ರಾಜ್ಯ ಸರ್ಕಾರದ ವಿರುದ್ಧ ಆ. 23ರಂದು ನಿಗದಿಯಾಗಿದ್ದ ಬಿಜೆಪಿ ಪ್ರತಿಭಟನೆ ಮುಂದೂಡಿಕೆ, ಹೊಸ ದಿನಾಂಕ ಇಲ್ಲಿದೆ
ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಆಗಸ್ಟ್ 23 ರಂದು ಪ್ರತಿಭಟನೆ ಮಾಡಲು ನಿರ್ಧರಿಸಿದ್ದರು. ಆದರೆ ಇಂದು (ಆ.21) ರಂದು ನಡೆದ ಕೋರ್ ಕಮಿಟಿಯಲ್ಲಿ ಸಭೆಯಲ್ಲಿ ನಿಗದಿಯಾಗಿದ್ದ ಪ್ರತಿಭಟನೆಯನ್ನು ಆ. 28ಕ್ಕೆ ಮುಂದೂಡಿದ್ದಾರೆ.
ಬೆಂಗಳೂರು: ರಾಜ್ಯ ಕಾಂಗ್ರೆಸ್ (Congress) ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ (BJP) ನಾಯಕರು ಆಗಸ್ಟ್ 23 ರಂದು ಪ್ರತಿಭಟನೆ ಮಾಡಲು ನಿರ್ಧರಿಸಿದ್ದರು. ಆದರೆ ಇಂದು (ಆ.21) ರಂದು ನಡೆದ ಕೋರ್ ಕಮಿಟಿಯಲ್ಲಿ ಸಭೆಯಲ್ಲಿ ನಿಗದಿಯಾಗಿದ್ದ ಪ್ರತಿಭಟನೆಯನ್ನು ಆ. 28 ಕ್ಕೆ ಮುಂದೂಡಿದ್ದಾರೆ. ಅಲ್ಲದೇ ಸೆಪ್ಟೆಂಬರ್ 8ರೊಳಗೆ ಜಿಲ್ಲಾವಾರು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.
ಬಿಜೆಪಿಯ ಹಾಲಿ ಮತ್ತು ಮಾಜಿ ಶಾಸಕರು ಕಾಂಗ್ರೆಸ್ ಕಡೆ ಮುಖ ಮಾಡುತ್ತಿರುವುದರಿಂದ ಬಿಜೆಪಿಯಲ್ಲಿ ತಳಮಳ ಸೃಷ್ಟಿಯಾಗಿದೆ. ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಇನ್ನೊಂದು ಕಡೆ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಕಾಂಗ್ರೆಸ್‌ಗೆ ವಾಪಸಾಗಲು ಸದ್ದಿಲ್ಲದೆ ಪ್ರಯತ್ನ ಆರಂಭಿಸಿದ್ದಾರೆ.
ಈ ಮಧ್ಯೆ ಲೋಕಪಯೋಗಿ ಸಚಿವ ರಮೇಶ್ ಜಾರಕಿಹೊಳಿ ಅವರು ಬಿಜೆಪಿ ಹಾಗೂ ಜೆಡಿಎಸ್‌ನ 20 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದರು. ಈ ಎಲ್ಲ ಬೆಳವಣಿಗೆಗಳಿಂದ ಎಚ್ಚೆತ್ತುಕೊಂಡಿರುವ ಬಿಜೆಪಿ ತನ್ನ ಮುಖಂಡರನ್ನು ಹಿಡಿದಿಟ್ಟುಕೊಳ್ಳಲು ಇಂದು (ಆ.21) ಕೋರ್ ಕಮಿಟಿ ಸಭೆ ನಡೆಸಿದೆ.
ಇದನ್ನೂ ಓದಿ: ಬಿಜೆಪಿಯತ್ತ ಮುಖ ಮಾಡಿದ ಅಖಂಡ ಶ್ರೀನಿವಾಸ್ ಮೂರ್ತಿ, ಇತ್ತ ಡಿಕೆ ಶಿವಕುಮಾರ್ ಭೇಟಿಯಾದ ಬಿಜೆಪಿ ಹಿರಿಯ ನಾಯಕ
ಸಭೆಯಲ್ಲಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್.ಯಡಿಯೂರಪ್ಪ, ಬಸವ ರಾಜ ಬೊಮ್ಮಾಯಿ, ಡಿ.ವಿ. ಸದಾನಂದಗೌಡ, ಮಾಜಿ ಉಪಮುಖ್ಯ ಮಂತ್ರಿಗಳಾದ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಡಾ.ಸಿ.ಎನ್. ಅಶ್ವತ್ಥನಾರಾಯಣ, ಗೋವಿಂದ ಕಾರಜೋಳ, ಮಾಜಿ ಸಚಿವ ಸಿ.ಟಿ. ರವಿ ಇತರರು ಪಾಲ್ಗೊಂಡಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:06 pm, Mon, 21 August 23