ಬಿಜೆಪಿ ಸರ್ಕಾರ ಇರುವುದರಿಂದ ಎತ್ತುಗಳು ಉಳಿದಿವೆ: ಕಾಂಗ್ರೆಸ್ ಪ್ರತಿಭಟನೆಗೆ ನಳಿನ್ ಕುಮಾರ್ ಕಟೀಲ್ ತಿರುಗೇಟು

Nalin Kumar Kateel: ಬಿಜೆಪಿ ಸರ್ಕಾರ ಇರುವುದರಿಂದ ಎತ್ತುಗಳು ಉಳಿದಿವೆ. ಇಲ್ಲದಿದ್ದರೆ ಎತ್ತುಗಳೆಲ್ಲಾ ಕಸಾಯಿಖಾನೆಗೆ ಹೋಗ್ತಿದ್ದವು ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಕಾಂಗ್ರೆಸ್ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿ ಸರ್ಕಾರ ಇರುವುದರಿಂದ ಎತ್ತುಗಳು ಉಳಿದಿವೆ: ಕಾಂಗ್ರೆಸ್ ಪ್ರತಿಭಟನೆಗೆ ನಳಿನ್ ಕುಮಾರ್ ಕಟೀಲ್ ತಿರುಗೇಟು
ನಳಿನ್ ಕುಮಾರ್ ಕಟೀಲ್ (ಸಂಗ್ರಹ ಚಿತ್ರ)

ಬೆಂಗಳೂರು: ಕಾಂಗ್ರೆಸ್ ನಾಯಕರಿಂದ ಎತ್ತಿನಗಾಡಿ ಚಲೋ ಪ್ರತಿಭಟನೆ ನಡೆಸಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ. ಬಿಜೆಪಿ ಸರ್ಕಾರ ಇರುವುದರಿಂದ ಎತ್ತುಗಳು ಉಳಿದಿವೆ. ಇಲ್ಲದಿದ್ದರೆ ಎತ್ತುಗಳೆಲ್ಲಾ ಕಸಾಯಿಖಾನೆಗೆ ಹೋಗ್ತಿದ್ದವು ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಕಾಂಗ್ರೆಸ್ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ನಂಜನಗೂಡಿನಲ್ಲಿ ಏಕಾಏಕಿ ದೇವಾಲಯ ತೆರವು ವಿಚಾರವಾಗಿಯೂ ಅವರು ಮಾತನಾಡಿದ್ದಾರೆ. ವ್ಯವಸ್ಥೆಗೆ ಸುಪ್ರೀಂ ಕೋರ್ಟ್ ಆದೇಶ ಪಾಲಿಸುವ ಜವಾಬ್ದಾರಿ ಇದೆ. ಆದರೆ ಧಾರ್ಮಿಕ ಕ್ಷೇತ್ರಗಳನ್ನು ಉಳಿಸಬೇಕಾದ ಅಗತ್ಯವಿದೆ. ಹೀಗಾಗಿ ಸರ್ಕಾರದ ಜತೆ ಚರ್ಚಿಸಿ ತೀರ್ಮಾನ ಮಾಡ್ತೇವೆ ಎಂದು ಹೇಳಿದ್ದಾರೆ.

ಪಕ್ಷ ಸಂಘಟನೆಗಾಗಿ ಮುಂದಿನ ತಿಂಗಳು ರಾಜ್ಯ ಪ್ರವಾಸ ಮಾಡುವ ಕುರಿತು ನಳಿನ್ ಕುಮಾರ್ ಮಾಹಿತಿ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜತೆ ಚರ್ಚಿಸಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ನಂಜನಗೂಡಿನಲ್ಲಿ ಏಕಾಏಕಿ ದೇವಾಲಯ ತೆರವು ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿಕೆ ನೀಡಿದ್ದಾರೆ. ಈ ವಿಷಯ ಕೇಳಿ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಜತೆ ಚರ್ಚಿಸುತ್ತೇನೆ. ಸುಪ್ರೀಂಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕು. ಆದರೆ ಜನರ ಭಾವನೆಗೆ ಧಕ್ಕೆಯಾಗದಂತೆ ನಡೆದುಕೊಳ್ಳಬೇಕು. ಜನರ ಭಾವನೆಗೆ ಧಕ್ಕೆಯಾಗದಂತೆ ಆದೇಶ ಪಾಲಿಸಲು ಸೂಚನೆ ನೀಡುತ್ತೇನೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಬೆಳಗಾವಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮರಾಠಿ ಜೈಕಾರ
ಬೆಳಗಾವಿಯಲ್ಲಿನ ಕಾರ್ಯಕ್ರಮದ ವೇಳೆ ನಳೀನ್ ಕುಮಾರ್ ಕಟೀಲ್​ಗೆ ಮರಾಠಿಯಲ್ಲಿ ಜೈಕಾರ ಹಾಕಲಾಗಿದೆ. ಬೆಳಗಾವಿ ಕಾರ್ಪೋರೇಟರ್​ಗಳಿಂದ ಮರಾಠಿಯಲ್ಲೇ ಜೈಕಾರ ಕೂಗು ಕೇಳಿಬಂದಿದೆ. ಬಿಜೆಪಿ ಕೇಂದ್ರ ಕಚೇರಿಯಲ್ಲೇ ಮರಾಠಿ ಝೇಂಕಾರ ಕೇಳಿಬಂದಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿ ಅಲೆ ಇದೆ ಎನ್ನುವುದು ಮತ್ತೆ ಖಚಿತವಾಗಿದೆ; ಕಾಂಗ್ರೆಸ್​ ಒಳಜಗಳ ಬಯಲಾಗಿದೆ: ನಳಿನ್ ಕುಮಾರ್ ಕಟೀಲ್

ಇದನ್ನೂ ಓದಿ: ವಾಜಪೇಯಿಯವರೂ ಎತ್ತಿನಗಾಡಿಯಲ್ಲಿ ಸಂಸತ್​ಗೆ ಬಂದಿದ್ದರು, ಶೋಭಾ ಕರಂದ್ಲಾಜೆ ಈಗೆಲ್ಲಿದ್ದಾರೆ? ಸಿದ್ದರಾಮಯ್ಯ ಸವಾಲ್

ಇದನ್ನೂ ಓದಿ: ವಿಧಾನಸೌಧ ಎದುರು ಎತ್ತಿನ ಗಾಡಿಯಿಂದ ಕೆಳಗೆ ಬಿದ್ದ ಕಾಂಗ್ರೆಸ್​ ಶಾಸಕರು! ಏನಾಯ್ತು ಅಲ್ಲಿ?

Click on your DTH Provider to Add TV9 Kannada