ಬೆಂಗಳೂರು, ಅಕ್ಟೋಬರ್ 19: ಕರ್ನಾಟಕದ ಕಲೆಕ್ಷನ್ ಮಾಸ್ಟರ್ (CM) – ಲೂಟಿ ಮಾಡಲು ಪರವಾನಗಿ ಎಂಬ ಸಿಎಂ ಸಿದ್ದರಾಮಯ್ಯ ಫೋಟೋ ಹರಿಬಿಟ್ಟ ಬಿಜೆಪಿಗೆ ಇದೀಗ ಕಾಂಗ್ರೆಸ್ (Congress) ತಿರುಗೇಟು ನೀಡಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಶಾಸಕ ಸಿಟಿ ರವಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸೇರಿದಂತೆ ಒಟ್ಟು 6 ಜನ ಬಿಜೆಪಿ ನಾಯಕರ ಫೋಟೋ ಹಂಚಿಕೊಳ್ಳುವ ಮೂಲಕ ಸೋಲಿನ ಹತಾಶೆ, ಶೂನ್ಯ ನಾಯಕತ್ವದಿಂದಾಗಿ ಬಿಜೆಪಿಗರಿಗೆ ದೃಷ್ಟಿ ದೋಷದ ಸಮಸ್ಯೆ ಉಂಟಾಗಿದೆ ಎಂದು ವಾಗ್ದಾಳಿ ಮಾಡಿದೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಸೋಲಿನ ಹತಾಶೆ, ಶೂನ್ಯ ನಾಯಕತ್ವದಿಂದಾಗಿ ಬಿಜೆಪಿಗರಿಗೆ ದೃಷ್ಟಿ ದೋಷದ ಸಮಸ್ಯೆ ಉಂಟಾಗಿದೆ. ಬಿಜೆಪಿಗರಿಗೆ ಕಣ್ಣು ಕುರುಡಾದ ಕಾರಣ ಬೇರೆಯವರನ್ನು ಕಾಣೆಯಾಗಿದ್ದಾರೆ ಎನ್ನುತ್ತಿದ್ದಾರೆ! ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ತಮ್ಮ ಕುರುಡುತನವನ್ನು ಸರಿಪಡಿಸಿಕೊಳ್ಳಲಿ. ಶೀಘ್ರವೇ ಅಧಿಕಾರ ಕಳೆದುಕೊಂಡ ಹತಾಶೆಯಿಂದ ಹೊರಬರಲಿ, ದೃಷ್ಟಿ ದೋಷ ಸರಿಹೋಗಲಿ ಎಂದು ಹಾರೈಸುತ್ತೇವೆ ಎಂದು ಕಿಡಿಕಾರಿದೆ.
ಸೋಲಿನ ಹತಾಶೆ, ಶೂನ್ಯ ನಾಯಕತ್ವದಿಂದಾಗಿ ಬಿಜೆಪಿಗರಿಗೆ ದೃಷ್ಟಿ ದೋಷದ ಸಮಸ್ಯೆ ಉಂಟಾಗಿದೆ!@BJP4Karnataka ಕಣ್ಣು ಕುರುಡಾದ ಕಾರಣ ಬೇರೆಯವರನ್ನು ಕಾಣೆಯಾಗಿದ್ದಾರೆ ಎನ್ನುತ್ತಿದ್ದಾರೆ! ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ತಮ್ಮ ಕುರುಡುತನವನ್ನು ಸರಿಪಡಿಸಿಕೊಳ್ಳಲಿ.
ಶೀಘ್ರವೇ ಅಧಿಕಾರ ಕಳೆದುಕೊಂಡ ಹತಾಶೆಯಿಂದ ಹೊರಬರಲಿ, ದೃಷ್ಟಿ ದೋಷ… pic.twitter.com/FvMpHZBs3e
— Karnataka Congress (@INCKarnataka) October 19, 2023
ರಾಜ್ಯಧ್ಯಕ್ಷ ಸ್ಥಾನ ಉಳಿಸಿಕೊಳ್ಳಲಾಗದೇ, ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡು, ಚುನಾವಣೆಯಲ್ಲಿ ಸೋತು,
ವಿರೋಧ ಪಕ್ಷದ ನಾಯಕ ಸ್ತಾನ ಸಿಗದೇ, ನಾಗಪುರದ ಬುಲಾವ್ ಬರದೇ ಮತ್ತು ಪಕ್ಷದಲ್ಲಿ ಸ್ಥಾಸವೇ ಸಿಗದೇ ಈ ಎಲ್ಲಾ ಹತಾಶೆಯಿಂದ ಕುರುಡಾಗಿದ್ದಾರೆ. ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕುರುಡಾಗಿ ಓಡಾಡುತ್ತಿರುವ ಬಿಜೆಪಿ ನಾಯಕರು ಸಿಕ್ಕರೆ ತಕ್ಷಣ ಮಿಂಟೋ ಕಣ್ಣಿನ ಆಸ್ಪತ್ರೆಗೆ ಸೇರಿಸಬೇಕು ಎಂದು ಕಾಂಗ್ರೆಸ್ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದೆ.
ಇದನ್ನೂ ಓದಿ: ಕರ್ನಾಟಕದ ಕಲೆಕ್ಷನ್ ಮಾಸ್ಟರ್: ಲೂಟಿ ಮಾಡಲು ಪರವಾನಗಿ! ಸಿದ್ದರಾಮಯ್ಯ ಫೋಟೋ ಹರಿಬಿಟ್ಟ ಬಿಜೆಪಿ
ಬಿಜೆಪಿ ಮೊದಲು ಸುಳ್ಳುಗಳನ್ನು ಹಬ್ಬಿಸಲು ವಾಟ್ಸಾಪ್ ಯೂನಿವರ್ಸಿಟಿಯನ್ನು ಬಳಸುತ್ತಿತ್ತು, ಈಗ ಪಕ್ಷದ ಅಧಿಕೃತ ಖಾತೆಯಲ್ಲೇ ನಿರ್ಲಜ್ಜತೆಯಿಂದ ಸುಳ್ಳುಗಳನ್ನು ಬಿತ್ತರಿಸುತ್ತಿದೆ. ಬಿಜೆಪಿಯ ಐಟಿ ಸೆಲ್ ಎಂದರೆ ಫೇಕ್ ಫ್ಯಾಕ್ಟರಿ ಎನ್ನುವುದು ಜಗದ್ಕುಖ್ಯಾತ ಸತ್ಯ. ಮಾನ ಮರ್ಯಾದೆ ಇಲ್ಲದೆ, ಕನಿಷ್ಠ ನೈತಿಕ ಪ್ರಜ್ಞೆ ಇಲ್ಲದೆ ಇಂತಹ ನಿರಾಧಾರ ಸುಳ್ಳುಗಳನ್ನು ಹಬ್ಬಿಸುತ್ತಿರುವ ಬಿಜೆಪಿ ಶೀಘ್ರವೇ ಕಾನೂನು ಕ್ರಮ ಎದುರಿಸಲು ಸಿದ್ದರಾಗಲಿ ಎಂದು ಕಾಂಗ್ರೆಸ್ ಕಿಡಿಕಾರಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:29 pm, Thu, 19 October 23