ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಾಳಯದಲ್ಲಿ ಬಿರುಸಿನ ಚಟುವಟಿಕೆಗಳು ಆರಂಭವಾಗಿದ್ದು,. ಶತಾಯಗತಾಯವಾಗಿ ಮುಂದಿನ ಚುನಾವಣೆಯಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರಲು ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ಆರಂಭವಾಗಿದೆ.
ಇತ್ತ ಬಿಜೆಪಿ ಸಹ 2024ರ ಸಾರ್ವತ್ರಿಕ ಚುನಾವಣೆಗೆ ಮಾರ್ಗಸೂಚಿ ರೂಪಿಸಲು ಮುಂದಡಿ ಇಟ್ಟಿದೆ. ಈ ಕುರಿತು ಚರ್ಚಿಸಲು ಇಂದು (ಸೆ.06 ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಅಧ್ಯಕ್ಷ ಜೆಪಿ ನಡ್ಡಾ ಉನ್ನತ ಮಟ್ಟದ ಸಭೆ ನಡೆಸಿದರು. ವಿವಿಧ ರಾಜ್ಯಗಳ ಉಸ್ತುವಾರಿಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳ ಜೊತೆ ಮುಂದಿನ ಚುನಾವಣೆ ಸಂಬಂಧ ಕೈಗೊಳ್ಳಬೇಕಾದ ಕಾರ್ಯ ತಂತ್ರಗಳ ಬಗ್ಗೆ ಚರ್ಚೆ ಮಾಡಿದರು ಎಂದು ತಿಳಿದಿಬಂದಿದೆ.
ಇದನ್ನೂ ಓದಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬದಲಾಗ್ತಾರಾ? ಇಲ್ಲ 2024ರ ಲೋಕಸಭೆ ಚುನಾವಣೆ ತನಕ ಇರ್ತಾರಾ?
BJP National President JP Nadda holds a ‘Prabhari meeting’ In Delhi pic.twitter.com/2p6HoSbtHB
— ANI (@ANI) September 27, 2022
2024ರ ಸಾರ್ವತ್ರಿಕ ಚುನಾವಣೆಗೆ ತಳಮಟ್ಟದಿಂದಲೇ ಪಕ್ಷವನ್ನು ಸಂಘಟಿಸುವ ಹಾಗೂ ಈ ಬಾರಿ ಇನ್ನಷ್ಟು ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ರಣತಂತ್ರದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎನ್ನಲಾಗಿದೆ. ಅಲ್ಲದೇ 2019 ರ ಚುನಾವಣೆಯಲ್ಲಿ 144 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಕಡಿಮೆ ಅಂತರದಿಂದ ಪರಾಭವಗೊಂಡಿದ್ದು, ಆ ಕ್ಷೇತ್ರಗಳ ಮೇಲೆ ಹೆಚ್ಚಿನ ಕಣ್ಣಿಡುವಂತೆ ನಡ್ಡಾ ಸೂಚಿಸಿದ್ದಾರೆ.
ಈ ವರ್ಷ ವಿವಿಧ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈಗಿನಿಂದಲೇ ಆಯಾ ಕ್ಷೇತ್ರಗಳಿಗೆ ಭೇಟಿ ನೀಡಿ ಪಕ್ಷ ಸಂಘಟನೆಗೆ ಒತ್ತು ನೀಡುವಂತೆಯೂ ನಡ್ಡಾ ಸಲಹೆ ನೀಡಿದ್ದಾರೆ. ರಾಜ್ಯಗಳ ವಿಧಾಸಭೆ ಚುನಾವಣೆಗಳಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ ಮುಂದಿನ ಲೋಕಸಭಾ ಚುನಾವಣೆಗೆ ಸಹಾಯಕವಾಗಲಿದೆ ಎನ್ನುವುದು ಜೆಪಿ ನಡ್ಡಾ ಅವರ ಪ್ಲಾನ್. ಈ ಹಿನ್ನೆಲೆಯಲ್ಲಿ ಮೋದಿ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು. ಅಲ್ಲದೇ ತಳಮಟ್ಟದ ಕಾರ್ಯಕರ್ತರನ್ನು ಚುನಾವಣೆಗೆ ಈಗಿನಿಂದಲೇ ಸಜ್ಜುಗೊಳಿಸಬೇಕೆಂಬ ಸಲಹೆ- ಸೂಚನೆಗಳನ್ನ ಸಹ ನೀಡಿದ್ದಾರೆ.
Delhi | BJP National President JP Nadda holds Lok
Sabha pravas meet pic.twitter.com/JhxzvZNcHd— ANI (@ANI) September 27, 2022
2024ರ ವರೆಗೆ ಜೆಪಿ ನಡ್ಡಾ ಮುಂದುವರಿಕೆ
ಈಗಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅಧಿಕಾರಾವಧಿಯು 20 ಜನವರಿ 2023ಕ್ಕೆ ಮುಕ್ತಾಯಗೊಳ್ಳುಲಿದೆ. ಆದರೂ ಅವರನ್ನು ಮುಂದಿನ 2024ರ ವರೆಗೆ ಮುಂದುವರಿಸಲು ಬಿಜೆಪಿ ತೀರ್ಮಾನಿಸಿದೆ. ಇದೇ ವರ್ಷ ಕೊನೆಯಲ್ಲಿ ಹಾಗೂ 2023ರಲ್ಲಿ ಹಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗಳು ಎದುರಾಗಲಿವೆ. ಈ ಅಸ್ಲೆಂಬಿ ಚುನಾವಣೆಗಳು ಮುಗಿಯುತ್ತಿದ್ದಂತೆಯೇ ಲೋಕಸಭೆ ಚುನಾವಣೆ ಸಹ ಬರಲಿದೆ. ಈ ಎಲ್ಲಾ ಕಾರಣಗಳಿಂದ ಜೆಪಿ ನಡ್ಡಾ ಅವರನ್ನು ಮುಂದುವರಿಸಲು ನಿರ್ಧರಿಸಲಾಗಿದೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ