AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದಾನಂದ ಗೌಡ ಚುನಾವಣಾ ರಾಜಕೀಯದಿಂದ ನಿವೃತ್ತಿ; ಹಾಸನದಲ್ಲಿ ಘೋಷಣೆ

DV Sadananda Gowda Retirement From Electoral Politics: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಡಿವಿ ಸದಾನಂದ ಗೌಡರಿಗೆ ಬಿಜೆಪಿ ಅವರಿಗೆ ಟಿಕೆಟ್ ನೀಡುವುದಿಲ್ಲ ಎಂದು ಇತ್ತೀಚೆಗೆ ವದಂತಿಗಳು ಹಬ್ಬಿದ್ದವು. ಆ ವಿಚಾರವಾಗಿ ಅಸಮಾಧಾನಗೊಂಡಿದ್ದ ಅವರು, ಪಕ್ಷದ ವರಿಷ್ಠರು ನಿಲುವು ತಿಳಿಸಬೇಕು ಎಂದು ಆಗ್ರಹಿಸಿದ್ದರು. ಇದೀಗ ಹಾಸನದಲ್ಲಿ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರುವುದಾಗಿ ತಿಳಿಸಿದ್ದಾರೆ.

ಸದಾನಂದ ಗೌಡ ಚುನಾವಣಾ ರಾಜಕೀಯದಿಂದ ನಿವೃತ್ತಿ; ಹಾಸನದಲ್ಲಿ ಘೋಷಣೆ
ಸದಾನಂದ ಗೌಡ
TV9 Web
| Edited By: |

Updated on:Nov 08, 2023 | 5:59 PM

Share

ಬೆಂಗಳೂರು, ನವೆಂಬರ್ 8: ಬಿಜೆಪಿಯ (BJP) ಹಿರಿಯ ನಾಯಕ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ (DV Sadananda Gowda) ಅವರು ಚುನಾವಣಾ ರಾಜಕೀಯಕ್ಕೆ ಬುಧವಾರ ನಿವೃತ್ತಿ ಘೋಷಿಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡ, ಪಕ್ಷದಿಂದ ಗರಿಷ್ಠ ಲಾಭ ಪಡೆದಿದ್ದೇನೆ, ಹೆಚ್ಚಿನದಕ್ಕೆ ಆಸೆ ಪಡುವುದಿಲ್ಲ ಎಂದು ಹೇಳಿದ್ದಾರೆ. ಪ್ರಸ್ತುತ ಅವರು ಲೋಕಸಭೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರವನ್ನು (Bengaluru North Lok Sabha Constituency) ಪ್ರತಿನಿಧಿಸುತ್ತಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅವರಿಗೆ ಟಿಕೆಟ್ ನೀಡುವುದಿಲ್ಲ ಎಂದು ಇತ್ತೀಚೆಗೆ ವದಂತಿಗಳು ಹಬ್ಬಿದ್ದವು. ಆ ವಿಚಾರವಾಗಿ ಅಸಮಾಧಾನಗೊಂಡಿದ್ದ ಅವರು, ಪಕ್ಷದ ವರಿಷ್ಠರು ತಮ್ಮ ನಿಲುವು ತಿಳಿಸಬೇಕು ಎಂದು ಆಗ್ರಹಿಸಿದ್ದರು.

‘ಚುನಾವಣಾ ರಾಜಕೀಯದಲ್ಲಿ ಮುಂದುವರಿಯದಿರಲು ನಿರ್ಧರಿಸಿದ್ದೇನೆ. ನನ್ನ 30 ವರ್ಷಗಳ ರಾಜಕೀಯ ಜೀವನದಲ್ಲಿ ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ನಾನು 10 ವರ್ಷಗಳ ಕಾಲ ಶಾಸಕನಾಗಿ, 20 ವರ್ಷ ಸಂಸದನಾಗಿ, ಒಂದು ವರ್ಷ ಮುಖ್ಯಮಂತ್ರಿಯಾಗಿ, 4 ವರ್ಷ ಪಕ್ಷದ ರಾಜ್ಯ ಘಟಕದ ಅಧ್ಯಕ್ಷನಾಗಿ ಮತ್ತು ನರೇಂದ್ರ ಮೋದಿ ಸರ್ಕಾರದಲ್ಲಿ ಏಳು ವರ್ಷ ಸಂಪುಟ ಸಚಿವನಾಗಿ ಸೇವೆ ಸಲ್ಲಿಸಿದ್ದೇನೆ. ನಾನು ಹೆಚ್ಚು ಆಸೆಪಟ್ಟರೆ, ಜನ ನನ್ನನ್ನು ಸ್ವಾರ್ಥಿ ಎಂದು ಕರೆಯುತ್ತಾರೆ’ ಎಂದು ಗೌಡರು ಹೇಳಿದರು.

2021ರಲ್ಲಿ ಕೇಂದ್ರ ಸಚಿವರ ಪುನಾರಚನೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಆದೇಶದ ಮೇರೆಗೆ ಅವರು ಕೇಂದ್ರ ಸಚಿವ ಸ್ಥಾನ ತ್ಯಜಿಸಿದ್ದರು.

ಹಾಸನದಲ್ಲಿ ಬೆಳೆ ನಷ್ಟ ಸಮೀಕ್ಷೆ ಬಳಿಕ ಘೋಷಣೆ

ಹಾಸನ ಜಿಲ್ಲೆಯಲ್ಲಿ ಬೆಳೆ ನಷ್ಟ ಸಮೀಕ್ಷೆ ನಡೆಸಿದ ಬಳಿಕ ಸದಾನಂದ ಗೌಡ, ಈ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಬಿಜೆಪಿಯ ವಿವಿಧ ತಂಡಗಳು ಸಮೀಕ್ಷೆ ನಡೆಸುತ್ತಿವೆ. ವರದಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಲ್ಲಿಸಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ.

ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ಮಾತನಾಡಿದ ಗೌಡರು, ಕೇಂದ್ರ ನಾಯಕರು ನಿರ್ಧಾರ ಕೈಗೊಂಡಿದ್ದಾರೆ ಎಂದರು.

ಜೆಡಿಎಸ್​​ ಜತೆಗಿನ ಮೈತ್ರಿ ಎನ್​ಡಿಎ ನಿರ್ಧಾರ: ಸದಾನಂದ ಗೌಡ

ಎನ್‌ಡಿಎ ವಿಚಾರಕ್ಕೆ ಬಂದರೆ ನಮ್ಮ ಕೇಂದ್ರ ನಾಯಕರು ನಿರ್ಧಾರ ಕೈಗೊಂಡಿದ್ದಾರೆ. ಆದರೆ, ನಮ್ಮ ಕಾರ್ಯಕರ್ತರು ಇಷ್ಟು ವರ್ಷ ಹೋರಾಡಿದ ಪಕ್ಷದೊಂದಿಗೆ ಏಕಾಏಕಿ ಚುನಾವಣೆಗೆ ಸ್ಪರ್ಧಿಸುವುದು ಕಷ್ಟವಾಗುವುದರಿಂದ ರಾಜ್ಯದಲ್ಲಿ ಇದನ್ನು ಜಾರಿಗೆ ತರಲು ಸೂಕ್ತ ಮಾರ್ಗಸೂಚಿಗಳನ್ನು ನೀಡುವಂತೆ ನಾವು ಅವರಿಗೆ ಮನವಿ ಮಾಡಿದ್ದೇವೆ ಎಂದು ಗೌಡ ಹೇಳಿದರು.

ಇದನ್ನೂ ಓದಿ: ತಮಿಳುನಾಡು ಸರ್ಕಾರದಿಂದ ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ: ಸದಾನಂದಗೌಡ ನೇತೃತ್ವದ ಸಮಿತಿ ರಚನೆ

ರಾಜ್ಯ ನಾಯಕರು ಮತ್ತು ವಿರೋಧ ಪಕ್ಷದ ನಾಯಕರ ನೇಮಕ ವಿಳಂಬವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಗೌಡರು, ಇದು ತಮಗೆ ಮುಜುಗರ ಉಂಟು ಮಾಡಿದೆ ಎಂದು ಒಪ್ಪಿಕೊಂಡರು.

ವಿಳಂಬವಿದೆ ಮತ್ತು ನಾವು ಅದನ್ನು ಒಪ್ಪಿಕೊಳ್ಳುತ್ತೇವೆ. ಅದು ಮುಜುಗರವನ್ನು ಉಂಟುಮಾಡಿದೆ. ನಮ್ಮ ನಾಯಕರು ಈ ವಿಷಯದ ಬಗ್ಗೆ ವೈಯಕ್ತಿಕ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದಾರೆ ಮತ್ತು ಐದು ರಾಜ್ಯಗಳ ಚುನಾವಣೆಗಳು ಮುಗಿದ ನಂತರ ಘೋಷಣೆ ಮಾಡಬಹುದೆಂದು ನಾವು ನಿರೀಕ್ಷಿಸುತ್ತೇವೆ ಎಂದು ಅವರು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 5:35 pm, Wed, 8 November 23

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ