ಸಿದ್ದರಾಮಯ್ಯಗೆ ಮುಳುವಾಗುತ್ತಾ ಪುತ್ರನ ಆ ಹೇಳಿಕೆ? ಅಷ್ಟಕ್ಕೂ ಯತೀಂದ್ರ ಹೇಳಿದ್ದೇನು?

ವಿಧಾನಸಭಾ ಚುನಾವಣೆಗೂ ಮುನ್ನ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್ ಮತ್ತು ಕುಕ್ಕರ್‌ಗಳನ್ನು ಹಂಚಿರುವುದಾಗಿ ಹೇಳಿರುವ ವಿಡಿಯೋ ವೈರಲ್ ಆಗಿದ್ದು ವಿವಾದಕ್ಕೆ ಕಾರಣವಾಗಿದೆ. ಡಾ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಬೆನ್ನಲ್ಲೇ ಬಿಜೆಪಿ ಅಲರ್ಟ್ ಆಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಪುತ್ರನ ಹೇಳಿಕೆ ಮುಳುವಾಗುತ್ತಾ?

ಸಿದ್ದರಾಮಯ್ಯಗೆ ಮುಳುವಾಗುತ್ತಾ ಪುತ್ರನ ಆ ಹೇಳಿಕೆ? ಅಷ್ಟಕ್ಕೂ ಯತೀಂದ್ರ ಹೇಳಿದ್ದೇನು?
ಯತೀಂದ್ರ, ಸಿದ್ದರಾಮಯ್ಯ
Follow us
ದಿಲೀಪ್​, ಚೌಡಹಳ್ಳಿ
| Updated By: ರಮೇಶ್ ಬಿ. ಜವಳಗೇರಾ

Updated on:Sep 20, 2023 | 9:56 AM

ಬೆಂಗಳೂರು, (ಸೆಪ್ಟೆಂಬರ್ 20): ವಿಧಾನಸಭಾ ಚುನಾವಣೆ (Karnataka Assembly Elections 2023) ಸಂದರ್ಭದಲ್ಲಿ ಕಕ್ಕರ್, ಇಸ್ತ್ರಿಪೆಟ್ಟಿಗೆ ಹಂಚಿದ್ದರಿಂದ ಸಿದ್ದರಾಮಯ್ಯ(Siddaramaiah) ಗೆಲುವು ಸಾಧಿಸಿದ್ದಾರೆ ಎಂಬ ಅವರ ಪುತ್ರ ಯತೀಂದ್ರ (yatindra Siddaramaiah) ಹೇಳಿಕೆ ಇದೀಗ ಭಾರೀ ವೈರಲ್ ಆಗಿದೆ. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಇದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕುತ್ತು ತರುತ್ತಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಯಾಕಂದ್ರೆ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯನ್ನು ಅಸ್ತ್ರವನ್ನಾಗಿಸಿಕೊಂಡು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಲು ಮುಂದಾಗಿದೆ.

ಮತದಾರರಿಗೆ ಆಮಿಷವೊಡಿದ್ದನ್ನು ಸಮಾರಂಭವೊಂದರಲ್ಲಿ ಖುದ್ದು ಸಿಎಂ‌ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಬಹಿರಂಗಪಡಿಸಿದ್ದಾರೆ. ಇದರ ಬೆನ್ನಲ್ಲೇ ಅಲರ್ಟ್ ಆದ ಬಿಜೆಪಿ ನಾಯಕರು, ಈ ಹೇಳಿಕೆ ಆಧರಿಸಿಯೇ ಚುನಾವಣಾ ಆಯೋಗಕ್ಕೆ ದೂರು ಕೊಡಲು ಸಜ್ಜಾಗಿದ್ದಾರೆ. ಚುನಾವಣಾ ವೇಳೆ ಮತದಾರರಿಗೆ ಹಣ, ಮದ್ಯ, ಉಡುಗೊರೆ ನೀಡುವಂತಿಲ್ಲ. ಒಂದು ವೇಳೆ ಉಡುಗೊರೆ ನೀಡಿದ್ದೇ ನಿಜವಾದರೆ ಅದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಅಡಿ ಪ್ರಕರಣ ದಾಖಲಿಸಬಹುದು. ಈ ಹಿನ್ನೆಲೆಯಲ್ಲಿ ಬಿಜೆಪಿ ದೂರು ನೀಡಲು ಮುಂದಾಗಿದೆ. ಇದಕ್ಕೆ ಬೇಕಾದ ದಾಖಲೆಗಳುನ್ನು ರೆಡಿ ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿದಬಂದಿದೆ.

ಇದನ್ನೂ ಓದಿ: ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು: ಬಸವರಾಜ ಬೊಮ್ಮಾಯಿ

ಅಷ್ಟಕ್ಕೂ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು?

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ವರುಣ ಕ್ಷೇತ್ರದಲ್ಲಿ ಮಡಿವಾಳ ಸಮುದಾಯದವರನ್ನು ಸಂಘಟನೆ ಮಾಡಬೇಕೆಂದು, ಸಾವಿರಾರು ಜನರನ್ನು ಸೇರಿಸಿ ಅವರೆಲ್ಲರಿಗೂ ಕುಕ್ಕರ್ ಮತ್ತು ಇಸ್ತ್ರಿಪೆಟ್ಟಿಗೆಗಳನ್ನು ನೀಡಲಾಗಿತ್ತು. ಆ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ನಂಜಪ್ಪ ನನ್ನ ತಂದೆ ಸಿದ್ದರಾಮಯ್ಯ ಅವರ ಕೈಯಿಂದಲೇ ಅವುಗಳನ್ನು ಕೊಡಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ, ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ನಂಜನಗೂಡಿನಲ್ಲಿ ಶುಕ್ರವಾರ ನಡೆದ ‌ತಾಲ್ಲೂಕು ಮಡಿವಾಳರ ಸಮುದಾಯ ಭವನದ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ನೀಡಿರುವ ಈ ಹೇಳಿಕೆಯು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

ಇನ್ನು ತಮ್ಮ ಹೇಳಿಕೆ ವೈರಲ್ ಆಗುತ್ತಿದ್ದಂತೆಯೇ ಖಾಸಗಿ ಮಾಧ್ಯಮವೊಂದಕ್ಕೆ ಸ್ಪಷ್ಟನೆ ನೀಡಿರುವ ಯತೀಂದ್ರ ಸಿದ್ದರಾಮಯ್ಯ, ವರುಣಾ ಕ್ಷೇತ್ರದಲ್ಲಿ ನಡೆದ ಜಿಲ್ಲಾ ಸಮಾವೇಶದ ಸಂದರ್ಭದಲ್ಲಿ ಮಡಿವಾಳ ಸಮುದಾಯದ ಪದಾಧಿಕಾರಿಗಳು ಉಡುಗೊರೆಗಳನ್ನು ವಿತರಿಸಿದ್ದಾರೆ. ಪಕ್ಷದಿಂದ ಅಥವಾ ನಮ್ಮ ಕಡೆಯಿಂದ ನೀಡಿಲ್ಲ, ಈ ವೇಳೆ ನಮ್ಮ ತಂದೆ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸಲು ನಿರ್ಧರಿಸಿದ್ದರು. ನನಗೆ ಸಾಧ್ಯವಾಗದ ಕಾರಣ ನನ್ನ ತಂದೆ ಸಮಾವೇಶಕ್ಕೆ ಹಾಜರಿದ್ದರು ಎಂದು ಸ್ಪಷ್ಟನೆ ನೀಡಿದ್ದಾರೆ.

ಬಸವರಾಜ ಬೊಮ್ಮಾಯಿ ಹೇಳಿದ್ದೇನು?

ಯತೀಂದ್ರ ಅವರ ಹೇಳಿಕೆಯನ್ನು ಚುನಾವಣಾ ಆಯೋಗ ಗಮನಿಸಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಅರ್ಜಿ ವಿಚಾರಣೆ ಬಾಕಿ ಇದೆ. ಯತೀಂದ್ರ ಅವರ ಹೇಳಿಕೆಯನ್ನು ಸಾಬೀತುಪಡಿಸಲು ಪುರಾವೆಗಳಿದ್ದರೆ, ಇಸಿಐ ಅದನ್ನು ಗಂಭೀರವಾಗಿ ಪರಿಗಣಿಸಬೇಕು, ಉಚಿತ ವಿತರಣೆಯು ಗಂಭೀರ ಅಪರಾಧವಾಗಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಹಾಗಾದ್ರೆ, ಮಗ ಬಾಯಿತಪ್ಪಿ ಆಡಿದ ಮಾತು ಸಿದ್ದರಾಮಯ್ಯಗೆ ಸಮಸ್ಯೆಯಾಗುತ್ತಾ? ಸಿಎಂಗೆ ಮುಳುವಾಗುತ್ತಾ ಮಗನ ಹೇಳಿಕೆ? ಎನ್ನುವುದನ್ನು ಕಾದುನೋಡಬೇಕಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:54 am, Wed, 20 September 23

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್