ಗುಡ್​ ಬೈ ಹೇಳುವ ಸಮಯ ಬಂದಿದೆ ಎಂದು ಬಾಬುಲ್ ಸುಪ್ರಿಯೋ ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ.

ನಾನು ಬಿಜೆಪಿ ಪಕ್ಷ ಬಿಟ್ಟು ಬೇರಾವ ಪಕ್ಷಕ್ಕೂ ಹೋಗುತ್ತಿಲ್ಲ. ಟಿಎಂಸಿ, ಕಾಂಗ್ರೆಸ್, ಸಿಪಿಐಎಂ ಯಾವ ಪಕ್ಷವನ್ನೂ ಸೇರುತ್ತಿಲ್ಲ. ನನಗೆ ತಮ್ಮ ಪಕ್ಷಕ್ಕೆ ಬರಬೇಕೆಂದು ಯಾರೂ ಫೋನ್ ಕೂಡ ಮಾಡಿಲ್ಲ. ಕರೆದರೂ ನಾನು ಹೋಗುವುದಿಲ್ಲ. ನಾನು ಒಂದೇ ತಂಡದಲ್ಲಿ ಆಡುವ ಆಟಗಾರ! ಎಂದಿಗೂ ಅದೇ ತಂಡಕ್ಕೆ ನನ್ನ ಬೆಂಬಲ ಇರುತ್ತದೆ. ನಾನು ಮೊದಲಿನಿಂದಲೂ ಪಶ್ಚಿಮ ಬಂಗಾಳದ ಬಿಜೆಪಿ ಪಕ್ಷದಲ್ಲೇ ಗುರುತಿಸಿಕೊಂಡಿದ್ದೇನೆ. ಮುಂದೆ ಕೂಡ ಬೇರೆ ಪಕ್ಷವನ್ನು ಸೇರುವುದಿಲ್ಲ. ಇಷ್ಟು ಬಿಟ್ಟು ಬೇರೇನೂ ಹೇಳಲು ಸಾಧ್ಯವಾಗುತ್ತಿಲ್ಲ! ಎಂದು ಬಾಬುಲ್ ಸುಪ್ರಿಯೋ ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿದ್ದರು. ಆದರೆ, ಈ ಭಾಗವನ್ನು ಈ ಡಿಲೀಟ್ ಮಾಡಿದ್ದಾರೆ.

‘ನನಗೆ ಮೋದಿಜೀ, ಅಮಿತ್​ ಶಾ, ನಡ್ಡಾ ಅವರು ನೀಡಿದ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ನಾನು ಈ ನಿರ್ಧಾರ ತೆಗೆದುಕೊಂಡಿರುವುದಕ್ಕೆ ಅವರು ನನ್ನನ್ನ ಅಪಾರ್ಥ ಮಾಡಿಕೊಳ್ಳುವುದಿಲ್ಲ ಎಂದು ನಂಬಿದ್ದೇನೆ. ನಾನು ರಾಜೀನಾಮೆ ನೀಡುತ್ತೇನೆ ಎನ್ನುವ ಮೂಲಕ ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಡುತ್ತಿದ್ದೇನೆ ಎಂದು ಅವರು ತಪ್ಪು ತಿಳಿದುಕೊಳ್ಳಬಾರದು. ನನಗೆ ಆ ರೀತಿಯ ಯಾವ ಆಸೆಯೂ ಈಗ ಇಲ್ಲ. 1992ರಲ್ಲಿ ಇದೇ  ರೀತಿ ನಾನು ನನ್ನ ಉದ್ಯೋಗಕ್ಕೆ ರಾಜೀನಾಮೆ ನೀಡಿ ಮುಂಬೈಗೆ ಹಾರಿದ್ದೆ. ಈಗ ಮತ್ತೆ ಅದೇ ಕೆಲಸ ಮಾಡಲು ನಿರ್ಧರಿಸಿದ್ದೇನೆ. ನನಗೆ ಬದಲಾವಣೆ ಬೇಕಾಗಿದೆ. ಹೇಳಬೇಕಾದ ಕೆಲವು ಮಾತುಗಳು ನನ್ನಲ್ಲೇ ಉಳಿದಿವೆ. ಆ ಮಾತುಗಳನ್ನು ಹೇಳಲು ಇನ್ನೆಂದೂ ಸಮಯ ಬರುವುದಿಲ್ಲ ಎನಿಸುತ್ತಿದೆ. ಆ ಮಾತುಗಳು ನನ್ನಲ್ಲೇ ಉಳಿದುಹೋಗಲಿ. ನಾನು ಹೋಗುತ್ತಿದ್ದೇನೆ, ಗುಡ್ ಬೈ’ ಎಂದು ಬಾಬುಲ್ ಸುಪ್ರಿಯೋ ಸುದೀರ್ಘವಾದ ಪೋಸ್ಟ್ ಮಾಡಿದ್ದಾರೆ.

ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಬಾಬುಲ್ ಸುಪ್ರಿಯೋ ನಾನು ಟಿಎಂಸಿ, ಕಾಂಗ್ರೆಸ್, ಸಿಪಿಐಎಂ ಯಾವ ಪಕ್ಷಕ್ಕೂ ಸೇರುವುದಿಲ್ಲ ಎಂಬ ಹೇಳಿಕೆಯನ್ನು ಡಿಲೀಟ್ ಮಾಡಿರುವುದರಿಂದ ಬಾಬುಲ್ ಸುಪ್ರಿಯೋ ಬೇರೆ ಪಕ್ಷಕ್ಕೆ ಸೇರಬಹುದು ಎಂಬ ಚರ್ಚೆಗಳು ಶುರುವಾಗಿವೆ.

ಇದನ್ನೂ ಓದಿ: Babul Supriyo: ಕೇಂದ್ರ ಸಚಿವ ಸ್ಥಾನದಿಂದ ಕೆಳಗಿಳಿದ ಬೆನ್ನಲ್ಲೇ ರಾಜಕೀಯಕ್ಕೆ ಗುಡ್​ ಬೈ ಎಂದ ಬಿಜೆಪಿ ಸಂಸದ ಬಾಬುಲ್ ಸುಪ್ರಿಯೋ

Shocking News: 1 ಕೋಟಿ ರೂ. ಕೊಡದಿದ್ದರೆ ನಿಮ್ಮ ಮಕ್ಕಳನ್ನು ಕೊಲ್ಲುತ್ತೇನೆ; 11 ವರ್ಷದ ಮಗಳಿಂದಲೇ ಅಪ್ಪನಿಗೆ ಬ್ಲಾಕ್​ಮೇಲ್!

(BJP MP Babul Supriyo may Joining Another Party as he Edits Facebook Post Removes ‘Loyalty to BJP’)

Published On - 8:24 pm, Sat, 31 July 21

ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ