ಬಿಜೆಪಿ ಸಂಸದೀಯ ಮಂಡಳಿ, ಚುನಾವಣಾ ಸಮಿತಿ ಪುನರ್ ರಚನೆ ‘ಮಿಷನ್ ದಕ್ಷಿಣ್’ ಪರಿಕಲ್ಪನೆ ಪ್ರತಿಫಲನ

ಕರ್ನಾಟಕದಿಂದ ಮಾಜಿ ಸಿಎಂ ಯಡಿಯೂರಪ್ಪ (BS Yediyurappa), ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರಿಗೆ ಸ್ಥಾನ ಲಭಿಸಿದ್ದು, ತಮಿಳುನಾಡಿನಿಂದ ಮಹಿಳಾ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷೆ ವಾನತಿ ಶ್ರೀನಿವಾಸ್...

ಬಿಜೆಪಿ ಸಂಸದೀಯ ಮಂಡಳಿ, ಚುನಾವಣಾ ಸಮಿತಿ ಪುನರ್ ರಚನೆ  ‘ಮಿಷನ್ ದಕ್ಷಿಣ್’ ಪರಿಕಲ್ಪನೆ ಪ್ರತಿಫಲನ
ಬಿಎಸ್ ಯಡಿಯೂರಪ್ಪ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Aug 17, 2022 | 7:43 PM

ಸಂಸದೀಯ ಮಂಡಳಿ ಪುನರ್ ರಚನೆಯಲ್ಲಿ ‘ಮಿಷನ್ ದಕ್ಷಿಣ್’ ಪರಿಕಲ್ಪನೆ ಎದ್ದು ಕಾಣುತ್ತಿದೆ. ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯಲ್ಲಿ ದಕ್ಷಿಣ ಭಾರತದ ಐವರಿಗೆ ಸ್ಥಾನ ನೀಡಲಾಗಿದೆ. ಕರ್ನಾಟಕದಿಂದ ಮಾಜಿ ಸಿಎಂ ಯಡಿಯೂರಪ್ಪ (BS Yediyurappa), ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರಿಗೆ ಸ್ಥಾನ ಲಭಿಸಿದ್ದು, ತಮಿಳುನಾಡಿನಿಂದ ಮಹಿಳಾ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷೆ ವಾನತಿ ಶ್ರೀನಿವಾಸ್, ತೆಲಂಗಾಣದಿಂದ ಒಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಕೆ.ಲಕ್ಷ್ಮಣ್, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ  ಚುನಾವಣಾ ಸಮಿತಿಯಲ್ಲಿ ಸ್ಥಾನ ಲಭಿಸಿದೆ. ಅದೇ ವೇಳೆ ಬಿಜೆಪಿ ಸಂಸದೀಯ ಮಂಡಳಿಯಲ್ಲಿ ದಕ್ಷಿಣ ಭಾರತದಿಂದ ಬಿ.ಎಸ್.ಯಡಿಯೂರಪ್ಪ, ಬಿ.ಎಲ್.ಸಂತೋಷ್, ಕೆ.ಲಕ್ಷ್ಮಣ್ ಅವರಿಗೆ ಸ್ಥಾನ ಲಭಿಸಿದೆ.

ಯಡಿಯೂರಪ್ಪಗೆ ಕರೆ ಮಾಡಿ ಶುಭಾಶಯ ತಿಳಿಸಿದ ರಾಜ್ಯಪಾಲ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಯಡಿಯೂರಪ್ಪಗೆ ಕರೆ ಮಾಡಿ ಶುಭಾಶಯ ತಿಳಿಸಿದ್ದಾರೆ. ನಾನು ಬಂದು ಭೇಟಿ ಮಾಡುವೆ ಎಂದು ಅವರು ಯಡಿಯೂರಪ್ಪಗೆ ಹೇಳಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಗೆ ಆಗಮಿಸಿದ ಯಡಿಯೂರಪ್ಪ ‘ಕಾವೇರಿ’ ನಿವಾಸದಿಂದ ಯಡಿಯೂರಪ್ಪ ಜತೆ ಸಿಎಂ ಬೊಮ್ಮಾಯಿ ಮಲ್ಲೇಶ್ವರಂಲ್ಲಿರುವ ಬಿಜೆಪಿ ಕಚೇರಿಗೆ ಆಗಮಿಸಿದ್ದಾರೆ. ನಳೀನ್ ಕಟೀಲು, ಸಚಿವರಾದ ಎಸ್.ಟಿ.ಸೋಮಶೇಖರ್, ಬಿ.ಸಿ.ಪಾಟೀಲ್ ಜತೆಗಿದ್ದರು.  ಬಿಜೆಪಿ ಕಚೇರಿಯಲ್ಲಿ ಭಾರತ ಮಾತೆ ಫೋಟೋಗೆ ಬಿಎಸ್ ವೈ ಪುಷ್ಪಾರ್ಚನೆ ಮಾಡಿದ್ದಾರೆ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಬಿಎಸ್ವೈಗೆ ಶಾಲು ಹೊದಿಸಿ ಗೌರವಿಸಿದ್ದಾರೆ. ಸಚಿವ ಆರ್. ಅಶೋಕ್ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡಾ ಭೇಟಿ ನೀಡಿದ್ದಾರೆ.