AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಲಿನ ಹತಾಶೆ, ಶೂನ್ಯ ನಾಯಕತ್ವದಿಂದಾಗಿ ಬಿಜೆಪಿಗರಿಗೆ ದೃಷ್ಟಿ ದೋಷವಾಗಿದೆ: ಕಾಂಗ್ರೆಸ್​ ವಾಗ್ದಾಳಿ

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಶಾಸಕ ಸಿಟಿ ರವಿ, ರಾಜ್ಯಾಧ್ಯಕ್ಷ ನಳಿನ್​​​ ಕುಮಾರ್ ಕಟೀಲು ಸೇರಿದಂತೆ ಒಟ್ಟು 6 ಜನ ಬಿಜೆಪಿ ನಾಯಕರ ಫೋಟೋ ಹಂಚಿಕೊಳ್ಳುವ ಮೂಲಕ ಸೋಲಿನ ಹತಾಶೆ, ಶೂನ್ಯ ನಾಯಕತ್ವದಿಂದಾಗಿ ಬಿಜೆಪಿಗರಿಗೆ ದೃಷ್ಟಿ ದೋಷದ ಸಮಸ್ಯೆ ಉಂಟಾಗಿದೆ ಎಂದು ಕಾಂಗ್ರೆಸ್​ ವಾಗ್ದಾಳಿ ಮಾಡಿದೆ.

ಸೋಲಿನ ಹತಾಶೆ, ಶೂನ್ಯ ನಾಯಕತ್ವದಿಂದಾಗಿ ಬಿಜೆಪಿಗರಿಗೆ ದೃಷ್ಟಿ ದೋಷವಾಗಿದೆ: ಕಾಂಗ್ರೆಸ್​ ವಾಗ್ದಾಳಿ
ಕಾಂಗ್ರೆಸ್​ ಹಂಚಿಕೊಂಡಿರುವ ಫೋಟೋ
ಪ್ರಸನ್ನ ಗಾಂವ್ಕರ್​
| Edited By: |

Updated on:Oct 19, 2023 | 8:31 PM

Share

ಬೆಂಗಳೂರು, ಅಕ್ಟೋಬರ್​​​​​ 19: ಕರ್ನಾಟಕದ ಕಲೆಕ್ಷನ್ ಮಾಸ್ಟರ್ (CM) – ಲೂಟಿ ಮಾಡಲು ಪರವಾನಗಿ ಎಂಬ ಸಿಎಂ ಸಿದ್ದರಾಮಯ್ಯ ಫೋಟೋ ಹರಿಬಿಟ್ಟ ಬಿಜೆಪಿಗೆ ಇದೀಗ ಕಾಂಗ್ರೆಸ್ (Congress)​ ತಿರುಗೇಟು ನೀಡಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಶಾಸಕ ಸಿಟಿ ರವಿ, ರಾಜ್ಯಾಧ್ಯಕ್ಷ ನಳಿನ್​​​ ಕುಮಾರ್ ಕಟೀಲು ಸೇರಿದಂತೆ ಒಟ್ಟು 6 ಜನ ಬಿಜೆಪಿ ನಾಯಕರ ಫೋಟೋ ಹಂಚಿಕೊಳ್ಳುವ ಮೂಲಕ ಸೋಲಿನ ಹತಾಶೆ, ಶೂನ್ಯ ನಾಯಕತ್ವದಿಂದಾಗಿ ಬಿಜೆಪಿಗರಿಗೆ ದೃಷ್ಟಿ ದೋಷದ ಸಮಸ್ಯೆ ಉಂಟಾಗಿದೆ ಎಂದು ವಾಗ್ದಾಳಿ ಮಾಡಿದೆ.

ಈ ಕುರಿತಾಗಿ ಟ್ವೀಟ್​ ಮಾಡಿರುವ ಕಾಂಗ್ರೆಸ್​, ಸೋಲಿನ ಹತಾಶೆ, ಶೂನ್ಯ ನಾಯಕತ್ವದಿಂದಾಗಿ ಬಿಜೆಪಿಗರಿಗೆ ದೃಷ್ಟಿ ದೋಷದ ಸಮಸ್ಯೆ ಉಂಟಾಗಿದೆ. ಬಿಜೆಪಿಗರಿಗೆ ಕಣ್ಣು ಕುರುಡಾದ ಕಾರಣ ಬೇರೆಯವರನ್ನು ಕಾಣೆಯಾಗಿದ್ದಾರೆ ಎನ್ನುತ್ತಿದ್ದಾರೆ! ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ತಮ್ಮ ಕುರುಡುತನವನ್ನು ಸರಿಪಡಿಸಿಕೊಳ್ಳಲಿ. ಶೀಘ್ರವೇ ಅಧಿಕಾರ ಕಳೆದುಕೊಂಡ ಹತಾಶೆಯಿಂದ ಹೊರಬರಲಿ, ದೃಷ್ಟಿ ದೋಷ ಸರಿಹೋಗಲಿ ಎಂದು ಹಾರೈಸುತ್ತೇವೆ ಎಂದು ಕಿಡಿಕಾರಿದೆ.

ಕಾಂಗ್ರೆಸ್​ ಟ್ವೀಟ್​​ 

ರಾಜ್ಯಧ್ಯಕ್ಷ ಸ್ಥಾನ ಉಳಿಸಿಕೊಳ್ಳಲಾಗದೇ, ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡು, ಚುನಾವಣೆಯಲ್ಲಿ ಸೋತು, ವಿರೋಧ ಪಕ್ಷದ ನಾಯಕ ಸ್ತಾನ ಸಿಗದೇ, ನಾಗಪುರದ ಬುಲಾವ್​ ಬರದೇ ಮತ್ತು ಪಕ್ಷದಲ್ಲಿ ಸ್ಥಾಸವೇ ಸಿಗದೇ ಈ ಎಲ್ಲಾ ಹತಾಶೆಯಿಂದ ಕುರುಡಾಗಿದ್ದಾರೆ. ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕುರುಡಾಗಿ ಓಡಾಡುತ್ತಿರುವ ಬಿಜೆಪಿ ನಾಯಕರು ಸಿಕ್ಕರೆ ತಕ್ಷಣ ಮಿಂಟೋ ಕಣ್ಣಿನ  ಆಸ್ಪತ್ರೆಗೆ ಸೇರಿಸಬೇಕು ಎಂದು ಕಾಂಗ್ರೆಸ್​ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದೆ.

ಇದನ್ನೂ ಓದಿ: ಕರ್ನಾಟಕದ ಕಲೆಕ್ಷನ್ ಮಾಸ್ಟರ್: ಲೂಟಿ ಮಾಡಲು ಪರವಾನಗಿ! ಸಿದ್ದರಾಮಯ್ಯ ಫೋಟೋ ಹರಿಬಿಟ್ಟ ಬಿಜೆಪಿ

ಬಿಜೆಪಿ ಮೊದಲು ಸುಳ್ಳುಗಳನ್ನು ಹಬ್ಬಿಸಲು ವಾಟ್ಸಾಪ್ ಯೂನಿವರ್ಸಿಟಿಯನ್ನು ಬಳಸುತ್ತಿತ್ತು, ಈಗ ಪಕ್ಷದ ಅಧಿಕೃತ ಖಾತೆಯಲ್ಲೇ ನಿರ್ಲಜ್ಜತೆಯಿಂದ ಸುಳ್ಳುಗಳನ್ನು ಬಿತ್ತರಿಸುತ್ತಿದೆ. ಬಿಜೆಪಿಯ ಐಟಿ ಸೆಲ್ ಎಂದರೆ ಫೇಕ್ ಫ್ಯಾಕ್ಟರಿ ಎನ್ನುವುದು ಜಗದ್ಕುಖ್ಯಾತ ಸತ್ಯ. ಮಾನ ಮರ್ಯಾದೆ ಇಲ್ಲದೆ, ಕನಿಷ್ಠ ನೈತಿಕ ಪ್ರಜ್ಞೆ ಇಲ್ಲದೆ ಇಂತಹ ನಿರಾಧಾರ ಸುಳ್ಳುಗಳನ್ನು ಹಬ್ಬಿಸುತ್ತಿರುವ ಬಿಜೆಪಿ ಶೀಘ್ರವೇ ಕಾನೂನು ಕ್ರಮ ಎದುರಿಸಲು ಸಿದ್ದರಾಗಲಿ ಎಂದು ಕಾಂಗ್ರೆಸ್​ ಕಿಡಿಕಾರಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:29 pm, Thu, 19 October 23

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!