BJP President : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅಧಿಕಾರಾವಧಿ ವಿಸ್ತರಣೆ
ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ಮತ್ತೆ ಪಕ್ಷದ ಅಧ್ಯಕ್ಷೀಯ ಸ್ಥಾನದ ಅವಧಿ ವಿಸ್ತರಣೆಯಾಗಿದ್ದು, ಜೂನ್ 2024 ರವರೆಗೆ ಪಕ್ಷದ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿದೆ.
ದೆಹಲಿ: ಬಿಜೆಪಿ ಅಧ್ಯಕ್ಷ (BJP President) ಜೆಪಿ ನಡ್ಡಾ (JP Nadda) ಅವರ ಮತ್ತೆ ಪಕ್ಷದ ಅಧ್ಯಕ್ಷೀಯ ಸ್ಥಾನದ ಅವಧಿ ವಿಸ್ತರಣೆಯಾಗಿದ್ದು, ಜೂನ್ 2024 ರವರೆಗೆ ಪಕ್ಷದ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಈ ಬಗ್ಗೆ ಗೃಹ ಸಚಿವ ಅಮಿತ್ ತಿಳಿಸಿದ್ದಾರೆ. ದೆಹಲಿಯ ಎರಡು ದಿನಗಳ ಬಿಜೆಪಿ (BJP) ಕೇಂದ್ರ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಸಭೆಯಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ಕುರಿತು ಚರ್ಚೆ ಮಾಡಲಾಗಿದೆ. ಜೊತೆಗೆ ಮುಂಬರುವ ಚುನಾವಣೆಗಳ ಸಿದ್ಧತೆಗಳ ಬಗ್ಗೆಯು ಚರ್ಚೆ ನಡೆಸಲಾಗಿದೆ. ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸೇರಿ ಹಲವರು ಉಪಸ್ಥಿತರಿದ್ದರು.
ಇದನ್ನು ಓದಿ: JP Nadda Karnataka Visit: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನಾಳೆ ಶನಿವಾರ ಕರ್ನಾಟಕಕ್ಕೆ ಆಗಮನ
ಇದೀಗ ಈ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. 2024ರ ಜೂನ್ವರೆಗೆ ಅಧ್ಯಕ್ಷ ಜೆ.ಪಿ.ನಡ್ಡಾ ಅವಧಿ ವಿಸ್ತರಣೆ ಮಾಡಲಾಗಿದ್ದು, ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ ಮಾಡಿದ್ದಾರೆ. ನಡ್ಡಾ ನೇತೃತ್ವದಲ್ಲೇ 2024ರ ಲೋಕಸಭಾ ಚುನಾವಣೆ ಎದುರಿಸುತ್ತೇವೆ. ಈ ಮೂಲಕ ಜೆ.ಪಿ.ನಡ್ಡಾ ನೇತೃತ್ವದಲ್ಲಿ ಪಕ್ಷ ಸಂಘಟನೆ ಬಲವರ್ಧನೆಯಾಗಿದೆ ಎಂದು ಹೇಳಿದ್ದಾರೆ.
ನಡ್ಡಾ ನೇತೃತ್ವದಲ್ಲಿ ಹಲವು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. 2019ರ ಚುನಾವಣೆಯಲ್ಲಿ ಗೆದ್ದ ಸ್ಥಾನಕ್ಕಿಂತ ಹೆಚ್ಚು ಗೆಲ್ಲುತ್ತೇವೆ ಎಂಬ ಭರವಸೆ ಇದೆ ಎಂದು ಹೇಳಲಾಗಿದೆ. 2024ರ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದು ಅಧಿಕಾರಕ್ಕೆ ಬರ್ತೇವೆ, ನರೇಂದ್ರ ಮೋದಿ ಮತ್ತೆ ಪ್ರಧಾನಮಂತ್ರಿ ಆಗುತ್ತಾರೆ ಎಂದು ಅಮಿತ್ ಶಾ ಹೇಳಿದ್ದಾರೆ.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:08 pm, Tue, 17 January 23