AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನ 66 ಶಾಸಕರ ಪಟ್ಟಿ ಸಿದ್ಧಪಡಿಸಿದ ಬಿಜೆಪಿ: ಆಪರೇಷನ್​ ಕಮಲದ ಬಗ್ಗೆ ‘ಕೈ’ ನಾಯಕರಿಗೆ ಸುಳಿವು?

Karnataka Politics and Operation Kamala: ಆಪರೇಷನ್​ ಕಮಲಕ್ಕೆ ಸಿದ್ಧತೆ ನಡೆಸಿರುವ ಬಿಜೆಪಿ, 66 ಮಂದಿ ಕಾಂಗ್ರೆಸ್​​ ಶಾಸಕರ ಪಟ್ಟಿ ಸಿದ್ಧ ಮಾಡಿಕೊಂಡಿದೆಯಂತೆ. ಅಸಮಾಧಾನ ಹೊಂದಿರುವ ಶಾಸಕರನ್ನು ಸೆಳೆಯಲು ಬಿಜೆಪಿ ಭರ್ಜರಿ ಪ್ಲ್ಯಾನ್ ಮಾಡಿಕೊಂಡಿದೆ ಎನ್ನಲಾಗಿದೆ. ಕಾಂಗ್ರೆಸ್​ನ ಕೆಲವು ನೂತನ ಶಾಸಕರು ಈ ಕುರಿತು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​​​ಗೆ ಸುಳಿವು ನೀಡಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್​ನ 66 ಶಾಸಕರ ಪಟ್ಟಿ ಸಿದ್ಧಪಡಿಸಿದ ಬಿಜೆಪಿ: ಆಪರೇಷನ್​ ಕಮಲದ ಬಗ್ಗೆ ‘ಕೈ’ ನಾಯಕರಿಗೆ ಸುಳಿವು?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 31, 2023 | 7:56 PM

Share

ಬೆಂಗಳೂರು, ಅಕ್ಟೋಬರ್ 31: ಲೋಕಸಭೆ ಚುನಾವಣೆಗೂ (Lok Sabha Election) ಮುನ್ನ ರಾಜ್ಯ ರಾಜಕಾರಣದಲ್ಲಿ ಒಂದು ಅಚ್ಚರಿ ಕಾದಿದೆ ಎಂಬ ಊಹಾಪೋಹಗಳ ನಡುವೆ ಮತ್ತೊಂದು ಸ್ಫೋಟಿ ಮಾಹಿತಿ ಹೊರಬಿದ್ದಿದೆ. ಆಪರೇಷನ್ ಕಮಲದ (Operation Kamala) ಬಗ್ಗೆ ಕೆಲ ಕಾಂಗ್ರೆಸ್ ಶಾಸಕರು (Congress MLAs) ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಸುಳಿವು ನೀಡಿ ಶಾಕ್ ಕೊಟ್ಟಿದ್ದಾರೆ. ಸೋಮವಾರವಷ್ಟೇ, ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಮಹಾರಾಷ್ಟ್ರ ಸರ್ಕಾರ ಮಾದರಿಯಲ್ಲಿ ಪತನವಾಗಲಿದೆ ಎಂದು ಹೇಳಿದ್ದರು. ಜೊತೆಗೆ, ಕಾಂಗ್ರೆಸ್ ನಾಯಕರು ಕೂಡ ಆಪರೇಷನ್ ಕಮಲಕ್ಕೆ ತಂತ್ರ ಹೆಣೆಯಲಾಗುತ್ತಿದೆ ಎಂಬುದಾಗಿ ಬಹಿರಂಗವಾಗಿಯೇ ಹೇಳಿದ್ದಾರೆ.

ಇದರ ಬೆನ್ನಲ್ಲೇ ಆಪರೇಷನ್​ ಕಮಲಕ್ಕೆ ಸಿದ್ಧತೆ ನಡೆಸಿರುವ ಬಿಜೆಪಿ, 66 ಮಂದಿ ಕಾಂಗ್ರೆಸ್​​ ಶಾಸಕಟ ಪಟ್ಟಿ ಸಿದ್ಧ ಮಾಡಿಕೊಂಡಿದೆಯಂತೆ. ಅಸಮಾಧಾನ ಹೊಂದಿರುವ ಶಾಸಕರನ್ನು ಸೆಳೆಯಲು ಬಿಜೆಪಿ ಭರ್ಜರಿ ಪ್ಲ್ಯಾನ್ ಮಾಡಿಕೊಂಡಿದೆ ಎನ್ನಲಾಗಿದೆ. ಕಾಂಗ್ರೆಸ್​ನ ಕೆಲವು ನೂತನ ಶಾಸಕರು ಈ ಕುರಿತು ಸುಳಿವು ನೀಡಿದ್ದಾರೆ. ಕಾಂಗ್ರೆಸ್​ನ 66 ಶಾಸಕರನ್ನು ಸೆಳೆಯಲು ಬಿಜೆಪಿಯಿಂದ ಭಾರಿ ಸಿದ್ಧತೆ ನಡೆದಿದೆ ಎಂಬ ಸುಳಿವಿನ ಬೆನ್ನಲ್ಲೇ, ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿಕೆ ಶಿವಕುಮಾರ್​​​ಗೆ ಅಲರ್ಟ್ ಆಗಿರಲು ಸೂಚನೆ ಕೊಟ್ಟಿದ್ದಾರೆ.

ಬಿಜೆಪಿ ಆಪರೇಷನ್ ಬಗ್ಗೆ ಎಚ್ಚೆತ್ತುಕೊಳ್ಳಲು ಕೈ ಶಾಸಕರು ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ಗೆ ಸಲಹೆ ನೀಡಿದ್ದಾರೆ. ಅಸಮಾಧಾನಿತರನ್ನೇ ಸೆಳೆಯಲು ಬಿಜೆಪಿ ಪ್ರಯತ್ನಿಸ್ತಿದೆ. ಕ್ಷೇತ್ರಕ್ಕೆ ಅನುದಾನ ಸಿಗದೇ ಬೇಸರ ಹೊಂದಿದವರು, ವರ್ಗಾವಣೆಯಲ್ಲಿ ಬೇಸರದಲ್ಲಿರುವವರನ್ನ ಸೆಳೆಯಲು ತಂತ್ರ ರೂಪಿಸಿದೆ. 10ಕ್ಕೂ ಹೆಚ್ಚು ಹೊಸ ಶಾಸಕರನ್ನ ಈಗಾಗಲೇ ಬಿಜೆಪಿ ಭೇಟಿ ಮಾಡಿದೆ. ಅದ್ರಲ್ಲೂ ಒಂದು ತಂಡ ಅಭಿವೃದ್ಧಿ ನೆಪದಲ್ಲಿ ಭೇಟಿ ಮಾಡುತ್ತಿದೆ. ಹೀಗೆ ಬಿಜೆಪಿಗರು ಶಾಸಕರನ್ನು ಭೇಟಿಯಾಗ್ತಿರುವ ಬಗ್ಗೆ ಸಿಎಂ, ಡಿಸಿಎಂಗೆ ಶಾಸಕರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ಮಾದರಿಯಲ್ಲಿ ಸರ್ಕಾರ ಪತನ: ಡಿಕೆ ಶಿವಕುಮಾರ್ ಶೀಘ್ರವೇ ಮಾಜಿ: ಹೊಸ ಬಾಂಬ್ ಸಿಡಿಸಿದ ಜಾರಕಿಹೊಳಿ

ಸರ್ಕಾರ ಬಂದು ಕೇವಲ ಐದು ತಿಂಗಳಲ್ಲಿ ಆಪರೇಷನ್ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ. ಸದ್ಯದ ಮಟ್ಟಿಗೆ ಇದು ಅಷ್ಟು ಪರಿಣಾಮ ಬೀರದೇ ಇರಬಹುದು. ಆದರೆ ಈ ವಿಚಾರವನ್ನು ಕಾಂಗ್ರೆಸ್ ನಾಯಕರು ಸುಲಭವಾಗಿ ಬಿಡದೇ, ಈ ಬೆಳವಣಿಗೆಗಳ ಮೇಲೆ ಒಂದು ಕಣ್ಣು ಇಟ್ಟೇ ಇಟ್ಟಿದ್ದಾರೆ ಅಂತ ಹೇಳಲಾಗ್ತಿದೆ. ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಮತ್ತಷ್ಟು ರಾಜಕೀಯ ಮೇಲಾಟಗಳು ನಡೆಯಬಹುದು ಎಂಬುದು ರಾಜಕೀಯ ಪಂಡಿತರ ಅಭಿಪ್ರಾಯವಾಗಿದೆ.

ರಾಜಕಾರಣಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:50 pm, Tue, 31 October 23

Follow Us
TV9 Web
TV9 Web

TV9 Kannada

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್