ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಹೈದರಾಬಾದ್​​ಗೆ ಬಂದಿಳಿದ ಪ್ರಧಾನಿ ಮೋದಿ

BJP National Executive Meeting ಹೈದರಾಬಾದ್​​ಗೆ ವಿಮಾನದಲ್ಲಿ ಬಂದಿಳಿದಿರುವ ಫೋಟೊ ಟ್ವೀಟ್  ಮಾಡಿರುವ ಪ್ರಧಾನಿ ಮೋದಿ ಬಿಜೆಪಿ  ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಡೈನಾಮಿಕ್ ಸಿಟಿ ಹೈದರಾಬಾದ್‌ಗೆ ಬಂದಿಳಿದಿದ್ದೇನೆ ಎಂದಿದ್ದಾರೆ.

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಹೈದರಾಬಾದ್​​ಗೆ ಬಂದಿಳಿದ ಪ್ರಧಾನಿ ಮೋದಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jul 02, 2022 | 4:35 PM

ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ (BJP national executive Meeting) ಇಂದು ಹೈದರಾಬಾದ್‌ನಲ್ಲಿ(Hyderabad) ಆರಂಭವಾಗಲಿದೆ. ಕಾರ್ಯಕಾರಿಣಿ ಸಭೆಯಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ಹೈದರಾಬಾದ್‌ಗೆ ಆಗಮಿಸಿದ್ದಾರೆ. ಹೈದರಾಬಾದ್​​ಗೆ  ವಿಮಾನದಲ್ಲಿ ಬಂದಿಳಿದಿರುವ ಫೋಟೊ ಟ್ವೀಟ್  ಮಾಡಿರುವ ಪ್ರಧಾನಿ ಮೋದಿ ಬಿಜೆಪಿ  ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಡೈನಾಮಿಕ್ ಸಿಟಿ ಹೈದರಾಬಾದ್‌ಗೆ ಬಂದಿಳಿದಿದ್ದೇನೆ. ಈ ಸಭೆಯಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ನಾವು ವ್ಯಾಪಕ ಶ್ರೇಣಿಯ ವಿಷಯಗಳನ್ನು ಚರ್ಚಿಸುತ್ತೇವೆ ಎಂದಿದ್ದಾರೆ.ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, 19 ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಇತರ ಬಿಜೆಪಿ ಹಿರಿಯ ನಾಯಕರು ಹೈದರಾಬಾದ್ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಪ್ರಧಾನಿ ಮೋದಿ ಭಾನುವಾರ ರಾಷ್ಟ್ರೀಯ ಕಾರ್ಯಕಾರಿಣಿಯನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ.

ಕೊವಿಡ್-19 ಸಾಂಕ್ರಾಮಿಕ ರೋಗದ ನಂತರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರ ಸಂಪೂರ್ಣ ಭಾಗವಹಿಸುವಿಕೆಯೊಂದಿಗೆ ಸಭೆ ನಡೆಯುತ್ತಿರುವುದು ಇದೇ ಮೊದಲು.

ನವೆಂಬರ್ 2021 ರಲ್ಲಿ ನಡೆದ ಕೊನೆಯ ಸಭೆಯು ಹೈಬ್ರಿಡ್ ರೀತಿಯಲ್ಲಿ ನಡೆಯಿತು. ಇದರಲ್ಲಿ ನಾಯಕರು ನೇರವಾಗಿ ಮತ್ತು ವರ್ಚುವಲ್ ಆಗಿ ಭಾಗವಹಿಸಿದ್ದರು.

ಪಕ್ಷದ ಸಭೆಗೆ  ಮುನ್ನ ಇಡೀ ಹೈದರಾಬಾದ್ ನಗರವು ಬಿಜೆಪಿ ಧ್ವಜಗಳು ಮತ್ತು ಬ್ಯಾನರ್‌ಗಳೊಂದಿಗೆ ಕೇಸರಿಮಯವಾಗಿದ್ದು ಕೇಂದ್ರ ಸರ್ಕಾರದ ಸಾಧನೆಯನ್ನು ಬಿಂಬಿಸುವ ಪೋಸ್ಟರ್​​ಗಳು ರಾರಾಜಿಸಿವೆ.

Published On - 3:54 pm, Sat, 2 July 22