ಗಂಧದ ನಾಡನ್ನು ಗಾಂಜಾ ನಾಡಾಗಿ ಪರಿವರ್ತಿಸುತ್ತಿರುವುದೇ ಕಾಂಗ್ರೆಸ್ನ ಕರ್ನಾಟಕ ಮಾಡೆಲ್: ಬಿಜೆಪಿ ವ್ಯಂಗ್ಯ
ಗಂಧದ ನಾಡು ಈಗ ಗಾಂಜಾ ನಾಡಾಗುತ್ತಿದೆ. ರಾಜಧಾನಿ ಬೆಂಗಳೂರಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದರಿಂದ ನಿರ್ಭೀತಿಯಿಂದ ಗಾಂಜಾ, ಕೊಕೇನ್ ಸೇರಿದಂತೆ ಇನ್ನಿತರ ಮಾದಕ ವಸ್ತುಗಳ ಅಕ್ರಮ ಮಾರಾಟ ಮತ್ತು ರೇವ್ ಪಾರ್ಟಿಗಳು ಎಗ್ಗಿಲ್ಲದೆ ನಡೆಯುತ್ತಿವೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹರಿಹಾಯ್ದಿದೆ.
ಬೆಂಗಳೂರು, ಮೇ 25: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ (Law and Order) ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ (BJP), ಗಂಧದ ನಾಡನ್ನು ಗಾಂಜಾ ನಾಡಾಗಿ ಪರಿವರ್ತಿಸುತ್ತಿರುವುದೇ ಕಾಂಗ್ರೆಸ್ನ ಕರ್ನಾಟಕ ಮಾಡೆಲ್ (Congress Karnataka Model) ಎಂದು ವ್ಯಂಗ್ಯವಾಡಿದೆ. ಈ ವಿಚಾರವಾಗಿ ಮೈಕ್ರೋ ಬ್ಲಾಗಿಂಗ್ ಸೈಟ್ ಎಕ್ಸ್ನಲ್ಲಿ ಸರಣಿ ಸಂದೇಶ ಪ್ರಕಟಿಸಿರುವ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ನಮ್ಮ ಆಡಳಿತಾವಧಿಯಲ್ಲಿ ಗಂಧದ ನಾಡಾಗಿದ್ದ ಕರ್ನಾಟಕವನ್ನು ಈಗ ಕಾಂಗ್ರೆಸ್ ಗಾಂಜಾ ನಾಡಾಗಿ ಮಾಡುತ್ತಿದೆ ಎಂದು ಬಿಜೆಪಿ ಕಿಡಿ ಕಾರಿದೆ.
‘ಗ್ಯಾಂಗ್ ವಾರ್‌ಗಳು, ಯುವತಿಯರ ಮೇಲೆ ಅತ್ಯಾಚಾರ, ಹಲ್ಲೆ, ಹತ್ಯೆ, ಬಾಂಬ್ ಬ್ಲಾಸ್ಟ್‌ಗಳು, ಗಾಂಜಾ, ಅಫೀಮು, ರೇವ್ ಪಾರ್ಟಿಗಳು, ಪಾಕೈಸ್ತಾನ್ ಜಿಂದಾಬಾದ್ ಘೋಷಣೆಗಳು ಸೇರಿ ಇತ್ಯಾದಿಗಳು ಕರ್ನಾಟಕ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾಮನ್ ಆಗಿದೆ. ಉಗ್ರರು, ಮತಾಂಧರು, ಪುಂಡರು, ಕಿಡಿಗೇಡಿಗಳು ರೌಡಿಗಳಿಗೆ ಸಿದ್ದರಾಮಯ್ಯ ಸರ್ಕಾರ ಫ್ರೀ ಹ್ಯಾಂಡ್ ಕೊಟ್ಟು ಪೊಲೀಸರನ್ನು ಕೈಗೊಂಬೆ ಮಾಡಿಕೊಂಡಿರುವ ಪರಿಣಾಮವೇ ಇಂದು ಅರಾಜಕತೆ ಸೃಷ್ಟಿಯಾಗಿದೆ. ಇದು ದೇಶಕ್ಕೆ ಕಾಂಗ್ರೆಸ್ ತೋರಿಸುತ್ತಿರುವ ಕರ್ನಾಟಕ ಮಾಡೆಲ್!’ ಎಂದು ಬಿಜೆಪಿ ಟೀಕಿಸಿದೆ.
ಬಿಜೆಪಿ ಎಕ್ಸ್ ಸಂದೇಶ
ಗಂಧದ ನಾಡು ➡️ ಗಾಂಜಾ ನಾಡು
ರಾಜಧಾನಿ ಬೆಂಗಳೂರಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದರಿಂದ ನಿರ್ಭೀತಿಯಿಂದ ಗಾಂಜಾ, ಕೊಕೇನ್ ಸೇರಿದಂತೆ ಇನ್ನಿತರ ಮಾದಕ ವಸ್ತುಗಳ ಅಕ್ರಮ ಮಾರಾಟ ಮತ್ತು ರೇವ್ ಪಾರ್ಟಿಗಳು ಎಗ್ಗಿಲ್ಲದೆ ನಡೆಯುತ್ತಿವೆ. ಹೊರ ರಾಜ್ಯದ ವ್ಯಸನಿಯರು ಭಾಗವಹಿಸುತ್ತಿದ್ದಾರೆ.
ಗಂಧದ ನಾಡು ಎಂಬ ಪ್ರಖ್ಯಾತಿ… pic.twitter.com/hwc8gWVeSg
— BJP Karnataka (@BJP4Karnataka) May 25, 2024
‘ಗಂಧದ ನಾಡು ಈಗ ಗಾಂಜಾ ನಾಡಾಗುತ್ತಿದೆ. ರಾಜಧಾನಿ ಬೆಂಗಳೂರಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದರಿಂದ ನಿರ್ಭೀತಿಯಿಂದ ಗಾಂಜಾ, ಕೊಕೇನ್ ಸೇರಿದಂತೆ ಇನ್ನಿತರ ಮಾದಕ ವಸ್ತುಗಳ ಅಕ್ರಮ ಮಾರಾಟ ಮತ್ತು ರೇವ್ ಪಾರ್ಟಿಗಳು ಎಗ್ಗಿಲ್ಲದೆ ನಡೆಯುತ್ತಿವೆ. ಹೊರ ರಾಜ್ಯದ ವ್ಯಸನಿಯರು ಭಾಗವಹಿಸುತ್ತಿದ್ದಾರೆ. ಗಂಧದ ನಾಡು ಎಂಬ ಪ್ರಖ್ಯಾತಿ ಹೊಂದಿದ್ದ ಕರುನಾಡನ್ನು ಕಾಂಗ್ರೆಸ್ ಸರ್ಕಾರವೀಗ ಗಾಂಜಾ ನಾಡಾಗಿ ಪರಿವರ್ತಿಸುತ್ತಿರುವುದು ಖೇದಕರ. ಕೂಡಲೇ #SleepingSarkara ಎಚ್ಚೆತ್ತು ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಿದೆ’ ಎಂದು ಮತ್ತೊಂದು ಸಂದೇಶದಲ್ಲಿ ಬಿಜೆಪಿ ಆಗ್ರಹಿಸಿದೆ.
ಉಡುಪಿ ಗ್ಯಾಂಗ್ ವಾರ್: ಗೃಹ ಸಚಿವರ ವೈಫಲ್ಯಕ್ಕೆ ಕೈಗನ್ನಡಿ ಎಂದ ಸುನೀಲ್ ಕುಮಾರ್
ಉಡುಪಿ ಗ್ಯಾಂಗ್ ವಾರ್ ಗೃಹ ಸಚಿವರ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ ಎಂದು ಕಾರ್ಕಳದ ಬಿಜೆಪಿ ಶಾಸಕ ಸುನೀಲ್ ಕುಮಾರ್ ಟೀಕಿಸಿದ್ದಾರೆ. ಶಿಕ್ಷಣ ಕ್ಷೇತ್ರ ಮಣಿಪಾಲದಲ್ಲಿ ರಾಜಾರೋಶವಾಗಿ ರೌಡಿಗಳು ಗ್ಯಾಂಗ್ ವಾರ್ ನಡೆಸಿದ್ದಾರೆ. ಸಿನಿಮೀಯ ರೀತಿಯಲ್ಲಿ ಕಾರುಗಳನ್ನು ಬಳಸಿ ಕಾದಾಡಿದ್ದಾರೆ. ಕ್ರಿಮಿನಲ್ ಗಳಿಗೆ ಆಳುವ ಸರ್ಕಾರದ ಕಾನೂನಿನ ಭಯ ಇಲ್ಲದಂತಾಗಿದೆ ಎಂಬುದಕ್ಕೆ ಇದೊಂದು ಜ್ವಲಂತ ಉದಾಹರಣೆ ಎಂದು ಅವರು ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿದ್ದಾರೆ.
ಉಡುಪಿ, ದಕ್ಷಿಣ ಕನ್ನಡದಂಥ ಜಿಲ್ಲೆಗಳಲ್ಲಿ ಮಾತ್ರವಲ್ಲ ಇಡಿ ರಾಜ್ಯದಲ್ಲಿ ಈಗ ಕಾನೂನು- ಸುವ್ಯವಸ್ಥೆ ಕುಸಿದು ಬಿದ್ದಿದೆ. ಪೊಲೀಸ್ ಠಾಣೆಗಳನ್ನು ರಾಜಕೀಯ ದ್ವೇಷ ತೀರಿಸಿಕೊಳ್ಳುವ ಅಸ್ತ್ರವಾಗಿ ಬಳಸಿಕೊಳ್ಳುವುದಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದರ ಪರಿಣಾಮವಾಗಿ ಇಂದು ಕ್ರಿಮಿನಲ್ ಗಳು ವಿಜೃಂಭಿಸುವಂತಾಗಿದೆ. ಇದು ಗೃಹ ಇಲಾಖೆ ಹಾಗೂ ಗೃಹ ಸಚಿವರ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ. ಸಿದ್ದರಾಮಯ್ಯನವರೇ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿರುವ ನಿಮಗೆ ಸ್ವಾಗತ. ಆದರೆ ಇಲ್ಲಿಂದ ಹೊರಡುವುದಕ್ಕೆ ಮೊದಲು ಕೆಲ ಪ್ರಶ್ನೆಗಳಿಗೆ ಉತ್ತರಿಸಿ ಹೋಗಿ ಎಂದು ಅವರು ಕೆಲವು ಪ್ರಶ್ನೆಗಳನ್ನೂ ಕೇಳಿದ್ದಾರೆ.
ಸುನೀಲ್ ಕುಮಾರ್ ಎಕ್ಸ್ ಸಂದೇಶ
ಶಿಕ್ಷಣ ಕ್ಷೇತ್ರ ಮಣಿಪಾಲದಲ್ಲಿ ರಾಜಾರೋಶವಾಗಿ ರೌಡಿಗಳು ಗ್ಯಾಂಗ್ ವಾರ್ ನಡೆಸಿದ್ದಾರೆ. ಸಿನಿಮೀಯ ರೀತಿಯಲ್ಲಿ ಕಾರುಗಳನ್ನು ಬಳಸಿ ಕಾದಾಡಿದ್ದಾರೆ. ಕ್ರಿಮಿನಲ್ ಗಳಿಗೆ ಆಳುವ ಸರ್ಕಾರದ ಕಾನೂನಿನ ಭಯ ಇಲ್ಲದಂತಾಗಿದೆ ಎಂಬುದಕ್ಕೆ ಇದೊಂದು ಜ್ವಲಂತ ಉದಾಹರಣೆ. @CMofKarnataka (1/6)
— Sunil Kumar Karkala (Modi Ka Parivar) (@karkalasunil) May 25, 2024
ಕಾನೂನು-ಸುವ್ಯವಸ್ಥೆ ಕಾಪಾಡಲಾರದ ಗೃಹ ಸಚಿವರಿಂದ ಎಂದು ರಾಜೀನಾಮೆ ಪಡೆಯುತ್ತೀರಿ?- ಪೊಲೀಸ್ ಠಾಣೆಯನ್ನು ಆಳುವ ಸರ್ಕಾರದ ಆಳಾಗಿಸಿಕೊಂಡಿರುವುದಕ್ಕೆ ಎಂದು ಮುಕ್ತಾಯ ಹಾಡುತ್ತೀರಿ ? ಕ್ರಿಮಿನಲ್ ಗಳಿಗೂ ನಿಮ್ಮ ಸರ್ಕಾರಕ್ಕೂ ಒಳ ಒಪ್ಪಂದ ಏರ್ಪಟ್ಟಿದ್ದರೆ ಮಾಸಿಕ ಹಫ್ತಾ ಎಷ್ಟು ನಿಗದಿ ಮಾಡಿದ್ದೀರಿ? ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಪೊಲೀಸರ ಕೈ ಕಟ್ಟಿ ಹಾಕಿದ್ದೀರಾ ? ಜನರ ಶಾಂತಿ- ನೆಮ್ಮದಿ ಕಾಪಾಡಲಾರದ ಸರ್ಕಾರ ಅಧಿಕಾರದಲ್ಲಿದ್ದು ಪ್ರಯೋಜನವುಂಟೇ ?ಕ್ರಿಮಿನಲ್ ಗಳ ಅಟ್ಟಹಾಸ ನಿಲ್ಲಿಸದ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲು ಭಯವೇಕೆ ಎಂದು ಸುನೀಲ್ ಕುಮಾರ್ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಉಡುಪಿಯಲ್ಲಿ ಮೇ 18ರಂದು ನಡೆದ ಭಯಾನಕ ಗ್ಯಾಂಗ್ವಾರ್ ದೃಶ್ಯಗಳು ಲಭ್ಯ, ಸೆರೆ ಸಿಕ್ಕಿರುವ ಇಬ್ಬರು
ಸಿದ್ದರಾಮಯ್ಯನವರೇ ನಿಮಗೊಂದು ನೇರ ಸವಾಲು, ಈ ಘಟನೆಗೆ ಕಾರಣವಾದ ಗ್ಯಾಂಗ್ ಸ್ಟಾರ್ ಗಳನ್ನು ಎಷ್ಟು ಗಂಟೆಯೊಳಗೆ ಬಲಿ ಹಾಕುತ್ತೀರಿ ? ಸಣ್ಣ ಕಾರಣಕ್ಕೆ ಶಾಸಕರ ನ್ನು ಬಂಧಿಸಲು ದಂಡು ಕಳುಹಿಸುವ ನಿಮ್ಮ ಸರ್ಕಾರಕ್ಕೆ ಪುಂಡರನ್ನು ಬಂಧಿಸುವ ಗಂಡೆದೆ ಇಲ್ಲವೇ ಎಂದು ಸುನೀಲ್ ಕುಮಾರ್ ಕಿಡಿ ಕಾರಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ