2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಸಜ್ಜು: ನಡ್ಡಾ ನೇತೃತ್ವದ ಸಭೆಯಲ್ಲಿ ಕಾರ್ಯತಂತ್ರಗಳ ಬಗ್ಗೆ ಮಹತ್ವದ ಚರ್ಚೆ!

2024ರ ಲೋಕಸಭಾ ಚುನಾವಣೆಗೆ ಆಗಲೇ ರಾಜಕೀಯ ಗರಿಗೆದರಿದ್ದು, ಕಾಂಗ್ರೆಸ್ ಜೊಡೋ ಯಾತ್ರೆ ಆರಂಭಿಸಿದ್ರೆ, ಇತ್ತ ಬಿಜೆಪಿ ಸಹ ಮಾರ್ಗಸೂಚಿ ರೂಪಿಸಲು ಬಿಜೆಪಿ ಮುಂದಡಿ ಇಟ್ಟಿದೆ.

2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಸಜ್ಜು:  ನಡ್ಡಾ ನೇತೃತ್ವದ ಸಭೆಯಲ್ಲಿ ಕಾರ್ಯತಂತ್ರಗಳ ಬಗ್ಗೆ ಮಹತ್ವದ ಚರ್ಚೆ!
JP National President JP Nadda
TV9kannada Web Team

| Edited By: Ramesh B Jawalagera

Sep 27, 2022 | 5:43 PM

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್​ ಪಾಳಯದಲ್ಲಿ ಬಿರುಸಿನ ಚಟುವಟಿಕೆಗಳು ಆರಂಭವಾಗಿದ್ದು,. ಶತಾಯಗತಾಯವಾಗಿ ಮುಂದಿನ ಚುನಾವಣೆಯಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರಲು ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ಆರಂಭವಾಗಿದೆ.

ಇತ್ತ ಬಿಜೆಪಿ ಸಹ 2024ರ ಸಾರ್ವತ್ರಿಕ ಚುನಾವಣೆಗೆ ಮಾರ್ಗಸೂಚಿ ರೂಪಿಸಲು ಮುಂದಡಿ ಇಟ್ಟಿದೆ. ಈ ಕುರಿತು ಚರ್ಚಿಸಲು ಇಂದು (ಸೆ.06 ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಅಧ್ಯಕ್ಷ ಜೆಪಿ ನಡ್ಡಾ ಉನ್ನತ ಮಟ್ಟದ ಸಭೆ ನಡೆಸಿದರು.  ವಿವಿಧ ರಾಜ್ಯಗಳ ಉಸ್ತುವಾರಿಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳ ಜೊತೆ ಮುಂದಿನ ಚುನಾವಣೆ ಸಂಬಂಧ ಕೈಗೊಳ್ಳಬೇಕಾದ ಕಾರ್ಯ ತಂತ್ರಗಳ ಬಗ್ಗೆ ಚರ್ಚೆ ಮಾಡಿದರು ಎಂದು ತಿಳಿದಿಬಂದಿದೆ.

ಇದನ್ನೂ ಓದಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬದಲಾಗ್ತಾರಾ? ಇಲ್ಲ 2024ರ ಲೋಕಸಭೆ ಚುನಾವಣೆ ತನಕ ಇರ್ತಾರಾ?

2024ರ ಸಾರ್ವತ್ರಿಕ ಚುನಾವಣೆಗೆ ತಳಮಟ್ಟದಿಂದಲೇ ಪಕ್ಷವನ್ನು ಸಂಘಟಿಸುವ ಹಾಗೂ ಈ ಬಾರಿ ಇನ್ನಷ್ಟು ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ರಣತಂತ್ರದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎನ್ನಲಾಗಿದೆ. ಅಲ್ಲದೇ 2019 ರ ಚುನಾವಣೆಯಲ್ಲಿ 144 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಕಡಿಮೆ ಅಂತರದಿಂದ ಪರಾಭವಗೊಂಡಿದ್ದು, ಆ ಕ್ಷೇತ್ರಗಳ ಮೇಲೆ ಹೆಚ್ಚಿನ ಕಣ್ಣಿಡುವಂತೆ ನಡ್ಡಾ ಸೂಚಿಸಿದ್ದಾರೆ.

ಈ ವರ್ಷ ವಿವಿಧ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈಗಿನಿಂದಲೇ ಆಯಾ ಕ್ಷೇತ್ರಗಳಿಗೆ ಭೇಟಿ ನೀಡಿ ಪಕ್ಷ ಸಂಘಟನೆಗೆ ಒತ್ತು ನೀಡುವಂತೆಯೂ ನಡ್ಡಾ ಸಲಹೆ ನೀಡಿದ್ದಾರೆ. ರಾಜ್ಯಗಳ ವಿಧಾಸಭೆ ಚುನಾವಣೆಗಳಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ ಮುಂದಿನ ಲೋಕಸಭಾ ಚುನಾವಣೆಗೆ ಸಹಾಯಕವಾಗಲಿದೆ ಎನ್ನುವುದು ಜೆಪಿ ನಡ್ಡಾ ಅವರ ಪ್ಲಾನ್. ಈ ಹಿನ್ನೆಲೆಯಲ್ಲಿ ಮೋದಿ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು. ಅಲ್ಲದೇ ತಳಮಟ್ಟದ ಕಾರ್ಯಕರ್ತರನ್ನು ಚುನಾವಣೆಗೆ ಈಗಿನಿಂದಲೇ ಸಜ್ಜುಗೊಳಿಸಬೇಕೆಂಬ ಸಲಹೆ- ಸೂಚನೆಗಳನ್ನ ಸಹ ನೀಡಿದ್ದಾರೆ.

2024ರ ವರೆಗೆ ಜೆಪಿ ನಡ್ಡಾ ಮುಂದುವರಿಕೆ ಈಗಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅಧಿಕಾರಾವಧಿಯು 20 ಜನವರಿ 2023ಕ್ಕೆ ಮುಕ್ತಾಯಗೊಳ್ಳುಲಿದೆ. ಆದರೂ ಅವರನ್ನು ಮುಂದಿನ 2024ರ ವರೆಗೆ ಮುಂದುವರಿಸಲು ಬಿಜೆಪಿ ತೀರ್ಮಾನಿಸಿದೆ. ಇದೇ ವರ್ಷ ಕೊನೆಯಲ್ಲಿ ಹಾಗೂ 2023ರಲ್ಲಿ ಹಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗಳು ಎದುರಾಗಲಿವೆ. ಈ ಅಸ್ಲೆಂಬಿ ಚುನಾವಣೆಗಳು ಮುಗಿಯುತ್ತಿದ್ದಂತೆಯೇ ಲೋಕಸಭೆ ಚುನಾವಣೆ ಸಹ ಬರಲಿದೆ. ಈ ಎಲ್ಲಾ ಕಾರಣಗಳಿಂದ ಜೆಪಿ ನಡ್ಡಾ ಅವರನ್ನು ಮುಂದುವರಿಸಲು ನಿರ್ಧರಿಸಲಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada