AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳ್ಳಿಗಳಲ್ಲಿ ಬೀದಿದೀಪ ಬದಲಿಸೋದು ಮೋದಿ ಸರ್ಕಾರ: ಬಿಜೆಪಿ ಪ್ರಚಾರ ಸಭೆಯಲ್ಲಿ ಪ್ರತಾಪ್ ಸಿಂಹ

ಜಲ ಜೀವನ್ ಮಿಷನ್ ಮೂಲಕ ಮನೆಗಳಿಗೆ ನೀರು ಕೊಡುತ್ತಿರುವುದು ಮೋದಿ ಸರ್ಕಾರ ಎಂದು ಸಂಸದ ಪ್ರತಾಪ ಸಿಂಹ ಹೇಳಿದರು

ಹಳ್ಳಿಗಳಲ್ಲಿ ಬೀದಿದೀಪ ಬದಲಿಸೋದು ಮೋದಿ ಸರ್ಕಾರ: ಬಿಜೆಪಿ ಪ್ರಚಾರ ಸಭೆಯಲ್ಲಿ ಪ್ರತಾಪ್ ಸಿಂಹ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 05, 2021 | 6:46 PM

ಮೈಸೂರು: ಗ್ರಾಮ ಪಂಚಾಯಿತಿಗಳು ನಡೆಯತ್ತಿರುವುದು ಮೋದಿ ಸರ್ಕಾರದಿಂದ. ಕರ್ನಾಟಕದಲ್ಲಿ ನಮ್ಮದೇ ಪಕ್ಷದ ಸರ್ಕಾರ ಅಧಿಕಾರದಲ್ಲಿದ್ದರೂ ನಾನು ಇದನ್ನು ಹೇಳುತ್ತಿದ್ದೇನೆ. ಹಳ್ಳಿಗಳಲ್ಲಿ ಬೀದಿದೀಪ ಹಾಳಾದರೆ ಬಲ್ಬ್ ಹಾಕುವುದು ನರೇಂದ್ರ ಮೋದಿ ಸರ್ಕಾರ. ಜಲ ಜೀವನ್ ಮಿಷನ್ ಮೂಲಕ ಮನೆಗಳಿಗೆ ನೀರು ಕೊಡುತ್ತಿರುವುದು ಮೋದಿ ಸರ್ಕಾರ ಎಂದು ಸಂಸದ ಪ್ರತಾಪ ಸಿಂಹ ಹೇಳಿದರು. ಮೈಸೂರು-ಚಾಮರಾಜನಗರ ವಿಧಾನ ಪರಿಷತ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ರಘು ಕೌಟಿಲ್ಯ ಪರ ಅವರು ಮತಯಾಚಿಸಿದರು. ನಗರದ ರಾಜೇಂದ್ರ ಕಲಾಮಂದಿರದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿಗಳ ಅಭ್ಯುದಯಕ್ಕೆ ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡಿರುವ ಕ್ರಮಗಳನ್ನು ವಿವರಿಸಿದರು.

ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್ ಸಿಂಹ, ಶಾಸಕ ಎನ್.ಮಹೇಶ್, ಮಾಜಿ ಸಚಿವ ಸಿ.ಎಚ್.ವಿಜಯಶಂಕರ್, ಬಿಜೆಪಿ ಗ್ರಾಮಾಂತರ ಅಧ್ಯಕ್ಷೆ ಮಂಗಳಾ ಸೋಮಶೇಖರ್, ನಗರಾಧ್ಯಕ್ಷ ಶ್ರೀವತ್ಸ, ಮೇಯರ್ ಸುನಂದಾ ಫಾಲನೇತ್ರ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಸಮಾವೇಶದಲ್ಲಿ ಭಾಗಿಯಾಗಿದ್ದರು.

ಚಾಮರಾಜನಗರದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮೋದಿ ಅವರು ಪ್ರಧಾನಿ ಆದ ಮೇಲೆ ಕಾಂಗ್ರೆಸ್ ದೇಶದಲ್ಲಿ ದೂಳಿಪಟವಾಗಿದೆ. ದೇಶದ 26 ರಾಜ್ಯಗಳಲ್ಲಿ ಬಿಜೆಪಿ ಸರ್ಕಾರವಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಇನ್ನೂ ಸ್ವಲ್ಪಮಟ್ಟಿಗೆ ಉಸಿರಾಡುತ್ತಿದೆ. ವಿಧಾನಪರಿಷತ್​ ಚುನಾವಣೆ ನಂತರ ಈ ಪರಿಸ್ಥಿತಿ ಬದಲಾಗುತ್ತದೆ. ಕರ್ನಾಟಕದಲ್ಲಿ ನಾವು 15ರಿಂದ 16 ಸ್ಥಾನಗಳನ್ನು ಗೆಲ್ಲುವುದು ನೂರಕ್ಕೆ ನೂರು ಖಚಿತ. ಸಿದ್ದರಾಮಯ್ಯ ಅಥವಾ ಡಿ.ಕೆ.ಶಿವಕುಮಾರ್ ಅವರ ಆರೋಪಗಳಿಗೆ ನಾನು ಉತ್ತರ ಕೊಡಲು ಹೋಗುವುದಿಲ್ಲ. ಅವರಿಗೆ ಉತ್ತರ ಕೊಡಬೇಕಾಗಿರುವುದು ಮತದಾರರಾದ ನೀವು ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮೂರ್ನಾಲ್ಕು ಸಲ ಹಿಂದೆಮುಂದೆ ನೋಡುವ ಕಾಲದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟವನು ನಾನು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಮ್ಮದೇ ಬಹುಮತದ ಸರ್ಕಾರ ಬರುತ್ತದೆ. ನಮಗೆ ಗ್ರಾಮಮಟ್ಟದಲ್ಲಿ ಸಂಘಟನೆ ಬಲಪಡಿಸಬೇಕಿದೆ. ಪ್ರತಿ ಗ್ರಾಮದಲ್ಲಿ ಯುವಕರ ಸಮೂಹ ಕೆಲಸ ಮಾಡಬೇಕು. ನರೇಂದ್ರ ಮೋದಿ ಅವರನ್ನು ಪ್ರಪಂಚವೇ ನೋಡ್ತಿದೆ. ಅವರ ಹೆಸರಿಗೆ ಕಳಂಕ ತರುವಂತೆ ನಾವು ಮಾಡಬಾರದು ಎಂದರು.

ಇದನ್ನೂ ಓದಿ: ನೂರಕ್ಕೆ ನೂರು ಜೆಡಿಎಸ್ ಪಕ್ಷ ಸಹಕಾರ ನೀಡುತ್ತೆ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ ಇದನ್ನೂ ಓದಿ: ಕಾಂಗ್ರೆಸ್ ಸಾಗರದಷ್ಟು ಬೆಳೆದಿದ್ದರೂ ಯಾರಿಗೂ ಉಪಯೋಗವಿಲ್ಲ: ಬಿಎಸ್ ಯಡಿಯೂರಪ್ಪ

ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ